Advertisement

ರಾಜ್ಯಮಟ್ಟದ ವರ್ಣೋತ್ಸವ ಸಮಾರೋಪ

01:00 AM Mar 10, 2019 | Team Udayavani |

ಶಿರ್ವ: ಬಂಟಕಲ್ಲು ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದಲ್ಲಿ ರಾಜ್ಯಮಟ್ಟದ ತಾಂತ್ರಿಕ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನೊಳಗೊಂಡ ಎರಡು ದಿನಗಳ ವಣೊìàತ್ಸವದ ಸಮಾರೋಪ ಸಮಾರಂಭವು  ಶ್ರೀ ಸೋದೆ ಮಠದ ಮಠಾಧೀಶ ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದ ಅವರ ಅಧ್ಯಕ್ಷತೆಯಲ್ಲಿ ಕಾಲೇಜಿನಲ್ಲಿ ಶುಕ್ರವಾರ ನಡೆಯಿತು. 

Advertisement

ಮುಖ್ಯ ಅತಿಥಿಯಾಗಿ ಪೂರ್ಣಪ್ರಜ್ಞ ಪ.ಪೂ. ಕಾಲೇಜಿನ ಪ್ರಾಂಶುಪಾಲ ಸಂದೀಪ್‌ ಕುಮಾರ್‌ ಮಾತನಾಡಿ ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ವರ್ಣೋತ್ಸವ ಉತ್ತಮ ವೇದಿಕೆಯಾಗಿದೆ ಎಂದರು. 
ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದರು ಬಹುಮಾನ ವಿತರಿಸಿದರು. ನಿಟ್ಟೆ ಎನ್‌ಎಂಎಎಂಐಟಿ ಕಾಲೇಜು ತಂಡ ಪ್ರಥಮ ಸ್ಥಾನ ಗಳಿಸಿದರೆ ಮಿಜಾರ್‌ ಮೈಟ್‌ ಕಾಲೇಜು ತಂಡವು ದ್ವಿತೀಯ ಸ್ಥಾನ  ಗಳಿಸಿತು.  ರಾಜ್ಯದ ವಿವಿಧ ತಾಂತ್ರಿಕ ಮಹಾವಿದ್ಯಾಲಯಗಳಿಂದ ಸುಮಾರು 400ಕ್ಕೂ ಹೆಚ್ಚು ವಿದ್ಯಾರ್ಥಿಗಳು ಉತ್ಸವದಲ್ಲಿ ಭಾಗವಹಿಸಿದ್ದರು.

ಸಂಸ್ಥೆಯ ಕಾರ್ಯದರ್ಶಿ ರತ್ನಕುಮಾರ್‌, ಪ್ರಾಂಶುಪಾಲ ಡಾ| ತಿರುಮಲೇಶ್ವರ ಭಟ್‌ ಉಪಸ್ಥಿತರಿದ್ದರು. ಸಮಾರೋಪ ಸಮಾರಂಭದ ಬಳಿಕ ಸಂಸ್ಥೆಯ ಸಿಬಂದಿ, ವಿದ್ಯಾರ್ಥಿಗಳಿಂದ “ವೀರಮಣಿ ಕಾಳಗ’ ಯಕ್ಷಗಾನ ಜರಗಿತು.

Advertisement

Udayavani is now on Telegram. Click here to join our channel and stay updated with the latest news.

Next