Advertisement

ಮರಳಿ ಕಾಂಗ್ರೆಸ್ ಗೂಡಿಗೆ ಹಾರುವುದೇ ಹಳ್ಳಿಹಕ್ಕಿ?

10:27 AM Dec 06, 2022 | Team Udayavani |

ಬೆಂಗಳೂರು: ಮಾಜಿ ಸಚಿವ ಎಚ್. ವಿಶ್ವನಾಥ್ ಮರಳಿ ಕಾಂಗ್ರೆಸ್ ಸೇರ್ಪಡೆ ವಿಚಾರ ಈಗ ಮತ್ತೆ ಚರ್ಚೆಗೆ ಬಂದಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ವಿಶ್ವನಾಥ್ ಮಾತುಕತೆ ನಡೆಸಿದ್ದಾರೆ.

Advertisement

ಮಾಜಿ ಸಿಎಂ ಸಿದ್ದರಾಮಯ್ಯ ಜತೆಗಿನ ಭಿನ್ನಮತದ ಹಿನ್ನೆಲೆ ವಿಶ್ವನಾಥ್ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ್ದರು. ಆ ಬಳಿಕ ಆಪರೇಷನ್ “ಕಮಲ”ಕ್ಕೆ ಬಲಿಯಾಗಿ ಬಿಜೆಪಿಗೆ ಹಾರಿದ್ದರು. ಆದರೆ ಭಾರತೀಯ ಜನತಾ ಪಕ್ಷದಲ್ಲಿ ಉಸಿರುಗಟ್ಟಿಸುವ ವಾತಾವರಣ ಇದೆ ಎಂದು ವಿಶ್ವನಾಥ್ ತಮ್ಮ ಆಪ್ತರ ಬಳಿ ಹೇಳಿಕೊಂಡಿದ್ದಾರೆ.

ಕೆಲದಿನಗಳ ಹಿಂದೆ ನಡೆದ ಕನಕ ಜಯಂತಿ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ವಿಶ್ವನಾಥ ಜತೆಗಿನ ತಮ್ಮ ಒಡನಾಟವನ್ನು ಮೆಲುಕು ಹಾಕಿದ್ದಾರೆ. ಸಮುದಾಯದ ಮುಖಂಡರನ್ನು ಇಬ್ಬರನ್ನೂ ಒಟ್ಟಿಗೆ ಸೇರಿಸಲು ತೆರೆಮರೆಯಲ್ಲಿ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಹೇಳಲಾಗಿದೆ. ಇದರ ಬೆನ್ನಲ್ಲೇ ವಿಶ್ವನಾಥ್ ಮಲ್ಲಿಕಾರ್ಜುನ ಖರ್ಗೆಯವನರನ್ನು ಭೇಟಿ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಕಾಂಗ್ರೆಸ್ ಮೂಲಗಳ ಪ್ರಕಾರ, ವಿಶ್ವನಾಥ್ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕೂಡಾ ಮೃಧು ಧೋರಣೆ ಹೊಂದಿದ್ದಾರೆ. ಹೀಗಾಗಿ ಪಕ್ಷಕ್ಕೆ ಮರಳಿ ಬರುವುದಕ್ಕೆ ಇಚ್ಚಿಸಿದರೆ ಯಾರಿಂದಲೂ ಹೇಳಿಕೊಳ್ಳುವಂಥ ವಿರೋಧ ವ್ಯಕ್ತವಾಗಲಾರದು ಎನ್ನಲಾಗಿದೆ. ಆದರೆ ಪಕ್ಷ ತೊರೆದು ಹೋದವರನ್ನು ಪ್ರಳಯವಾದರೂ ಮತ್ತೆ ಸೇರಿಸಿಕೊಳ್ಳುವುದಿಲ್ಲ ಎಂದು ವಿಧಾನಸಭೆಯಲ್ಲಿ ಮಾಡಿರುವ ಘೋಷಣೆ ಇದಕ್ಕೆ ಅಡ್ಡಿಯಾಗಬಹುದು ಎಂದು ಹೇಳಲಾಗುತ್ತಿದೆ.

ವಿಶ್ವನಾಥ್ ಮರಳಿ ಪಕ್ಷಕ್ಕೆ ಬಂದರೂ ಅವರಿಗೆ ಚುನಾವಣಾ ರಾಜಕಾರಣದಲ್ಲಿ ಅವಕಾಶ ಸಿಗುವ ಸಾಧ್ಯತೆ ಕಡಿಮೆ ಎಂದು ಹೇಳಲಾಗುತ್ತಿದೆ. ಹನೂರು ಕ್ಷೇತ್ರದಲ್ಲಿ ಸಿದ್ದರಾಮಯ್ಯ ಆಪ್ತ ಮಂಜುನಾಥ್ ಶಾಸಕರಾಗಿರುವುದರಿಂದ ಅವರಿಗೆ ಟಿಕೆಟ್ ತಪ್ಪಿಸುವ ಯಾವುದೇ ಸಾಧ್ಯತೆ ಇಲ್ಲ ಎನ್ನಲಾಗುತ್ತಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next