Advertisement
ಸೋಮವಾರ ಬೆಂಗಳೂರಿನ ವಿಕಾಸಸೌಧದಲ್ಲಿ ನಡೆದ 3ನೇ ರಾಜ್ಯ ಧಾರ್ಮಿಕ ಪರಿಷತ್ತಿನ 16 ನೇ ಸಭೆಯಲ್ಲಿ ರಾಜ್ಯದ ಹಲವಾರು ಧಾರ್ಮಿಕ ವಿಷಯಗಳ ಬಗ್ಗೆ ಸಭೆಯಲ್ಲಿ ಚರ್ಚಿಸಿ ನಿರ್ಧಾರಗಳನ್ನು ತಗೆದುಕೊಳ್ಳಲಾಯಿತು. ರಾಜ್ಯ ಸರಕಾರ ಮುಜರಾಯಿ ಅರ್ಚಕರ ಅಭಿವೃದ್ದಿಗಾಗಿ ಹಲವಾರು ಯೋಜನೆಗಳನ್ನು ಹೊರತಂದಿದೆ. ತಸ್ಥಿಕ್ ಹಣ ಹೆಚ್ಚಳ, ಅರ್ಚಕರುಗಳಿಗೆ ವಿಮಾ ಸೌಲಭ್ಯ ಸೇರಿದಂತೆ ಹಲವಾರು ವರ್ಷಗಳ ಬೇಡಿಕೆಯನ್ನು ಈಡೇರಿಸಲಾಗಿದೆ. ಇದಕ್ಕಾಗಿ ಮುಜರಾಯಿ ಇಲಾಖೆಯ ವತಿಯಿಂದ ಅರ್ಚಕರ ಸಮಾವೇಶ ಏರ್ಪಡಿಸುವಂತೆಯೂ ಸದಸ್ಯರು ಕೋರಿಕೆ ಸಲ್ಲಿಸಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು ಸೆಪ್ಟೆಂಬರ್ ಕೊನೆಯ ವಾರದಲ್ಲಿ ರಾಜ್ಯಮಟ್ಟದ ಸಮಾವೇಶವನ್ನು ಏರ್ಪಡಿಸುವುದಾಗಿ ತಿಳಿಸಿದರು.
Related Articles
ಕಾಶಿಯಲ್ಲಿರುವ ಕರ್ನಾಟಕ ಛತ್ರವನ್ನು ಸಂಪೂರ್ಣ ನವೀಕರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಚಿವರು ಆಯುಕ್ತರಿಗೆ ಸೂಚನೆ ನೀಡಿದರು. ಅಲ್ಲದೇ, ಕೂಡಲೇ ಅಗತ್ಯವಿರುವ ಹೆಚ್ಚುವರಿ ಸಿಬ್ಬಂದಿಗಳನ್ನು ನಿಯೋಜಿಸಲು ಸಚಿವರು ಆದೇಶಿಸಿದರು.
Advertisement
ಸಭೆಯಲ್ಲಿ ರಾಜ್ಯಧಾರ್ಮಿಕ ಪರಿಷತ್ತಿನ ಸದಸ್ಯ ಕಾರ್ಯದರ್ಶಿಗಳು ಹಾಗೂ ಮುಜರಾಯಿ ಇಲಾಖೆ ಆಯುಕ್ತರಾದ ಶ್ರೀಮತಿ ರೋಹಿಣಿ ಸಿಂಧೂರಿ, ರಾಜ್ಯ ಧಾರ್ಮಿಕ ಪರಿಷತ್ತಿನ ಸದಸ್ಯರುಗಳಾದ ಡಾ| ಮಹರ್ಷಿ ಆನಂದ ಗುರೂಜಿ, ಎಸ್ ಗೋವಿಂದ ಭಟ್, ಕೆ. ಸೂರ್ಯ ಕಷೇಕೋಡಿ, ಸುಭಾಷ ಕಾಂಬ್ಳೆ, ರಾಮಚಂದ್ರ ಮಟ್ಟಿ, ವಿಜಯಲಕ್ಷ್ಮಿ ಹಿರೇಮಠ, ವೈ.ಎಸ್. ಸಿದ್ದಲಿಂಗಪ್ರಭು ಹಾಗೂ ಇಲಾಖೆಯ ಪ್ರಮುಖ ಅಧಿಕಾರಿಗಳು ಉಪಸ್ಥಿತರಿದ್ದರು.