ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಕೋವಿಡ್-19 ಸೋಂಕು ತಾಗಿರುವುದು ದೃಢವಾಗಿದೆ. ಈ ಹಿನ್ನಲೆಯಲ್ಲಿ ಅವರಿಗೆ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಸಿದ್ದರಾಮಯ್ಯ ಅವರಿಗೆ ಸೋಮವಾರ ಬೆಳಿಗ್ಗೆಯಿಂದ ಜ್ವರ ಬಂದಿದ್ದು, ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದರು. ಆ್ಯಂಟಿಜೆನ್ ಟೆಸ್ಟ್ ನಲ್ಲಿ ಅವರಿಗೆ ಕೋವಿಡ್ -19 ಸೋಂಕು ತಗುಲಿರುವುದು ದೃಢವಾಗಿತ್ತು. ಸದ್ಯ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೂ ಸೋಂಕು ದೃಢವಾಗಿದ್ದು, ಹಾಲಿ ಮತ್ತು ಮಾಜಿ ಮುಖ್ಯಮಂತ್ರಿಗಳಿಬ್ಬರೂ ಒಂದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೋಂಕು ದೃಢವಾದ ವಿಚಾರ ಕೇಳಿ ರಾಜ್ಯದ ವಿವಿಧ ಪಕ್ಷಗಳ ನಾಯಕರು ಅವರ ಶೀಘ್ರ ಚೇತರಿಕೆಗೆ ಹಾರೈಸಿದ್ದಾರೆ.