ಕೋಟ: ಬೆಂಗಳೂರಿನ ಸೈಂಟ್ ಜೋಸೆಫ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ರಾಜ್ಯ ಮಟ್ಟದ ಸಾಂಸ್ಕೃತಿಕ ಹಾಗೂ ಸಹ ಪಠ್ಯೇತರ ಸ್ಪರ್ಧೆಗಳಲ್ಲಿ ಕೋಟ ವಿವೇಕ ವಿದ್ಯಾಸಂಸ್ಥೆಯ ನಾಲ್ವರು ವಿದ್ಯಾರ್ಥಿನಿಯರು ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದಿದ್ದಾರೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.
ಚಿತ್ರಕಲಾ ಸ್ಪರ್ಧೆಯಲ್ಲಿ ನಂದಿತಾ ಡಿ.ಜೋಗಿ ದ್ವಿತೀಯ ಸ್ಥಾನ, ಕನ್ನಡ ಭಾಷಣದಲ್ಲಿ ಉಷಾ ಬಿ.ಎ. ದ್ವಿತೀಯ ಸ್ಥಾನ, ಮೋನೋ ಆ್ಯಕ್ಟಿಂಗ್(ಏಕ ಪಾತ್ರಾಭಿನಯ) ನಲ್ಲಿ ಕಾವ್ಯ ಎಚ್ ಪ್ರಥಮ ಸ್ಥಾನ, ಇಂಗ್ಲಿಷ್ ಪ್ರಬಂಧ ಸ್ಪರ್ಧೆಯಲ್ಲಿ ವಫಾ ನಾಝ್ ತೃತೀಯ ಸ್ಥಾನ ಪಡೆದಿದ್ದಾರೆ.
ನಂದಿತಾ ಡಿ.ಜೋಗಿ
ರಾಜ್ಯಮಟ್ಟದ ಸಾಂಸ್ಕೃತಿ ಸ್ಪರ್ಧೆಯಲ್ಲಿ ಕಾಲೇಜಿನ ನಾಲ್ವರು ವಿದ್ಯಾರ್ಥಿನಿಯರು ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆಯುವ ಮೂಲಕ ಕಾಲೇಜಿಗೆ ಹಾಗೂ ಜಿಲ್ಲೆಗೆ ಕೀರ್ತಿಗೆ ತಂದಿರುವ ಇವರಿಗೆ ಅಭಿನಂದನೆಗಳು ಎಂದು ಕೋಟ ವಿವೇಕ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು, ಶಿಕ್ಷಕ ವೃಂದದವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.