Advertisement

ತಮಿಳನಾಡು, ಕೇರಳ ವಿಧಾನಸಭೆ ಚುನಾವಣೆ ಬಂದೋಬಸ್ತ್ ಗೆ ರಾಜ್ಯದ ಪೊಲೀಸರು

12:56 PM Mar 30, 2021 | Team Udayavani |

ಕಲಬುರಗಿ: ನೆರೆಯ ತಮಿಳುನಾಡು, ಕೇರಳ ರಾಜ್ಯದಲ್ಲಿನ ವಿಧಾನಸಭಾ ಚುನಾವಣೆಗೆ ರಾಜ್ಯದ ಪೊಲೀಸ್ ಪಡೆ ಬಂದೋಬಸ್ತ್ ಗೆ ತೆರಳುತ್ತಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

Advertisement

ಬಸವಕಲ್ಯಾಣ ವಿಧಾನಸಭಾ ಉಪ ಚುನಾವಣೆಯ ನಾಮಪತ್ರ ಸಲ್ಲಿಕೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ ಅವರು ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಚುನಾವಣಾ ಆಯೋಗದ ನಿರ್ದೇಶನಂತೆ ಪೊಲೀಸ್ ಪಡೆ ಆ ರಾಜ್ಯಗಳಿಗೆ ತೆರಳುತ್ತಿದೆ ಎಂದರು.

ಇದನ್ನೂ ಓದಿ:ಸಿಖ್ಖರ ಮೆರವಣಿಗೆಗೆ ಅನುಮತಿ ನಕಾರ, ಖಡ್ಗದಿಂದ ದಾಳಿ, ನಾಲ್ವರು ಪೊಲೀಸರಿಗೆ ಗಾಯ

ಮೂರು ಕ್ಷೇತ್ರದಲ್ಲೂ ಗೆಲುವು: ಈಗ ನಡೆಯುತ್ತಿರುವ ಬೆಳಗಾವಿ ಲೋಕಸಭಾ ಹಾಗೂ ಮಸ್ಕಿ ಮತ್ತು ಬಸವ ಕಲ್ಯಾಣದಲ್ಲಿ ಬಿಜೆಪಿ ಅಭ್ಯರ್ಥಿಗಳು ನಿಸ್ಸಂಶಯವಾಗಿ ಗೆಲುವು ಸಾಧಿಸಲಿದ್ದಾರೆ. ಬೆಳಗಾವಿ ‌ಲೋಕಸಭಾ ಉಪಚುನಾವಣೆಯಲ್ಲಿ ಮಂಗಳಾ ಅಂಗಡಿ ಅವರು ಲಕ್ಷಕ್ಕೂ ಅಧಿಕ ಮತಗಳಿಂದ ಜಯಗಳಿಸಲಿದ್ದಾರೆ ಎಂದು ಗೃಹಸಚಿವರು ವಿಶ್ವಾಸ ವ್ಯಕ್ತಪಡಿಸಿದರು.

Advertisement

ಬಸವ ಕಲ್ಯಾಣದಲ್ಲಿ ಆಕಾಂಕ್ಷಿಗಳು ಹೆಚ್ಚಿರುವುದರಿಂದ ಅಸಮಾಧಾನಗಳು ಉಂಟಾಗುವುದು ಸಹಜ. ಟಿಕೆಟ್ ಸಿಗದೇ ಇರುವುದಕ್ಕೆ ಮುನಿಸಿಕೊಂಡಿರುವ ಮಾಜಿ ಶಾಸಕ ಮಲ್ಲಿಕಾರ್ಜುನ ‌ಖೂಬಾ ಅವರೊಂದಿಗೆ ಮಾತನಾಡುತ್ತೇನೆ ಎಂದು ತಿಳಿಸಿದ ಸಚಿವರು, ಈ ಕ್ಷೇತ್ರದಲ್ಲೂ ಬಿಜೆಪಿ ನಿಶ್ಚಿತವಾಗಿ ಗೆಲ್ಲಲಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಬಸವಕಲ್ಯಾಣದಲ್ಲಿ ಬಿಜೆಪಿ-ಜೆಡಿಎಸ್ ಒಳ ಒಪ್ಪಂದ: ಸಿದ್ದರಾಮಯ್ಯ ಆರೋಪ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಂಗ್ರೆಸ್ ‌ಆಡಳಿತಕ್ಕಿಂತಲೂ ಅತ್ಯುತ್ತಮವಾಗಿದೆ. ಕಾಂಗ್ರೆಸ್ ಪಕ್ಷದವರು ಅನಗತ್ಯವಾಗಿ ಹೇಳಿಕೆ ನೀಡುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಕೊಲೆ, ಸುಲಿಗೆ, ಗಾಂಜಾ ಸಾಗಾಟ ಎಷ್ಟಿತ್ತು ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ. ಸುಮ್ಮನೇ ಹೇಳಿಕೆ ಕೊಡಬೇಕು ಎಂಬ ಉದ್ದೇಶದಿಂದ ಕಾಂಗ್ರೆಸ್ ನವರು ವಿನಾಕಾರಣ ಟೀಕೆ ಮಾಡುತ್ತಿದ್ದಾರೆ ಎಂದರು.

ರಾಜ್ಯದಲ್ಲಿ 52 ಪೊಲೀಸ್ ಠಾಣೆಗಳನ್ನು ಮೇಲ್ದರ್ಜೆಗೆ ಏರಿಸಲಾಗುತ್ತಿದೆ ಎಂದು ಗೃಹ ಸಚಿವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next