Advertisement

ಧಾರವಾಡದಲ್ಲಿ ರಾಜ್ಯಮಟ್ಟದ ಶಂಕರಾಚಾರ್ಯರ ಜಯಂತಿ

03:31 PM Apr 23, 2017 | Team Udayavani |

ಧಾರವಾಡ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾಡಳಿತದ ಸಹಯೋಗದಲ್ಲಿ ತತ್ವಜ್ಞಾನಿಗಳ ದಿನದ ಅಂಗವಾಗಿ ಮೇ. 30ರಂದು ಆದ್ಯ ಗುರು ಶ್ರೀ ಶಂಕರಾಚಾರ್ಯರ ರಾಜ್ಯಮಟ್ಟದ ಜಯಂತಿ ಆಯೋಜಿಸಲು ನಿರ್ಧರಿಸಲಾಗಿದೆ. 

Advertisement

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಡಾ| ಎಸ್‌.ಬಿ.ಬೊಮ್ಮನಹಳ್ಳಿ ಅವರ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು. ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಡಾ|ಬೊಮ್ಮನಹಳ್ಳಿ ಮಾತನಾಡಿ, ಜಿಲ್ಲಾಡಳಿತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಲಕರ್ಣಿ ಅವರ ಪ್ರಯತ್ನದಿಂದ ಧಾರವಾಡದಲ್ಲಿ ರಾಜ್ಯಮಟ್ಟದ ಶ್ರೀ ಶಂಕರಾಚಾರ್ಯರ ಜಯಂತಿ ಹಮ್ಮಿಕೊಳ್ಳಲು ಸರ್ಕಾರ ಆದೇಶ ನೀಡಿದೆ.

ಈ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗುವುದು ಎಂದರು. ಜಯಂತಿ ಅಂಗವಾಗಿ ಜನಪದ ಕಲಾ ತಂಡಗಳೊಂದಿಗೆ ಶ್ರೀ ಶಂಕರಾಚಾರ್ಯರ ಭಾವಚಿತ್ರ ಮೆರವಣಿಗೆ ನಂತರ ಸಂಜೆ 6ಗಂಟೆಗೆ ಡಾ|ಮಲ್ಲಿಕಾರ್ಜುನ ಮನಸೂರ ಕಲಾಭವನದಲ್ಲಿ ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. 

ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದ ಕಲಾವಿದರ ನೃತ್ಯರೂಪಕ, ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಲಾಗುವುದು. ಬಾರಿ ಕೈಗಾರಿಕಾ ಸಚಿವ ಆರ್‌.ವಿ.ದೇಶಪಾಂಡೆ ಕಾರ್ಯಕ್ರಮಉದ್ಘಾಟಿಸಲಿದ್ದಾರೆ ಎಂದರು. ಸ್ಥಳೀಯ ಕಲಾವಿದರು, ಮಹಿಳಾ ಭಜನಾ ಮಂಡಳಿಗಳಿಗೆ ರೂಪಕ ಸಾಂಸ್ಕೃತಿಕ ಕಾರ್ಯಕ್ರಮ ನೀಡಲು ಅವಕಾಶ ನೀಡಬೇಕೆಂದು ಸಂಘಟನೆಯ ಪದಾಧಿಕಾರಿಗಳು ಸಲಹೆ ನೀಡಿದರು.

ಹು-ಧಾ ಮಹಾನಗರ ಪಾಲಿಕೆ ಸದಸ್ಯ ದೀಪಕ್‌ ಚಿಂಚೋರೆ, ಅಪರ ಜಿಲ್ಲಾಧಿಕಾರಿ ಇಬ್ರಾಹಿಂ ಮೈಗೂರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಸ್‌.ಕೆ.ರಂಗಣ್ಣವರ, ವಾರ್ತಾ ಮತ್ತು ಸಾರ್ವಜನಿಕ ಪ್ರಚಾರ ಇಲಾಖೆ ಹಿರಿಯಸಹಾಯಕ ನಿರ್ದೇಶಕ ಮಂಜುನಾಥ ಡೊಳ್ಳಿನ, ಮುಖಂಡರಾದ ನರೇಂದ್ರ ಕುಲಕರ್ಣಿ, ರವಿ ದೇಶಪಾಂಡೆ, ಶಂಕರ ಕುಲಕರ್ಣಿ, ಆರ್‌.ಡಿ.ಕುಲಕರ್ಣಿ, ಎಂ.ಬಿ.ನಾಥು ಇದ್ದರು. 

Advertisement
Advertisement

Udayavani is now on Telegram. Click here to join our channel and stay updated with the latest news.

Next