ಬೆಳಗಾವಿ: ಜನಸೇವಕ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲು ಭಾನುವಾರ ಬೆಳಗಾವಿಗೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಲಾಯಿತು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜೊತೆ ಆಗಮಿಸಿದ ಕೇಂದ್ರ ಗೃಹ ಸಚಿವರನ್ನು ಬರಮಾಡಿಕೊಳ್ಳಲಾಯಿತು.
ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ಗಣ್ಯರನ್ನು ಸ್ವಾಗತಿಸಿದರು.
ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕರಾದ ಅಭಯ್ ಪಾಟೀಲ, ಮಹೇಶ್ ಕುಮಠಳ್ಳಿ, ಅನಿಲ್ ಬೆನಕೆ, ಮಹಾದೇವಪ್ಪ ಯಾದವಾಡ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಇದನ್ನೂ ಓದಿ:ಅಮಿತ್ ಶಾ ಆಗಮನಕ್ಕೂ ಮುನ್ನ ಬೆಳಗಾವಿ ಬಿಜೆಪಿಯಲ್ಲಿ ಮೂಲ- ವಲಸಿಗ ವಿವಾದ
ವಿಶೇಷ ವಿಮಾನದಲ್ಲಿ ಆಗಮಿಸಿದ ಕೇಂದ್ರ ಸಚಿವ ಅಮಿತ್ ಶಾ ಅವರು ನಂತರ ಬೆಳಗಾವಿ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಬಾಗಲಕೋಟೆಗೆ ತೆರಳಿದರು.