Advertisement

ಕೊನೆಗೂ ರಾಜ್ಯ ಸಾರಿಗೆ ನೌಕರರ ವೇತನ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ

12:46 PM Nov 16, 2020 | keerthan |

ಬೆಂಗಳೂರು: ಪ್ರಯಾಣಿಕರಿಲ್ಲದ ಕಾರಣ ಇಲಾಖೆ ನಷ್ಟದಲ್ಲಿದ್ದು, ನೌಕರರ ವೇತನ ನೀಡಲು ಹಣವಿಲ್ಲವೆಂದಿದ್ದ ಸರ್ಕಾರ ಕೊನೆಗೂ ರಾಜ್ಯ ಸಾರಿಗೆ ನೌಕರರ ಎರಡು ತಿಂಗಳ ವೇತನ ಬಿಡುಗಡೆ ಮಾಡಿದೆ.

Advertisement

ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ನೇತೃತ್ವದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಸಾರಿಗೆ ಇಲಾಖೆಗೆ ರಾಜ್ಯ ಸರ್ಕಾರ 634 ಕೋಟಿ ನೆರವು ನೀಡಿದ್ದು ಈ ಮೂಲಕ ಬಾಕಿ ಉಳಿದಿದ್ದ ಎರಡು ತಿಂಗಳ ವೇತನ ಪಾವತಿಸಿದೆ.

ದೀಪಾವಳಿ ಸಂದರ್ಭದಲ್ಲಿ ಇಲಾಖೆ ವೇತನ ನೀಡಿಲ್ಲ. ಮೊದಲೇ ಕಷ್ಟದಲ್ಲಿರುವ ನಮಗೆ ಈ ಬಾರಿ ದೀಪಾವಳಿಗೆ ಮತ್ತಷ್ಟು ಕಷ್ಟವಾಗುತ್ತಿದೆ ಎಂದು ಸಾರಿಗೆ ನೌಕರರು ಅಳಲು ತೋಡಿಕೊಂಡಿದ್ದರು.

ಇದನ್ನೂ ಓದಿ:ಬಿಜೆಪಿ ಪಕ್ಷದತ್ತ ಎಸ್‌ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್?

ಕೋವಿಡ್ ಕಾರಣದಿಂದ ಬಸ್ ಸಂಚಾರಕ್ಕೆ ಪ್ರಯಾಣಿಕರ ಸಂಖ್ಯೆ ಕಡಿಮೆಯಾಗಿದೆ. ಇದರಿಂದ ನಮಗೆ ಖರ್ಚು ಹೆಚ್ಚಾಗುತ್ತಿದೆ. ಹೀಗಾಗಿ ನೌಕರರಿಗೆ ಸಂಬಳ ಕೊಡಲು ನಮ್ಮ ಬಳಿ ದುಡ್ಡಿಲ್ಲ ಎಂದು ಡಿಸಿಎಂ, ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿಕೆ ನೀಡಿದ್ದರು.

Advertisement

ಕೋವಿಡ್‌ ಕಾರಣದಿಂದಾಗಿ ಆರ್ಥಿಕ ನಷ್ಟ ಉಂಟಾಗಿರುವ ಸಾರಿಗೆ ಇಲಾಖೆಯ ನಾಲ್ಕು ನಿಗಮಗಳ ನೌಕರರಿಗೆ ವೇತನ ಪಾವತಿ ಮಾಡಲು ಸಾಧ್ಯವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಸಾರಿಗೆ ಸಚಿವ ಲಕ್ಷ್ಮಣ ಸವದಿ ಇಂದು ಸಿಎಂ ಬಿಎಸ್‌ವೈ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು.

ಇದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿಗಳು, ಸಾರಿಗೆ ಸಂಸ್ಥೆಗಳ ಸಿಬ್ಬಂದಿಗಳಿಗೆ ಅಕ್ಟೋಬರ್, ನವೆಂಬರ್ ಹಾಗೂ ಡಿಸೆಂಬರ್ ತಿಂಗಳ ಸಂಬಳದ ಒಟ್ಟು ಮೊತ್ತವಾದ 634 ಕೋಟಿ 50 ಲಕ್ಷ ರೂ.  ಗಳನ್ನು ತಕ್ಷಣ ಬಿಡುಗಡೆ ಮಾಡುವಂತೆ   ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಇದರಿಂದಾಗಿ ಸಾರಿಗೆ ಸಿಬ್ಬಂದಿಗಳ ಒಟ್ಟು ಮೂರು ತಿಂಗಳುಗಳ ಶೇಕಡ 75 ರಷ್ಟು ವೇತನದ ಮೊತ್ತ 634.50 ರೂಪಾಯಿಗಳನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಲು ಕ್ರಮ ಕೈಗೊಂಡಂತಾಗಿದೆ. ಉಳಿದ ಶೇಕಡ 25 ರಷ್ಟು ವೇತನಗಳನ್ನು ಸಾರಿಗೆ ಸಂಸ್ಥೆಗಳೇ ತಮ್ಮ ಸಂಪನ್ಮೂಲಗಳಿಂದ ಭರಿಸಲಿವೆ.

ಇದರಿಂದಾಗಿ ಕೆಎಸ್ಆರ್ ಟಿಸಿ, ಬಿಎಂಟಿಸಿ, ಈಶಾನ್ಯ ಮತ್ತು ವಾಯವ್ಯ  ಸಾರಿಗೆ ಸಂಸ್ಥೆಗಳ ಸುಮಾರು 1,30,000 ಸಿಬ್ಬಂದಿಗಳಿಗೆ ವೇತನ ಪಾವತಿಗೆ ಸಾಧ್ಯವಾದಂತಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next