Advertisement

ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾವಳಿ ಆರಂಭ

06:57 AM Jan 31, 2019 | |

ಮಹದೇವಪುರ: ಯುವಕರು ಗ್ರಾಮೀಣ ಕ್ರೀಡೆಗಳತ್ತ ಹೆಚ್ಚು ಆಸಕ್ತಿ ವಹಿಸಿ, ಅವುಗಳನ್ನು ಉಳಿಸಿ ಬೆಳೆಸಬೇಕು ಎಂದು ಶಾಸಕ ಅರವಿಂದ ಲಿಂಬಾವಳಿ ಹೇಳಿದರು.

Advertisement

ಕ್ಷೇತ್ರದ ಬಿಜೆಪಿ ಘಟಕದಿಂದ ಏರ್ಪಡಿಸಿದ್ದ ಪುರುಷರ ರಾಜ್ಯ ಮಟ್ಟದ ಹೊನಲು ಬೆಳಕಿನ ಕಬಡ್ಡಿ ಮತ್ತು ವಾಲಿಬಾಲ್‌ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ದೇಸಿ ಕ್ರೀಡೆಗಳನ್ನು ಉಳಿಸಿ, ಬೆಳೆಸುವುದು ನಮ್ಮೆಲ್ಲರ ಜವಬ್ದಾರಿ. ಯುವ ಪೀಳಿಗೆ ಕ್ರೀಡೆಯನ್ನು ಜೀವನ ಕ್ರಮದ ಅವಿಭಾಜ್ಯ ಅಂಗವಾಗಿಸಿಕೊಳ್ಳುವಂತೆ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯ ಮುನಿಸ್ವಾಮಿ, ಮಂಡೂರು ಗ್ರಾ.ಪಂ ಅಧ್ಯಕ್ಷ ವೇಣು, ಏಕಲವ್ಯ ಪ್ರಶಸ್ತಿ ಪುರಸ್ಕೃತ ಕಬಡ್ಡಿ ಪಟು ಪಿಳ್ಳಪ್ಪ, ಮುಖಂಡರಾದ ಅನಂತರಾಮಯ್ಯ, ಕೆಂಪೇಗೌಡ, ಮಂಜುನಾಥ್‌ ಮತ್ತಿತರರು ಹಾಜರಿದ್ದರು.

ಹೂಡಿ ನ್ಪೋರ್ಟ್ಸ್ ಕ್ಲಬ್‌ ಮೈದಾನದಲ್ಲಿ ಪಂದ್ಯಾವಳಿಗಳನ್ನು ಆಯೋಜಿಸಲಾಗಿದೆ. ಮೂರು ದಿನಗಳ ಕಾಲ ನಡೆಯುವ ಕಬಡ್ಡಿ ಪಂದ್ಯಾವಳಿಯಲ್ಲಿ ಬೆಂಗಳೂರು ನಗರದ ಚಾಮರಾಜಪೇಟೆ, ಹೂಡಿ, ರಾಮಮೂರ್ತಿನಗರ ಹಾಗೂ ಕೋಲಾರ, ಮಂಡ್ಯ, ಹಾಸನ, ಚಿಕ್ಕಬಳ್ಳಾಪುರ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ 20 ತಂಡಗಳು ಭಾಗವಹಿಸಿವೆ. ಕಬ್ಬಡಿ ಪಂದ್ಯಾವಳಿ ನಂತರ ವಾಲಿಬಾಲ್‌ ಪಂದ್ಯಾವಳಿ ನಡೆಯಲಿದೆ ಎಂದು ಆಯೋಜಕ ಪಿಳ್ಳಪ್ಪ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next