Advertisement

ಬೆಳಗಾವಿ ಜಿಲ್ಲಾಧಿಕಾರಿಗೆ ರಾಜ್ಯಮಟ್ಟದ ‘ಅತ್ಯುತ್ತಮ ಜಿಲ್ಲಾ ಚುನಾವಣಾಧಿಕಾರಿ’ಪ್ರಶಸ್ತಿ

12:50 PM Jan 24, 2023 | Team Udayavani |

ಬೆಳಗಾವಿ: ಭಾರತ ಚುನಾವಣಾ ಆಯೋಗದ ವತಿಯಿಂದ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಕೊಡಮಾಡುವ ಅತ್ಯುತ್ತಮ “ಜಿಲ್ಲಾ ಚುನಾವಣಾಧಿಕಾರಿ” ಪ್ರಶಸ್ತಿಗೆ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಭಾಜನರಾಗಿದ್ದಾರೆ.

Advertisement

ಭಾರತ ಚುನಾವಣಾ ಆಯೋಗ ಮತ್ತು ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯ ವತಿಯಿಂದ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ.

ಬೆಂಗಳೂರಿನ ಸರ್ ಪುಟ್ಟಣ್ಣ ಚೆಟ್ಟಿ ಟೌನ್ ಹಾಲ್ ನಲ್ಲಿ ಜ.25 ಮಧ್ಯಾಹ್ನ 1 ಗಂಟೆಗೆ ನಡೆಯಲಿರುವ “ರಾಷ್ಟ್ರೀಯ ಮತದಾರರ ದಿನಾಚರಣೆ” ಸಮಾರಂಭದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಶಸ್ತಿಯನ್ನು ಪ್ರದಾನ‌ ಮಾಡಲಿದ್ದಾರೆ.

ಇದನ್ನೂ ಓದಿ:ತೊಗರಿ ನೆಟೆರೋಗಕ್ಕೆ ಪರಿಹಾರ ನೀಡಲು ನಿರ್ಧಾರ: ಸಿಎಂ ಬೊಮ್ಮಾಯಿ

ಮತದಾರರ ನೋಂದಣಿ, ಪರಿಷ್ಕರಣೆ ಸೇರಿದಂತೆ ಒಟ್ಟಾರೆ ಚುನಾವಣಾ ಕಾರ್ಯವನ್ನು ಅತ್ಯುತ್ತಮವಾಗಿ ಕಾರ್ಯ ನಿರ್ವಹಣೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ.

Advertisement

ಇದೇ ರೀತಿ ತುಮಕೂರು, ಯಾದಗಿರಿ ಮತ್ತು ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೂ ಪ್ರಶಸ್ತಿ ನೀಡಲಾಗುತ್ತಿದೆ. ಇದಲ್ಲದೇ ವಿವಿಧ ಜಿಲ್ಲೆಗಳ ಮತದಾರರ ನೋಂದಣಾಧಿಕಾರಿಗಳು, ಸಹಾಯಕ ನೋಂದಣಾಧಿಕಾರಿಗಳು, ಬೂತ್ ಮಟ್ಟದ ಅಧಿಕಾರಿಗಳು, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಚುನಾವಣಾ ಶಾಖೆಯ ತಾಂತ್ರಿಕ ಸಿಬ್ಬಂದಿಗೂ ಸಹ ಪ್ರತ್ಯೇಕ ವಿಭಾಗಗಳಲ್ಲಿ ಪ್ರಶಸ್ತಿ ಘೋಷಿಸಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next