Advertisement

ಶಾಲಾರಂಭಕ್ಕೆ ಗ್ರೀನ್ ಸಿಗ್ನಲ್, ನೈಟ್ ಕರ್ಫ್ಯೂ ರದ್ದು: ಹೊಸ ನಿಯಮ ಪ್ರಕಟಿಸಿದ ರಾಜ್ಯ ಸರ್ಕಾರ

03:35 PM Jan 29, 2022 | Team Udayavani |

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್ ಕಾರಣದಿಂದ ಮುಚ್ಚಿದ ಶಾಲೆಗಳನ್ನು ಇನ್ನು ತೆರೆಯಬಹುದು ಎಂದು ರಾಜ್ಯ ಸರ್ಕಾರ ಸೂಚಿಸಿದೆ. ಇದರೊಂದಿಗೆ ಜ.31ರ ಬಳಿಕ ನೈಟ್ ಕರ್ಫ್ಯೂವನ್ನು ತೆರವು ಮಾಡಲಾಗಿದೆ.

Advertisement

ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ತಜ್ಞರು, ಅಧಿಕಾರಿಗಳು ಮತ್ತು ಸಚಿವರ ಸಭೆ ನಡೆದಿದ್ದು, ಅದರಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಭೆಯ ಬಳಿಕ ಕಂದಾಯ ಸಚಿವ ಆರ್.ಅಶೊಕ್ ಮಾಹಿತಿ ನೀಡಿದರು.

ಇದನ್ನೂ ಓದಿ:ಏನಿದು ಪ್ರಸವ ನಂತರದ ಖಿನ್ನತೆ? ಯಾವ ವೈದ್ಯರನ್ನು ಸಂಪರ್ಕಿಸಬೇಕು? ಇದಕ್ಕೆ ಚಿಕಿತ್ಸೆ ಏನು?

ನಿಯಮಗಳು

1. ಗುಣಮುಖರಾಗುತ್ತಿರುವವರ ಪ್ರಮಾಣ ಹೆಚ್ಚಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆಯೂ ಕಡಿಮೆಯಾಗುತ್ತಿದೆ.
2. ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆ ಶೇ. 2ಕ್ಕೆ ಇಳಿದಿದೆ. ಈ ಹಿನ್ನೆಲೆಯಲ್ಲಿ ಈ ಕೆಳಕಂಡ ಕ್ರಮಗಳನ್ನು ಕೈಗೊಳ್ಳಲು ತಜ್ಞರ ಸಭೆಯಲ್ಲಿ ತೀರ್ಮಾನಿಸಲಾಯಿತು.
3. ಜನವರಿ 31 ರಿಂದ ರಾತ್ರಿ ಕರ್ಫ್ಯೂ ರದ್ದು ಪಡಿಸಲು ನಿರ್ಧರಿಸಲಾಗಿದೆ.
4. ಬೆಂಗಳೂರು ನಗರದಲ್ಲಿ ಜನವರಿ 31 ರಿಂದ ಶಾಲೆ, ಕಾಲೇಜುಗಳನ್ನು ತೆರೆಯಲು ತೀರ್ಮಾನಿಸಲಾಯಿತು.
5. ಮೆಟ್ರೋ ರೈಲು ಸೇರಿದಂತೆ ಸಾರ್ವಜನಿಕ ಸಾರಿಗೆ ವ್ಯವಸ್ಥೆಗಳು ತಮ್ಮ ಆಸನ ಸಾಮರ್ಥ್ಯದಷ್ಟೇ ಪ್ರಯಾಣಿಕರೊಂದಿಗೆ ಕಾರ್ಯಾಚರಣೆ ನಡೆಸಬಹುದು.
6. ಪಬ್ ಗಳು, ಕ್ಲಬ್ ಗಳು, ರೆಸ್ಟೋರೆಂಟ್ ಗಳು, ಬಾರ್, ಹೋಟೆಲ್ ಗಳಲ್ಲಿ ಶೇ. 50 ಆಸನ ಸಾಮರ್ಥ್ಯದಡಿ ಕಾರ್ಯ ನಿರ್ವಹಿಸುವ ನಿರ್ಬಂಧವನ್ನು ಹಿಂಪಡೆಯಲಾಗುವುದು.
7. ಸಿನೆಮಾ, ಮಲ್ಟಿಪ್ಲೆಕ್ಸ್, ಥಿಯೇಟರ್ ಗಳು, ರಂಗಮಂದಿರಗಳು, ಆಡಿಟೋರಿಯಂ ಗಳು ಮತ್ತು ಇಂತರ ಸ್ಥಳಗಳಲ್ಲಿ ಶೇ. 50 ರ ಆಸನ ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಿಸಲಿವೆ.
8. ವಿವಾಹ ಸಮಾರಂಭಗಳಿಗೆ ತೆರೆದ ಸ್ಥಳದಲ್ಲಿ 300 ಜನರಿಗೆ ಹಾಗೂ ಮುಚ್ಚಿದ ಸ್ಥಳಗಳಲ್ಲಿ 200 ಜನರಿಗೆ ಅವಕಾಶ.
9. ಸರ್ಕಾರದ ಸಚಿವಾಲಯದಲ್ಲಿ ಶೇ. 50 ರಷ್ಟು ಸಿಬ್ಬಂದಿ ಕಾರ್ಯನಿರ್ವಹಿಸುವುದನ್ನು ರದ್ದು ಪಡಿಸಿ ಶೇ. ನೂರರಷ್ಟು ಸಿಬ್ಬಂದಿ ಕಾರ್ಯನಿರ್ವಹಿಸುವುದು.
10. ಧಾರ್ಮಿಕ ಸ್ಥಳಗಳಲ್ಲಿ ದರ್ಶನ ಹಾಗೂ ಸೇವೆಗೆ ಅವಕಾಶ ನೀಡಲಾಗುವುದು. ಶೇ. 50ರ ಸಾಮರ್ಥ್ಯದಲ್ಲಿ ಪ್ರವೇಶಾವಕಾಶ ಕಲ್ಪಿಸಲಾಗುವುದು.
11. ಎಲ್ಲ ಸಾಮಾಜಿಕ, ಧಾರ್ಮಿಕ ಮತ್ತು ರಾಜಕೀಯ ರ್ಯಾಲಿ, ಧರಣಿ, ಸಮಾವೇಶ, ಪ್ರತಿಭಟನೆಗಳಿಗೆ ಅವಕಾಶವಿಲ್ಲ.
12. ಸ್ವಿಮ್ಮಿಂಗ್ ಪೂಲ್, ಜಿಮ್ ಗಳು ಶೇ. 50 ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸುವುದು.
13. ಸ್ಪೋಟ್ಸ್ ಕಾಂಪ್ಲೆಕ್ಸ್ ಮತ್ತು ಕ್ರೀಡಾಂಗಣಗಳಲ್ಲಿ ಶೇ. 50 ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸುವುದು.
14. ಕೇರಳ, ಮಹಾರಾಷ್ಟ್ರ, ಗೋವಾ ಗಡಿಗಳಲ್ಲಿ ತೀವ್ರ ನಿಗಾ ವಹಿಸುವುದು.
15. ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆಗೆ ಶೇ. 25 ರಷ್ಟು ಹಾಸಿಗೆಗಳನ್ನು ನಿಗದಿಪಡಿಸಲು ನಿರ್ಧರಿಸಲಾಯಿತು.
16. ಕೋವಿಡ್ ಹೊರತು ಪಡಿಸಿ, ಇತರ ಚಿಕಿತ್ಸೆಗಳನ್ನು ಸಮರ್ಪಕವಾಗಿ ಒದಗಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಲಾಯಿತು.

Advertisement

ಜಿಲ್ಲಾಧಿಕಾರಿ ನಿರ್ಧಾರ: ಕೋವಿಡ್​ ನಿಯಮಗಳನ್ನು ಪಾಲಿಸಿ ಶಾಲೆಗಳ ಪುನಾರಂಭಕ್ಕೆ ಅವಕಾಶ ನೀಡಲಾಗಿದೆ. ಶಾಲೆ ಆರಂಭಕ್ಕೆ​ ನಿಯಮ ಪಾಲಿಸುವುದು ಕಡ್ಡಾಯ. ಯಾವುದಾದರೂ ತರಗತಿಯಲ್ಲಿ ಮಕ್ಕಳಿಗೆ ಪಾಸಿಟಿವ್ ಬಂದರೆ, ಅಂತಹ ತರಗತಿ ಮುಚ್ಚಿ ಸ್ಯಾನಿಟೈಸ್ ಮಾಡಲಾಗುವುದು. ಶಾಲೆಗಳಿಗೆ ರಜೆ ವಿಚಾರದಲ್ಲಿ ಜಿಲ್ಲಾಧಿಕಾರಿ ಕ್ರಮೈಗೊಳ್ಳುತ್ತಾರೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next