Advertisement
ವಿಧಾನಸೌಧದ ಬ್ಯಾಕ್ವೆಂಟ್ ಹಾಲ್‌ನಲ್ಲಿ ಸೋಮವಾರ ಮಾಜಿ ರಾಷ್ಟ್ರಪತಿ ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನದ ಅಂಗವಾಗಿ ಶಿಕ್ಷಣ ಇಲಾಖೆ ಆಯೋಜಿಸಿದ್ದ ರಾಜ್ಯಮಟ್ಟದ ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ ರಾಜ್ಯಮಟ್ಟದ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಿದ ಬಳಿಕ ಮಾತನಾಡಿ, ಸರ್ಕಾರ ಏನೇ ಮೂಲ ಸೌಕರ್ಯ ಒದಗಿಸಿದರೂ ಬೋಧನೆಗೆ ಅಗತ್ಯವಾಗಿ ಶಿಕ್ಷಕರು ಮುಖ್ಯ.
Related Articles
Advertisement
ದೂರು ಸ್ವೀಕರಿಸಲು ಪ್ರತ್ಯೇಕ ಆಯೋಗ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಬಿ.ಸಿ.ನಾಗೇಶ್ ಮಾತನಾಡಿ, ಕೆಲವರು ನಕಲಿ ಎನ್‌ಒಸಿ ಗಳನ್ನು ಇಟ್ಟುಕೊಂಡು ಶಾಲೆಗಳನ್ನು ನಡೆಸುತ್ತಿರುವುದು ಗಮನಕ್ಕೆ ಬಂದಿದೆ. ರಾಜ್ಯದ ಖಾಸಗಿ ಶಾಲೆಗಳ ನವೀಕರಣ, ನೋಂದಣಿ, ಎನ್‌ಒಸಿ ಗಳನ್ನು ಪಡೆಯುವಲ್ಲಿ ಅಕ್ರಮ ನಡೆಯುತ್ತಿದ್ದರೆ ಅಥವಾ ಇಲಾಖೆಗೆ ಸಂಬಂಧಿಸಿದ ದೂರುಗಳನ್ನು ನೀಡಲು ಪ್ರತ್ಯೇಕ ಆಯೋಗ ರಚಿಸಲು ತೀರ್ಮಾನಿಸಲಾಗಿದೆ. ಈ ಸಂಬಂಧ ಮುಖ್ಯಮಂತ್ರಿಗಳ ಜತೆಗೂ ಚರ್ಚಿಸಲಾಗಿದೆ. ದೂರುಗಳನ್ನು ನೀಡಿದರೆ, ಸಂಬಂಧಪಟ್ಟವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಭರವಸೆ ನೀಡಿದರು.
ಪ್ರೌಢಶಾಲೆಗೂ ಶಿಕ್ಷಕರ ನೇಮಕ: ಪ್ರಸ್ತುತ 15 ಸಾವಿರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಫಲಿತಾಂಶ ಪ್ರಕಟಿಸಿದ್ದು, ಸದ್ಯದಲ್ಲಿಯೇ 1:2ರ ಅನುಪಾತ ಪಟ್ಟಿ ಪ್ರಕಟಿಸಲಾಗುತ್ತದೆ. ಇದರ ಜತೆಗೆ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ 778 ಉಪನ್ಯಾಸಕರನ್ನು ನೇಮಕಾತಿ ಮಾಡಲಾಗುತ್ತಿದೆ. ಇದೇ ರೀತಿ ಪ್ರೌಢಶಾಲೆಯಲ್ಲಿ ಖಾಲಿ ಇರುವ ಶಿಕ್ಷಕರ ನೇಮಕಾತಿ ಕೂಡ ನಡೆಸಲಾಗುತ್ತದೆ ಎಂದು ತಿಳಿಸಿದರು.
ಶಿಕ್ಷಕರ ದಿನಾಚರಣೆಯಂದು ಸರ್ಕಾರಿ ಶಾಲಾ ಶಿಕ್ಷಕರಿಗೆ ಮಾತ್ರ ಪ್ರಶಸ್ತಿ ನೀಡುತ್ತಿರುವುದರಿಂದ ಖಾಸಗಿ ಶಾಲಾ ಶಿಕ್ಷಕರನ್ನೂ ಪರಿಗಣಿಸಬೇಕೆಂಬ ಒತ್ತಾಯಗಳು ಕೇಳಿಬಂದಿವೆ. ಮುಂದಿನ ದಿನಗಳಲ್ಲಿ ಈ ಬೇಡಿಕೆಯನ್ನು ಈಡೇರಿಸುವ ಕೆಲಸ ಮಾಡಲಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ 20 ಪ್ರಾಥಮಿಕ, 11 ಪ್ರೌಢಶಾಲಾ ಮತ್ತು 10 ಪದವಿ ಪೂರ್ವ ಕಾಲೇಜುಗಳ ಶಿಕ್ಷಕರು, ಮುಖ್ಯಶಿಕ್ಷಕರು ಉಪನ್ಯಾಸಕರು ಮತ್ತು ಪ್ರಾಂಶುಪಾಲರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ಹಾಗೂ 8 ಶಾಲೆಗಳಿಗೆ “ಸ್ವಾಭಿಮಾನಿ ಸಾರ್ವಜನಿಕ ಶಾಲೆ’ ಎಂಬ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಪುಟ್ಟಣ್ಣ, ಅ. ದೇವೇಗೌಡ, ರಾಜ್ಯ ಸರ್ಕಾರದ ಶಿಕ್ಷಣ ಇಲಾಖೆ ಸುಧಾರಣೆಗಳ ಸಲಹೆಗಾರ ಡಾ.ಎಂ.ಆರ್. ದೊರೆಸ್ವಾಮಿ, ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೇಶ್‌ಕುಮಾರ್ ಸಿಂಗ್, ಆಯುಕ್ತ ಡಾ.ಆರ್.ವಿಶಾಲ್, ಪಿಯು ಇಲಾಖೆ ನಿರ್ದೇಶಕ ಆರ್. ರಾಮಚಂದ್ರನ್ ಉಪಸ್ಥಿತರಿದ್ದರು.
ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯಮಟ್ಟದ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಿದರು. ಸಚಿವ ಬಿ.ಸಿ.ನಾಗೇಶ್ ಹಾಗೂ ಇತರರಿದ್ದರು.