Advertisement

ರಾಜ್ಯಮಟ್ಟದ ಯುವಜನ ಮೇಳ ಸಮಾಪನ 

01:10 PM Feb 05, 2018 | Team Udayavani |

ಪುತ್ತೂರು : ದ.ಕ. ಜಿಲ್ಲಾಡಳಿತ, ಜಿ.ಪಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದ.ಕ. ಜಿಲ್ಲಾ ಮತ್ತು ರಾಜ್ಯ ಯುವಜನ ಒಕ್ಕೂಟ, ತಾಲೂಕು ಯುವಜನ ಒಕ್ಕೂಟದ ಸಹಯೋಗದಲ್ಲಿ ಪುತ್ತೂರಿನ ಸುದಾನ ಶಾಲಾ ಆವರಣದಲ್ಲಿ ನಾಲ್ಕು ದಿನಗಳ ಕಾಲ ನಡೆದ 2017-18ನೇ ಸಾಲಿನ ರಾಜ್ಯಮಟ್ಟದ ಯುವಜನ ಮೇಳ ರವಿವಾರ ಸಂಜೆ ಸಮಾಪನಗೊಂಡಿತು.

Advertisement

ಸಮಾರಂಭದ ಅಧ್ಯಕ್ಷತೆ ವಹಿಸಿದ ಸಂಸದೀಯ ಕಾರ್ಯದರ್ಶಿ ಹಾಗೂ ಪುತ್ತೂರು ಶಾಸಕಿ ಶಕುಂತಳಾ ಟಿ. ಶೆಟ್ಟಿ, ವ್ಯವಸ್ಥಿತ ರೀತಿಯಲ್ಲಿ ಹಾಗೂ ಕ್ರಮಬದ್ಧವಾಗಿ, ಅತ್ಯಂತ ಶಿಸ್ತಿನಿಂದ ರಾಜ್ಯಮಟ್ಟದ ಯುವಜನ ಮೇಳವನ್ನು ಪುತ್ತೂರಿನಲ್ಲಿ ಯುಶಸ್ವಿಯಾಗಿ ಆಯೋಜನೆ ಮಾಡಲು ಸಹಕರಿಸಿದವರಿಗೆ ಕೃತಜ್ಞತೆ ಸಲ್ಲಿಸಿದರು. ಯುವ ಸಮುದಾಯ ಸಮಾಜಮುಖಿ  ಕಾರ್ಯಗಳೊಂದಿಗೆ ನಮ್ಮ ಸಂಸ್ಕೃತಿಯನ್ನು ಉಳಿಸಿ, ಬೆಳೆಸಲು ಮುಂದಾಗಬೇಕು. ರಾಷ್ಟ್ರದ ಗೌರವವನ್ನು ಉತ್ತುಂಗಕ್ಕೇರಿಸುವ ಕನ್ನಡಿಗರು ನಾವಾಗಬೇಕು ಎಂದರು.

ಪುತ್ತೂರಿಗೆ ಗೌರವ
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಮುಖ್ಯ ಅತಿಥಿಯಾಗಿ ಮಾತನಾಡಿ, ರಾಜ್ಯದ ವಿವಿಧೆಡೆಯಿಂದ ಕಲಾ ಪ್ರತಿಭೆಗಳು ಪುತ್ತೂರಿನಲ್ಲಿ ಸಮ್ಮಿಲನಗೊಂಡು ಪ್ರತಿಭೆ ಪ್ರದರ್ಶಿಸಿದ್ದಾರೆ. ಗೊಂದಲಗಳಿಗೆ ಅವಕಾಶ ಮಾಡಿಕೊಡದೆ ಮೇಳ ಸಂಘ ಟಿಸಿರುವುದು ಪುತ್ತೂರಿಗೆ ಇನ್ನಷ್ಟು ಗೌರವ ತಂದುಕೊಟ್ಟಿದೆ ಎಂದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಬೆಂಗಳೂರು ಕೇಂದ್ರ ಕಚೇರಿಯ ಉಪ ನಿರ್ದೇಶಕ ಬಸವರಾಜ್‌ ಮಾತನಾಡಿ, ಯುವ ಸಮುದಾಯ ಸದಾ ಚಟುವಟಿಕೆಯಿಂದ ಇರುವಂತೆ ಮಾಡಲು ರಾಜ್ಯ ಸರಕಾರ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಪುತ್ತೂರು ಶಾಸಕರು ತಮಗೆ ಸಿಕ್ಕ ಅವಕಾಶವನ್ನು ಉತ್ತಮ ರೀತಿಯಲ್ಲಿ ಬಳಕೆ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಸಮ್ಮಾನ, ಗೌರವಾರ್ಪಣೆ
ರಾಜ್ಯ ಯುವಜನ ಮೇಳವನ್ನು ಪುತ್ತೂರಿನಲ್ಲಿ ಯಶಸ್ವಿಯಾಗಿ ಸಂಘಟಿಸಲು ಕಾರಣಕರ್ತರಾದ ಪುತ್ತೂರು ಕ್ಷೇತ್ರದ ಶಾಸಕಿ ಶಕುಂತಳಾ ಟಿ. ಶೆಟ್ಟಿ, ಯುವಜನ ಒಕ್ಕೂಟದ ಜಿಲ್ಲಾಧ್ಯಕ್ಷ, ರಾಜ್ಯ ಕಾರ್ಯದರ್ಶಿಯಾಗಿ ಆಯ್ಕೆಯಾಗಿರುವ ಸುರೇಶ್‌ ರೈ ಸೂಡಿಮುಳ್ಳು, ತಾ| ಯುವ ಸಬಲೀಕರಣ ಹಾಗೂ ಕ್ರೀಡಾಧಿಕಾರಿ ಎಂ. ಮಾಮಚ್ಚನ್‌, ಸುದಾನ ಶಾಲಾ ಸಂಚಾಲಕ ರೆ| ವಿಜಯ ಹಾರ್ವಿನ್‌ ಅವರನ್ನು ಸಮ್ಮಾನಿಸಲಾಯಿತು. ಯುವಜನ ಮೇಳದ ಸಂಘಟನೆಯಲ್ಲಿ ತೊಡಗಿಸಿಕೊಂಡ ಎಲ್ಲ ವಿಭಾಗದವರನ್ನು, ಸೇವಾಕರ್ತರನ್ನು ಗುರುತಿಸಿ ಗೌರವಿಸಲಾಯಿತು.

Advertisement

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಪುತ್ತೂರು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪ್ರಸಾದ್‌ ಕೌಶಲ್‌ ಶೆಟ್ಟಿ, ಮಾಯಿದೆ ದೇವುಸ್‌ ಚರ್ಚ್‌ನ ಧರ್ಮಗುರು ವಂ| ಆಲ್ಫ್ರೆಡ್  ಜೆ. ಪಿಂಟೋ, ಸುದಾನ ಶಾಲಾ ಸಂಚಾಲಕ ರೆ| ವಿಜಯ ಹಾರ್ವಿನ್‌, ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಸಂಚಾಲಕ ಸವಣೂರು ಕೆ. ಸೀತಾರಾಮ ರೈ, ವಿವೇಕಾನಂದ ಕಾಲೇಜಿನ ಪ್ರಾಂಶುಪಾಲ ಡಾ| ಪೀಟರ್‌ ವಿಲ್ಸನ್‌ ಪ್ರಭಾಕರ್‌, ಎಪಿಎಂಸಿ ಅಧ್ಯಕ್ಷ ಬೂಡಿಯಾರು ರಾಧಾಕೃಷ್ಣ ರೈ, ರಾಜ್ಯ ಸರಕಾರಿ ನೌಕರರ ಸಂಘದ ದ.ಕ. ಜಿಲ್ಲಾಧ್ಯಕ್ಷ ಪ್ರಕಾಶ್‌ ನಾಯಕ್‌, ಪುತ್ತೂರು ಪತ್ರಕರ್ತರ ಸಂಘದ ಅಧ್ಯಕ್ಷ ಮಹೇಶ್‌ ಪುಚ್ಚಪ್ಪಾಡಿ, ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಮಹಮ್ಮದ್‌ ಕುಕ್ಕುವಳ್ಳಿ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಿದರು.

ತುಳು ಸಾಹಿತ್ಯ ಅಕಾಡೆಮಿ ಸದಸ್ಯ ನಿರಂಜನ ರೈ ಮಠಂತಬೆಟ್ಟು, ತಾ.ಪಂ. ಸದಸ್ಯ ಸಾಜ ರಾಧಾಕೃಷ್ಣ ರೈ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಜಗದೀಶ್‌ ಎಸ್‌., ಜಿಲ್ಲಾ ಕಾರ್ಯದರ್ಶಿ ಗಿರೀಶ್‌ ಶೆಟ್ಟಿ, ಕ್ಷೇತ್ರ ಶಿಕ್ಷಣಾಧಿಕಾರಿ ಸುಕನ್ಯಾ ಡಿ.ಎನ್‌., ಸುದಾನ ಶಾಲಾ ಮುಖ್ಯಗುರು ಶೋಭಾ ನಾಗರಾಜ್‌, ತಾಲೂಕು ಯುವಜನ ಒಕ್ಕೂಟದ ಕಾರ್ಯದರ್ಶಿ ಸುಬ್ರಹ್ಮಣ್ಯ ಕರಂಬಾರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಗುರುಪ್ರಿಯಾ ನಾಯಕ್‌, ತಂಡದವರು ಪ್ರಾರ್ಥಿಸಿದರು. ಪುತ್ತೂರು ಸಹಾಯಕ ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿ ಎಂ. ಮಾಮಚ್ಚನ್‌ ವಿಜೇತರ ವಿವರ ವಾಚಿಸಿದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದ. ಕ. ಜಿಲ್ಲಾ ಉಪನಿರ್ದೇಶಕ ಪ್ರದೀಪ್‌ ಡಿ’ಸೋಜಾ ಸ್ವಾಗತಿಸಿ,ಯುವಜನ ಒಕ್ಕೂಟದ ರಾಜ್ಯ ಕಾರ್ಯದರ್ಶಿ ಸುರೇಶ್‌ ರೈ ಸೂಡಿಮುಳ್ಳು ವಂದಿಸಿದರು. ರಾಕೇಶ್‌ ರೈ ಕೆಡೆಂಜಿ ನಿರ್ವಹಿಸಿದರು

ದ.ಕ. ಸಮಗ್ರ
ರಾಜ್ಯಮಟ್ಟದ ಯುವಜನ ಮೇಳದ ವಿವಿಧ ವಿಭಾಗಗಳಲ್ಲಿ ಸ್ಪರ್ಧಿಸಿ ಗರಿಷ್ಠ ಅಂಕಗಳನ್ನು ಪಡೆದುಕೊಂಡ ದ.ಕ. ಜಿಲ್ಲೆಯು ಯುವಕರು ಹಾಗೂ ಯುವತಿಯರ ತಂಡಗಳು ಎರಡೂ ವಿಭಾಗಗಳಲ್ಲಿ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡವು.

Advertisement

Udayavani is now on Telegram. Click here to join our channel and stay updated with the latest news.

Next