ಉಡುಪಿ: ಉಡುಪಿ ವಕೀಲರ ಸಂಘದ ವತಿಯಿಂದ ರಾಜ್ಯಮಟ್ಟದ ಸಾಂಸ್ಕೃತಿಕ ಹಬ್ಬ “ಕಲಾಸಂಭ್ರಮ’ ಫೆ.10ರಿಂದ 11ರ ವರೆಗೆ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನಡೆಯಲಿದೆ.
ಫೆ.10ರಂದು ಬೆಳಗ್ಗೆ 10ಕ್ಕೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಉದ್ಘಾಟಿಸಲಿದ್ದಾರೆ.
ಹೈಕೋರ್ಟ್ ನ್ಯಾಯ ಮೂರ್ತಿ ಮೊಹಮ್ಮದ್ ನವಾಜ್ ಅಧ್ಯಕ್ಷತೆ ವಹಿಸಲಿದ್ದಾರೆ. ಹೈಕೋರ್ಟ್ ನ್ಯಾಯಮೂರ್ತಿ ಸಿ.ಎಂ.ಜೋಷಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್, ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಶಾಂತವೀರ ಶಿವಪ್ಪ ಭಾಗವಹಿಸಲಿದ್ದಾರೆ.
ಫೆ.11ರಂದು ಸಂಜೆ 6.30ಕ್ಕೆ ನಡೆಯುವ ಸಮಾರೋಪದಲ್ಲಿ ಹೈಕೋರ್ಟ್ ನ್ಯಾಯಮೂರ್ತಿ ಎಚ್.ಬಿ.ಪ್ರಭಾಕರ ಶಾಸ್ತ್ರಿ ಸಮಾರೋಪ ಭಾಷಣ ಮಾಡಲಿದ್ದಾರೆ. ಉಡುಪಿಯ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ದಿನೇಶ್ ಹೆಗ್ಡೆ ಅಧ್ಯಕ್ಷತೆ ವಹಿಸಲಿದ್ದಾರೆ.
ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಮಾಹೆ ಸಹಕುಲಾಧಿಪತಿ ಡಾ|ಎಚ್.ಎಸ್.ಬಲ್ಲಾಳ್, ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಶಾಂತವೀರ ಶಿವಪ್ಪ ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.