Advertisement

ರಾಜ್ಯಮಟ್ಟದ ಒಲಂಪಿಕ್‌: ವಸತಿ ವ್ಯವಸ್ಥೆಗೆ ಸಿದ್ಧತೆ

12:14 PM Jan 03, 2017 | Team Udayavani |

ಧಾರವಾಡ: ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ ಮಂಬರುವ ಫೆ.3ರಿಂದ 10ರವರೆಗೆ ನಡೆಯುವ ರಾಜ್ಯಮಟ್ಟದ ಓಲಂಪಿಕ್‌ ಕ್ರೀಡಾಕೂಟಗಳಲ್ಲಿ ಸುಮಾರು 4,500 ಕ್ರೀಡಾಪಟುಗಳು ಹಾಗೂ ಕ್ರೀಡಾ ತಂತ್ರಜ್ಞರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಜಿಲ್ಲಾಧಿಕಾರಿ ಎಸ್‌.ಬಿ.ಬೊಮ್ಮನಹಳ್ಳಿ ಹೇಳಿದರು. 

Advertisement

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಲಭ್ಯ ಇರುವ ಎಲ್ಲ ಸರಕಾರಿ, ಅನುದಾನಿತ ಹಾಗೂ ಖಾಸಗಿ ವಿದ್ಯಾರ್ಥಿ ನಿಲಯಗಳ ಸಹಕಾರದೊಂದಿಗೆ ಉತ್ತಮ ವಸತಿ ಸೌಕರ್ಯಗಳನ್ನು ಒದಗಿಸಲು ಜಿಲ್ಲಾಡಳಿತ ಪ್ರಯತ್ನಿಸಲಿದೆ.

ಜ.4ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಪೂರ್ವಸಿದ್ಧತಾ ಸಭೆ ನಡೆಯಲಿದೆ ಎಂದು ಹೇಳಿದರು. ರಾಜ್ಯ ಓಲಂಪಿಕ್‌ ಕ್ರೀಡಾಕೂಟಕ್ಕೆ ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ ಒಟ್ಟು 23 ಕ್ರೀಡಾಂಗಣ, ಆಟದ ಮೈದಾನಗಳನ್ನು ಗುರುತಿಸಲಾಗಿದೆ.

ರೈಫಲ್‌ ಶೂಟಿಂಗ್‌ ಮತ್ತು ಟ್ರಯಥ್ಲಾನ್‌ ಕ್ರೀಡೆಗಳು ಬೆಂಗಳೂರಿನಲ್ಲಿಯೇ ನಡೆಯಲಿವೆ. ಒಟ್ಟು ಸುಮಾರು 4500 ಕ್ರೀಡಾಪಟುಗಳು, ತಂತ್ರಜ್ಞರು ಭಾಗವಹಿಸುವರು. ಜೊತೆಗೆ ಸಾಂಸ್ಕೃತಿಕ ಚಟುವಟಿಕೆಗಳ ಕಲಾವಿದರು. ಇತರ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಯೂ ಸಹ ಸಾಕಷ್ಟು ಸಂಖ್ಯೆಯಲ್ಲಿ ಆಗಮಿಸಲಿದೆ.

ಇದಕ್ಕಾಗಿ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲು ಜಿಲ್ಲಾಡಳಿತದ ಎಲ್ಲ ಇಲಾಖೆಗಳು ಶ್ರಮಿಸಬೇಕು ಎಂದರು. ಉತ್ತಮ ವಸತಿ, ಆಹಾರ, ಸಾರಿಗೆ, ಮೂಲ ಸೌಕರ್ಯಗಳನ್ನು ಕಲ್ಪಿಸಲು ಸ್ಪಷ್ಟ ರೂಪುರೇಷೆ ಹಾಕಿಕೊಳ್ಳಬೇಕು. ಜ.4ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಗೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಆಗಮಿಸಬೇಕು ಎಂದು ಸೂಚಿಸಿದರು. 

Advertisement

ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ನೇಹಲ್‌ ಆರ್‌., ಅಪರ ಜಿಲ್ಲಾಧಿಕಾರಿ ಇಬ್ರಾಹಿಂ ಮೈಗೂರ, ಉಪವಿಭಾಗಾಧಿಕಾರಿ ಮಹೇಶ ಕರ್ಜಗಿ,  ಮಹಾನಗರ ಪಾಲಿಕೆ ಆಯುಕ್ತ ಮೇಜರ್‌ ಸಿದ್ದಲಿಂಗಯ್ಯ ಹಿರೇಮಠ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರಮೇಶ ಕೋನರಡ್ಡಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಶಾರದಾ ಕೋಲಕಾರ, ಯುವ ಸಬಲೀಕರಣ ಮತ್ತು 

ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಸುಚೇತಾ ನೆಲವಗಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಎನ್‌.ಮುನಿರಾಜು, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ  ವ್ಯವಹಾರಗಳ ಇಲಾಖೆಯ ಹಿರಿಯ ಉಪನಿರ್ದೇಶಕ ಸದಾಶಿವ ಮರ್ಜಿ, ಡಿಎಚ್‌ಒ ಡಾ|ಆರ್‌.ಎಂ.ದೊಡ್ಡಮನಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ  ಬಿ.ಎಸ್‌.ದೊಡ್ಡಮನಿ ಇದ್ದರು. 

Advertisement

Udayavani is now on Telegram. Click here to join our channel and stay updated with the latest news.

Next