ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ಯೂತ್ ಹಾಸ್ಟೇಲ್ ಅಸೋಸಿಯೇಷನ್ ಆಫ್ ಇಂಡಿಯಾ, ಕೊಡಗು ಜಿಲ್ಲಾ ಯುವ ಒಕ್ಕೂಟ ಹಾಗೂ ಮಡಿಕೇರಿ, ವಿರಾಜಪೇಟೆ ಮತ್ತು ಸೋಮವಾರಪೇಟೆ ತಾಲೂಕು ಯುವ ಒಕ್ಕೂಟಗಳ ಸಂಯುಕ್ತ ಆಶ್ರಯದಲ್ಲಿ ಕಗ್ಗೊàಡ್ಲು ಗ್ರಾಮದ ದಿ| ಸಿ.ಡಿ. ಬೋಪಯ್ಯ ಅವರ ಗದ್ದೆಯಲ್ಲಿ ಶನಿವಾರ ನಡೆದ ರಾಜ್ಯ ಮಟ್ಟದ 26ನೇ ವರ್ಷದ ಕೆಸರು ಗದ್ದೆ ಕ್ರೀಡೋತ್ಸವದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಜಿಲ್ಲೆಯಲ್ಲಿ ಭತ್ತ ಬೆಳೆಯುವುದು ಕಡಿಮೆಯಾಗಿದೆ. ಆದ್ದರಿಂದ ಸರಕಾರ ಪ್ರತಿ ಹೆಕ್ಟೇರ್‌ಗೆ4 ಸಾವಿರ ರೂ ಸಹಾಯಧನ ನೀಡುತ್ತಿದ್ದು, ಇದನ್ನು ಬಳಸಿ ಕೊಳ್ಳು ವಂತಾಗಬೇಕು, ಈ ಸಹಾಯಧನವನ್ನು 10 ಸಾವಿರ ರೂ. ಗೆಹೆಚ್ಚಿಸಲು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಜಿ.ಪಂ.ಅಧ್ಯಕ್ಷರು ಹೇಳಿದರು.
ಭತ್ತ ಬೆಳೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಭತ್ತಕ್ಕೆ ಇನ್ನಷ್ಟು ಹೆಚ್ಚಿನ ಬೆಂಬಲ ಬೆಲೆ ನೀಡುವಂತಾಗಬೇಕು. ಆ ನಿಟ್ಟಿನಲ್ಲಿ ಸರಕಾರದ ಗಮನ ಸೆಳೆಯಲಾಗುವುದು ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.
ಇಂದಿನ ಯಾಂತ್ರೀಕೃತ ನಾಟಿ ಯಂತ್ರ ಬಳಸಿಕೊಂಡು ಭತ್ತ ಬೆಳೆಯುವಂತಾಗಬೇಕು. ಕೃಷಿ ಪದ್ಧತಿಯನ್ನು ಉಳಿಸಿಕೊಂಡು ಹೋಗಬೇಕಿದೆ. ಗ್ರಾಮೀಣ ಸೊಗಡಿನ ಕೆಸರುಗದ್ದೆ ಕ್ರೀಡಾಕೂಟಕ್ಕೆ ಮತ್ತಷ್ಟು ಉತ್ತೇಜನ ನೀಡಬೇಕಿದೆ ಎಂದು ಬಿ.ಎ. ಹರೀಶ್ ಅವರು ತಿಳಿಸಿದರು.
Advertisement
ತಾ.ಪಂ. ಸದಸ್ಯರಾದ ಕುಮುದ ರಶ್ಮಿ ಅವರು ಮಾತನಾಡಿ ಜಿಲ್ಲೆಯ ನಾನಾ ಭಾಗಗಲ್ಲಿ ಕೆಸರು ಗದ್ದೆ ಕ್ರೀಡಾಕೂಟ ಏರ್ಪಡಿಸಿ ಗ್ರಾಮೀಣರು ಒಂದೆಡೆ ಸೇರುವಂತಾಗಲು ಅವಕಾಶವಾಗಿದೆ. ಮಳೆಗಾಲದ ಅವಧಿಯಲ್ಲಿ ಗ್ರಾಮೀಣ ಕೆಸರು ಗದ್ದೆ ಕೀಡಾ ಕೂಟಗಳ ಸಂಭ್ರಮ ಒಂದು ರೀತಿ ಹಬ್ಬವಿದ್ದಂತೆ. ಆ ದಿಸೆಯಲ್ಲಿ ಗ್ರಾಮೀಣ ಕ್ರೀಡೆಗಳಿಗೆ ಹೆಚ್ಚಿನ ಒತ್ತು ನೀಡುವುದು ಅಗತ್ಯವಾಗಿದೆ ಎಂದರು.