Advertisement

Hockey; ಬಾಲಕರ ವಿಭಾಗದಲ್ಲಿ ಬೆಂಗಳೂರು ದಕ್ಷಿಣ, ಕೊಡಗು ಬಾಲಕಿಯರು ವಿನ್ನರ್

09:37 PM Dec 09, 2023 | Team Udayavani |

ಗದಗ: ಬೆಟಗೇರಿ ಗಾಂಧಿ ನಗರದ ಮಹಾತ್ಮ ಗಾಂಧಿ ಹಾಕಿ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಹಾಕಿ ಪಂದ್ಯಾವಳಿಯಲ್ಲಿ ಬಾಲಕರ ವಿಭಾಗದಲ್ಲಿ ಬೆಂಗಳೂರು ದಕ್ಷಿಣ, ಬಾಲಕಿಯರ ವಿಭಾಗದಲ್ಲಿ ಕೊಡಗು ಜಿಲ್ಲೆಯು ಚಾಂಪಿಯನ್ ತಂಡವಾಗಿ ಹೊರಹೊಮ್ಮಿತು.

Advertisement

ಬಾಲಕರ ವಿಭಾಗದಲ್ಲಿ ಬೆಂಗಳೂರು ದಕ್ಷಿಣ ಹಾಗೂ ಬೆಂಗಳೂರು ಉತ್ತರ ನಡುವಿನ ಫೈನಲ್ ಪಂದ್ಯದಲ್ಲಿ ಬೆಂಗಳೂರು ದಕ್ಷಿಣ ತಂಡವು 3-0 ಗೋಲುಗಳ ಅಂತರದಿಂದ ಗೆಲುವು ದಾಖಲಿಸಿ ರಾಷ್ಟ್ರಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಹಾಕಿ ಪಂದ್ಯಾವಳಿಗೆ ಅರ್ಹತೆ ಪಡೆಯಿತು. ಬೆಂಗಳೂರು ಉತ್ತರ ರನ್ನರ್‌ಗೆ ತೃಪ್ತಿ ಪಟ್ಟಿತು.

ಇನ್ನು ಬಾಲಕಿಯರ ವಿಭಾಗದಲ್ಲಿ ಕೊಡಗು ಹಾಗೂ ಮೈಸೂರು ನಡುವಿನ ರೋಚಕ ಫೈನಲ್ ಪಂದ್ಯದಲ್ಲಿ ತಲಾ 1 ಗೋಲು ಬಾರಿಸುವ ಮೂಲಕ ಸಮಬಲದ ಹೋರಾಟ ನಡೆಸಿದವು. ನಂತರ ನಡೆದ ಫೆನಾಲ್ಟಿ ಶೂಟೌಟ್‌ನಲ್ಲಿ 3-2 ಗೋಲುಗಳ ಅಂತರದಲ್ಲಿ ಕೊಡಗು ತಂಡವು ಗೆಲುವು ದಾಖಲಿಸಿ ರಾಷ್ಟçಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಹಾಕಿ ಪಂದ್ಯಾವಳಿಗೆ ಅರ್ಹತೆ ಪಡೆಯಿತು. ಮೈಸೂರು ತಂಡ ರನ್ನರ್‌ಗೆ ತೃಪ್ತಿ ಪಟ್ಟಿತು.

ಜ. 5ರಂದು ಪಂಜಾಬ್‌ನ ಜಲಂಧರ್‌ನಲ್ಲಿ ರಾಷ್ಟ್ರಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಹಾಕಿ ಪಂದ್ಯಾವಳಿ ಜರುಗಲಿದ್ದು, ಬಾಲಕರ ವಿಭಾಗದಲ್ಲಿ ಬೆಂಗಳೂರು ದಕ್ಷಿಣ, ಬಾಲಕಿಯರ ವಿಭಾಗದಲ್ಲಿ ಕೊಡಗು ತಂಡಗಳು ಸೆಣಸಾಟ ನಡೆಸಲಿವೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next