ಕುಂದಾಪುರ: ಮಣಿಪಾಲ ಅಕಾ ಡೆಮಿ ಆಫ್ ಜನರಲ್ ಎಜುಕೇಶನ್‌ನ ಪ್ಲಾಟಿನಂ ಜ್ಯುಬಿಲಿ ಹಾಗೂ ಮಾಹೆ ವಿ.ವಿ.ಯ ಬೆಳ್ಳಿ ಹಬ್ಬದ ಪ್ರಯುಕ್ತ ಭಂಡಾರ್‌ಕಾರ್ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಫೆ. 26 ಹಾಗೂ ಫೆ. 27ರಂದು “ಕರಾವಳಿ ಕರ್ನಾಟಕದ ಬುಡಕಟ್ಟುಗಳು ಹಾಗೂ ವರ್ತಮಾನ’ದ ಕುರಿತಾಗಿ ರಾಜ್ಯ ಮಟ್ಟದ ಬುಡಕಟ್ಟು ಸಮ್ಮೇಳನ ಕುಂದಾಪುರದ ಭಂಡಾರ್‌ಕಾರ್ ಕಾಲೇಜಿನಲ್ಲಿ ನಡೆಯಲಿದೆ ಎಂದು ಮಣಿಪಾಲ ಅಕಾಡೆಮಿ ಆಫ್ ಜನರಲ್ ಎಜುಕೇಶನ್‌ನ ಆಡಳಿತಾಧಿಕಾರಿ ಡಾ| ಎಚ್. ಶಾಂತಾರಾಮ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಸಮ್ಮೇಳನಾಧ್ಯಕ್ಷರಾಗಿ ಪದ್ಮಶ್ರೀ, ನಾಡೋಜ ಸುಕ್ರಿ ಬೊಮ್ಮ ಗೌಡ ಅವರನ್ನು ಆಯ್ಕೆ ಮಾಡ ಲಾಗಿದೆ. ಫೆ. 26ರ ಬೆಳಗ್ಗೆ 11 ಗಂಟೆಗೆ ಮಣಿಪಾಲ ವಿ.ವಿ.ಯ ಸಹಕುಲಾಧಿಪತಿ ಡಾ| ಎಚ್.ಎಸ್. ಬಲ್ಲಾಳ್ ಉದ್ಘಾಟಿಸಲಿದ್ದು, ಎಚ್. ಶಾಂತಾರಾಮ್ ಅಧ್ಯಕ್ಷತೆ ವಹಿಸಲಿದ್ದಾರೆ. ಕೊಲ್ಲೂರು ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಶೆಟ್ಟಿ ಭಾಗ ವಹಿಸ ಲಿದ್ದು, ಅದಕ್ಕೂ ಮುನ್ನ ಬೆಳಗ್ಗೆ 9.30ಕ್ಕೆ ಬುಡ ಕಟ್ಟು ಸಮ್ಮೇಳನದ ಮೆರವಣಿಗೆಗೆ ರಾಜ್ಯ ರಸ್ತೆ ಸಾರಿಗೆ ನಿಗಮ ಅಧ್ಯಕ್ಷ, ಶಾಸಕ ಗೋಪಾಲ ಪೂಜಾರಿ ಚಾಲನೆ ನೀಡಲಿದ್ದಾರೆ ಎಂದು ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ಪ್ರಾಧ್ಯಾ ಪಕ ರಾಮಚಂದ್ರ ಮಾಹಿತಿ ನೀಡಿದರು.
ಜಾನಪದ ಮತ್ತು ಬುಡಕಟ್ಟು ಸಮುದಾಯಗಳ ವಸ್ತು ಹಾಗೂ ಛಾಯಾಚಿತ್ರ ಪ್ರದರ್ಶನ ವನ್ನು ಇಂಟಕ್ ರಾಜ್ಯಾಧ್ಯಕ್ಷ ರಾಕೇಶ್ ಮಲ್ಲಿ ಉದ್ಘಾಟಿಸಲಿದ್ದು, ಬುಡಕಟ್ಟು ಗಳ ಅನನ್ಯತೆ, ಅಭಿವೃದ್ಧಿ, ಸವಾಲುಗಳು ಹಾಗೂ ಸಾಧ್ಯತೆಗಳ ಕುರಿತು ಹಂಪಿ ಕನ್ನಡ ವಿ.ವಿ.ಯ ವಿಶ್ರಾಂತ ಕುಲಪತಿ ಡಾ| ಹಿ.ಚಿ. ಬೋರಲಿಂಗಯ್ಯ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಕಲಾ ಪ್ರದರ್ಶನವನ್ನು ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಉದ್ಘಾಟಿಸಲಿದ್ದಾರೆ.
ಫೆ. 27: ಆದಿವಾಸಿ ಪರಿಷತ್
ಫೆ. 27ರಂದು ಬೆಳಗ್ಗೆ 9.30ಕ್ಕೆ ಕರಾವಳಿ ಕರ್ನಾಟಕದ ಬುಡಕಟ್ಟುಗಳು ಹಾಗೂ ವರ್ತಮಾನ ಕುರಿತು ಪ್ರಬಂಧ ಮಂಡನೆ, ಬೆಳಗ್ಗೆ 11.30ರಿಂದ ಮಾಜಿ ಸಚಿವ ಜಯ ಪ್ರಕಾಶ್ ಹೆಗ್ಡೆ ಸಮನ್ವಯಕಾರರಾಗಿರುವ ಆದಿವಾಸಿ ಪರಿಷತ್ ನಡೆಯಲಿದ್ದು, ಅಧಿಕಾರಿ ವರ್ಗ ಪಾಲ್ಗೊಳ್ಳಲಿದೆ, ಸಮಸ್ಯೆಗಳ ಕುರಿತು ಚರ್ಚೆ ನಡೆಯಲಿದೆ. ಅಪರಾಹ್ನ 2.30ಕ್ಕೆ ಮಂಗಳೂರು ವಿ.ವಿ. ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ| ವಿನಯ್‌ರಾಜ್ ಸಮಾರೋಪ ಭಾಷಣ ಮಾಡಲಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಪ್ರಾಂಶುಪಾಲರಾದ ಪದವಿ ಕಾಲೇಜಿನ ಡಾ| ಎನ್.ಪಿ. ನಾರಾಯಣ ಶೆಟ್ಟಿ, ಪ.ಪೂ. ಕಾಲೇಜಿನ ಡಾ| ಜಿ.ಎಂ. ಗೊಂಡ, ಕಾರ್ಯಕ್ರಮ ಸಂಚಾಲಕ ಡಾ| ಶುಭಕರಾಚಾರಿ, ಇತಿಹಾಸ ವಿಭಾಗ ಮುಖ್ಯಸ್ಥ ಗೋಪಾಲ್, ಪತ್ರಿಕೋದ್ಯಮ ವಿಭಾಗ ಮುಖ್ಯಸ್ಥೆ ಸುಮಲತಾ ಉಪಸ್ಥಿತರಿದ್ದರು.