Advertisement
ವಿದ್ಯುತ್ ಸಂಪರ್ಕ ಪಡೆಯುವುದಕ್ಕೆ ಓಸಿ ಕಡ್ಡಾಯ ಎಂಬ ನಿಯಮವನ್ನು ತೆಗೆದು ಹಾಕಲಾಗಿದ್ದು, ಈ ಸಂಬಂಧ ನಗರಾಭಿವೃದ್ಧಿ ಇಲಾಖೆ ಹೊರಡಿಸಿದ್ದ ತಿದ್ದುಪಡಿ ಆದೇಶಕ್ಕೆ ಶುಕ್ರವಾರ ರಾತ್ರಿ ರಾಜ್ಯಪತ್ರ ಹೊರಡಿಸಲಾಗಿದೆ. ನಿನ್ನೆಯಿಂದಲೇ ಹೊಸ ಆದೇಶ ಜಾರಿಗೆ ಬರಲಿದೆ.
Related Articles
Advertisement
ಕಳೆದ ಐದು ವರ್ಷಗಳಿಂದ ಈ ಸಮಸ್ಯೆ ಬೆಂಗಳೂರಿನ ನಾಗರಿಕರನ್ನು ಕಾಡುತ್ತಿತ್ತು. ಬಿಬಿಎಂಪಿ ಹಾಗೂ ಇಂಧನ ಇಲಾಖೆಯ ಈ ಧೋರಣೆ ಬಗ್ಗೆ ಜನರು ಆಕ್ರೋಶ ವ್ಯಕ್ತಪಡಿಸಿದ್ದರು. ಬಿಜೆಪಿಯ ಬೆಂಗಳೂರು ಶಾಸಕರು ಇಂಧನ ಸಚಿವ ವಿ.ಸುನೀಲ್ ಕುಮಾರ್ ಅವರನ್ನು ಭೇಟಿ ಮಾಡಿ ನಿಯಮ ಬದಲಾವಣೆ ಮಾಡುವಂತೆ ಮನವಿ ಸಲ್ಲಿಸಿದ್ದರು. ಕೈಗಾರಿಕೆ ಇಲಾಖೆ ಹಾಗೂ ಕಾಸಿಯಾ ಸಂಸ್ಥೆ ಕೂಡಾ ನಿಯಮ ಬದಲಾವಣೆ ಕೋರಿತ್ತು. ಈ ಹಿನ್ನೆಲೆಯಲ್ಲಿ ಸಾಧ್ಯಾಸಾಧ್ಯತೆ ಪರಿಶೀಲನೆಗೆ ಕ್ರಮ ಕೈಗೊಳ್ಳುವಂತೆ ಸುನೀಲ್ ಕುಮಾರ್ ಅವರು ಸಿಎಂ ಬಸವರಾಜ್ ಬೊಮ್ಮಾಯಿ ಅವರ ಜತೆ ಚರ್ಚೆ ನಡೆಸಿದ್ದರು. ನಂತರ ಕೆಇಆರ್ ಸಿಗೆ ಪತ್ರ ಬರೆಯಲಾಗಿತ್ತು. ಈ ಬಗ್ಗೆ ಸಾರ್ವಜನಿಕ ಅಹವಾಲು ಸ್ವೀಕರಿಸಿದ ಆಯೋಗ ಹೊರಡಿಸಿದ ಆದೇಶ ಈಗ ರಾಜ್ಯಪತ್ರದ ಮೂಲಕ ಅಧಿಕೃತಗೊಂಡಿದೆ. ಇನ್ನುಮುಂದೆ ಗುರುತಿನ ಚೀಟಿ ಹಾಗೂ ಸ್ವತ್ತಿನ ಹಕ್ಕುಪತ್ರ ಇದ್ದರೆ ವಿದ್ಯುತ್ ಸಂಪರ್ಕ ಪಡೆಯಬಹುದಾಗಿದೆ.