ಬೆಂಗಳೂರು: ರಾಜ್ಯ ಸರಕಾರ ಬಡವರಿಗೆ ಬಿಪಿಎಲ್ ಕಾರ್ಡ್ ಮರಳಿ ನೀಡಬೇಕು. ಕಾರ್ಡ್ ರದ್ದು ಪ್ರಕ್ರಿಯೆ ನಿಲ್ಲಿಸದಿದ್ದರೆ ರಾಜ್ಯಾದ್ಯಂತ ಸರಕಾರಿ ಕಚೇರಿಗಳಿಗೆ ಬೀಗ ಹಾಕಿ ಪ್ರತಿಭಟಿಸಲಾಗುವುದು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಎಚ್ಚರಿಕೆ ನೀಡಿದ್ದಾರೆ.
ವೃಷಭಾವತಿ ನಗರ, ನಂದಿನಿ ಲೇಔಟ್ಗಳಲ್ಲಿ ಬಿಪಿಎಲ್ ಕಾರ್ಡ್ ರದ್ದುಗೊಂಡ ಕುಟುಂಬದವರನ್ನು ಶಾಸಕರಾದ ಡಾ| ಅಶ್ವತ್ಥನಾರಾಯಣ ಮತ್ತು ಕೆ. ಗೋಪಾಲಯ್ಯ ಅವರೊಂದಿಗೆ ಭೇಟಿ ಮಾಡಿ ಸಮಸ್ಯೆ ಆಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಜನರಿಗೆ ಅನ್ನ ಕೊಡಬೇಕಿದ್ದ ಸರಕಾರ ಅನ್ನಕ್ಕೆ ಕನ್ನ ಹಾಕುವ ಕೆಲಸ ಮಾಡುತ್ತಿದೆ. ಯಾರೂ ಹಸಿವಿನಿಂದ ಸಾಯಬಾರದು ಎಂಬ ಪ್ರಜ್ಞೆ ಸರಕಾರಕ್ಕೆ ಇರಬೇಕು ಎಂದರು.
ಬಿಪಿಎಲ್ ಕಾರ್ಡ್ ಕಳೆದುಕೊಂಡವರು ಯಾರೂ ಶ್ರೀಮಂತ ರಲ್ಲ, ಕಾರಿನಲ್ಲಿ ಓಡಾಡುವುದಿಲ್ಲ. 2 ವರ್ಷದ ಮಗು ಇರುವ ಮಹಿಳೆ ಗಾರ್ಮೆಂಟ್ ಕೆಲಸಕ್ಕೆ ಹೋಗಲು ಆಗುತ್ತಿಲ್ಲ. ಅಂಗವಿಕಲ ವ್ಯಕ್ತಿಯೊಬ್ಬರು ರಸ್ತೆ ಬದಿಯಲ್ಲಿ ಬಜ್ಜಿ ಮಾರಾಟ ಮಾಡುತ್ತಿದ್ದು, ಅನಾರೋಗ್ಯದಿಂದಾಗಿ ಕೆಲಸಕ್ಕೆ ಹೋಗುತ್ತಿಲ್ಲ. ಇಂತಹ ಬಡ ಕುಟುಂಬದ ಜನರ ಮನೆಗೆ ಸಿಎಂ ಸಿದ್ದರಾಮಯ್ಯ ಕನ್ನ ಹಾಕಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
14 ಬಜೆಟ್ ಮಂಡಿಸಿದ ಮುಖ್ಯಮಂತ್ರಿಗೆ ಸಾಮಾನ್ಯ ಪ್ರಜ್ಞೆ ಇಲ್ಲ. ಬ್ಯಾಂಕಿನಲ್ಲಿ ಸಾಲ ಕೇಳಲು ಕೂಡ ಆದಾಯ ತೆರಿಗೆ ವಿವರ ಸಲ್ಲಿಸಬೇಕಾಗುತ್ತದೆ. ಇದನ್ನು ಅರಿಯದೆ ಕಾಂಗ್ರೆಸ್ ಸರಕಾರ, ಮನೆಗೆ ಭೇಟಿ ನೀಡದೆ ರೇಷನ್ ಕಾರ್ಡ್ಗಳನ್ನು ರದ್ದುಪಡಿಸಿದೆ. ಇನ್ನೂ 14 ಲಕ್ಷ ಕಾರ್ಡ್ಗಳನ್ನು ರದ್ದುಪಡಿಸಲಾಗುತ್ತದೆ. ಇದಕ್ಕೂ ಮುನ್ನ ಒಂದು ನೋಟಿಸ್ ನೀಡಿ, ಮಾಹಿತಿ ಪಡೆಯಬಹುದಿತ್ತು. ಎಲ್ಲರೂ ಆದಾಯ ತೆರಿಗೆ ಪಾವತಿಸುತ್ತಿದ್ದಾರೆ ಎಂದು ಕಣ್ಣಿಲ್ಲದ ಸರಕಾರ ಹೇಳಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಅಭಿವೃದ್ಧಿಗೆ ದುಡ್ಡಿಲ್ಲ
ಕಾಂಗ್ರೆಸ್ ಸರಕಾರದ ಬಳಿ ಅಭಿವೃದ್ಧಿಗೆ ಹಣವಿಲ್ಲ. ಇರುವ ಹಣವನ್ನು ಲಂಚಕ್ಕೆ ಬಳಸಲಾಗುತ್ತಿದೆ. ಶಾಸಕರು ಸರಕಾರದ ಕತ್ತುಪಟ್ಟಿ ಹಿಡಿದಿ¨ªಾರೆ. ಅನುದಾನ ಸಿಗದ ಬಗ್ಗೆ ಕಾಂಗ್ರೆಸ್ ಶಾಸಕರೇ ದೂರು ಹೇಳುತ್ತಿದ್ದಾರೆ. 25 ಲಕ್ಷ ಕಾರ್ಡ್ ರದ್ದುಪಡಿಸಿದರೆ 20 ಸಾವಿ ರ ಕೋಟಿ ರೂ. ಬರಬಹುದು. ಆ ಹಣವನ್ನು ಶಾಸಕರಿಗೆ ಕೊಟ್ಟು ಸಮಾಧಾನ ಮಾಡಬಹುದು. ಇದು ಕಾರ್ಡ್ ರದ್ದು ಮಾಡುವುದರ ಹಿಂದಿನ ಉದ್ದೇಶ ಎಂದರು.