ದೇವನಹಳ್ಳಿ: ಸರ್ಕಾರ ಕೋವಿಡ್ ತಡೆಗೆ ಸಂಪೂರ್ಣ ವಿಫಲವಾಗಿದೆ. ಜನರು ಲಾಕ್‌ಡೌನ್‌ನಲ್ಲಿ ಆಹಾರಕ್ಕಾಗಿ ಪರದಾಡುವ ಪರಿಸ್ಥಿತಿ ಇದೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ರವಿ ತಿಳಿಸಿದರು.
ತಾಲೂಕಿನ ಕುಂದಾಣ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬ್ಲಾಕ್ ಕಾಂಗ್ರೆಸ್‌ನಿಂದ ಆರೋಗ್ಯಾಧಿಕಾರಿ ಡಾ.ಸಂಜಯ್, ಉಪ ತಹಶೀಲ್ದಾರ್ ಚೈತ್ರಾ, ವೈದ್ಯೆ ಡಾ.ಕೀರ್ತಿ ಅವರಿಗೆ ಆರೋಗ್ಯ ಸುರಕ್ಷತಾ ಸಾಮಗ್ರಿ ಹಸ್ತಾಂತರಿಸಿ ಮಾತನಾಡಿ, ದೇವನಹಳ್ಳಿಯ ಯುವ ಕಾಂಗ್ರೆಸ್ ವಾರಿಯರ್ಸ್‌ಗಳು ಜನರ ಪರವಾಗಿ ಶ್ರಮಿಸುತ್ತಿದ್ದಾರೆ. ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ವಿ.ಶಾಂತಕುಮಾರ್ ನೇತೃತ್ವದಲ್ಲಿ ಆರೋಗ್ಯ ಸುರಕ್ಷತಾ ಸಾಮಗ್ರಿಗಳು, ಅಂಗವಿಕಲರಿಗೆ ದಿನಸಿ ಕಿಟ್ ನೀಡಲಾಗುತ್ತಿದೆ ಎಂದರು.
ದೊಡ್ಡಬಳ್ಳಾಪುರ ಶಾಸಕ ವೆಂಕಟರಮಣಯ್ಯ ಮಾತನಾಡಿ, ಈಗಾಗಲೇ ಜಿಲ್ಲಾಡಳಿತ, ತಾಲೂಕು ಆಡಳಿತ ಜಿಲ್ಲೆಯಲ್ಲಿ ಸರ್ಕಾರದ ಮಾರ್ಗಸೂಚಿಯಂತೆ ಕರ್ತವ್ಯ ನಿರ್ವಹಿಸುತ್ತಿದೆ. ಕೊರೊನಾ ಎರಡನೇ ಅಲೆಯಿಂದ ಜನರಿಗೆ ತೊಂದರೆಯಾಗಿದೆ ಎಂದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎ.ಸಿ.ಶ್ರೀನಿವಾಸ್ ಮಾತನಾಡಿದರು. ಮಾಜಿ ಸಚಿವ ಕೃಷ್ಣಭೈರೇಗೌಡ, ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಸಿ.ಜಗನ್ನಾಥ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಪ್ರಸನ್ನಕುಮಾರ್, ಉಪಾಧ್ಯಕ್ಷ ದ್ಯಾವರಹಳ್ಳಿ ವಿ.ಶಾಂತಕುಮಾರ್, ಕೆಪಿಸಿಸಿ ಸದಸ್ಯ ಚಿನ್ನಪ್ಪ, ಜಿಪಂ ಸದಸ್ಯ ಕೆ.ಸಿ.ಮಂಜುನಾಥ್, ಪುರಸಭಾ ಸದಸ್ಯ ಎನ್.ರಘು, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕೆ.ಆರ್.ನಾಗೇಶ್, ಕುಂದಾಣ ಗ್ರಾಪಂ ಅಧ್ಯಕ್ಷ ವಿ.ನಾರಾಯಣಸ್ವಾಮಿ, ಪುರಸಭಾ ಅಧ್ಯಕ್ಷೆ ರೇಖಾ, ಮಹಿಳಾ ಅಧ್ಯಕ್ಷೆ ಲಕ್ಷ್ಮೀ, ಮುಖಂಡರಾದ ಸೋಮಣ್ಣ, ಆರ್.ಸುಮಂತ್, ನರಸಿಂಹಮೂರ್ತಿ, ಲಕ್ಷ್ಮೀಕಾಂತ್, ಎಸ್.ಜಿ.ಮಂಜುನಾಥ್, ಡಿ.ಎಂ.ದೇವರಾಜ್, ಸಂದೀಪ್, ಅರುಣ್ ಹಾಜರಿದ್ದರು.