ದಾವಣಗೆರೆ: ಕೋವಿಡ್ ಒಮಿಕ್ರಾನ್ ರೂಪಾಂತರಿ ಬಗ್ಗೆ ರಾಜ್ಯ ಸರ್ಕಾರ ತುರ್ತು ಕ್ರಮ ಕೈಗೊಳ್ಳುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊರ ದೇಶಗಳಿಂದ ಬಂದವರನ್ನ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ದಕ್ಷಿಣ ಆಫ್ರಿಕಾದ ಪ್ರವಾಸಿ ಸ್ವಾಬ್ ಸ್ಯಾಂಪಲ್ ವಿಭಿನ್ನವಾಗಿದೆ. ಸ್ವಾಬನ್ನು ಜಿನೋಮ್ ಸೀಕ್ವೆನ್ಸ್ ಗೆ ಐಸಿಎಂಆರ್ ಕಳುಹಿಸಿಲಾಗಿದೆ. ವರದಿ ನಿರೀಕ್ಷೆಯಲ್ಲಿದ್ದೇವೆ ಎಂದ ಅವರು ಕೇರಳದಿಂದ ಬಂದ ಪ್ರತಿಯೊಬ್ಬರನ್ನು ಕೋವಿಡ್ ಟೆಸ್ಟ್‌ಗೆ ಒಳಪಡಿಸಲಾಗುತ್ತಿದೆ ಎಂದು ಹೇಳಿದರು.
ಲಾಕ್‌ಡೌನ್ ಬಗ್ಗೆ ಯಾವುದೇ ಪ್ರಸ್ತಾವನೆಯೂ, ಪ್ರಶ್ನೆಯೂ ಇಲ್ಲ. ಜನ ಆತಂಕ ಪಡುವ ಅಗತ್ಯವಿಲ್ಲ. ನಾವು ಈಗ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುತ್ತಿದ್ದೇವೆ. ಕೋವಿಡ್ ಬಗ್ಗೆ ಭಯಪಡುವ ಅಗತ್ಯವಿಲ್ಲ. ಎಚ್ಚರಿಕೆ ವಹಿಸಬೇಕು. ಕೋವಿಡ್ ನಿಯಮವಳಿ ಪಾಲನೆ ಪಾಲಿಸಬೇಕು ಎಂದು ಸಿಎಂ ತಿಳಿಸಿದರು.
ಇದನ್ನೂ ಓದಿ:ಒಮಿಕ್ರಾನ್ ಎಫೆಕ್ಟ್: ಹಲವು ದೇಶಗಳಲ್ಲಿ ಗಡಿ ಬಂದ್, ಎಷ್ಟು ದೇಶಗಳಲ್ಲಿ ವೈರಸ್ ಪತ್ತೆಯಾಗಿದೆ?
ಆರೋಗ್ಯ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ಕೊಡುವ ಬಗ್ಗೆ ಕೇಂದ್ರ ಸರ್ಕಾರ ನಿರ್ಧಾರ ಕೈಗೊಳ್ಳಬೇಕು. ಈ ಬಗ್ಗೆ ನಾವು ನಿರ್ಧಾರ ಕೈಗೊಳ್ಳಲು ಆಗುವುದಿಲ್ಲ ಎಂ ಸಿಎಂ, ಶಾಲಾ ಕಾಲೇಜುಗಳಲ್ಲಿ ಕೋವಿಡ್ ಬಗ್ಗೆ ನಿಗಾ ವಹಿಸಲು ಸೂಚಿಸಿದ್ದೇವೆ. ಶಾಲಾ ಕಾಲೇಜಿಗೆ ಲಾಕ್ ಡೌನ್ ಇಲ್ಲ. ಎಲ್ಲರೂ ಕೋವಿಡ್ ನಿಯಮಾವಳಿ ಪಾಲಿಸುವುದು ಕಡ್ಡಾಯ ಎಂದು ತಿಳಿಸಿದರು