Advertisement

ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರ: 24 ಗಂಟೆ ಸೇವೆಗೆ ಕ್ರಮ: ಸಚಿವ ಸುಧಾಕರ್‌

01:08 AM Sep 20, 2022 | Team Udayavani |

ಬೆಂಗಳೂರು: ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರ ಗಳಲ್ಲಿ ದಿನದ 24 ಗಂಟೆಯೂ ಸೇವೆ ಲಭ್ಯವಾಗುವಂತೆ ಕ್ರಮ ಕೈಗೊಳ್ಳ ಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಕೆ. ಸುಧಾಕರ್‌ ತಿಳಿಸಿದ್ದಾರೆ.

Advertisement

ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್‌ನ ಮಂಜೇಗೌಡರ ಪ್ರಶ್ನೆಗೆ ಉತ್ತರಿಸಿ, ಪ್ರಸಕ್ತ ಸಾಲಿನಲ್ಲಿ ನೂರು ಪಿಎಚ್‌ಸಿಗಳನ್ನು ಸಮು ದಾಯ ಆರೋಗ್ಯ ಕೇಂದ್ರಗಳನ್ನಾಗಿ ಉನ್ನತೀ ಕರಿಸಲಾಗುವುದು. ಇದ ರೊಂದಿಗೆ ಪಿಎಚ್‌ಸಿಗಳ ಸೇವೆ ದಿನ ವಿಡೀ ಲಭ್ಯವಾಗುವಂತೆ ಮಾಡಲಾಗುವುದು.

ದೂರುಗಳನ್ನು ಆಲಿಸಿ ನಿಗದಿತ ಅವಧಿಯಲ್ಲಿ ಪರಿಹರಿಸಲೂ ವ್ಯವಸ್ಥೆ ಕಲ್ಪಿಸ ಲಾಗಿದೆ. ಡಯಾಲಿಸಿಸ್‌ ಸೈಕಲ್‌ 30 ಸಾವಿರ ಇದ್ದದ್ದನ್ನು 60 ಸಾವಿರಕ್ಕೆ ಹೆಚ್ಚಿಸಲಾಗಿದೆ ಎಂದರು.

ಜನಸಂಖ್ಯೆಗೆ ಅನುಗುಣವಾಗಿ ಪಿಎಚ್‌ಸಿ ಗಳನ್ನು ಸ್ಥಾಪಿಸಲಾಗುತ್ತಿದ್ದು, ಪ್ರಸ್ತುತ 107 ಪಿಎಚ್‌ಸಿಗಳು ಕಡಿಮೆ ಇವೆ.

Advertisement

Udayavani is now on Telegram. Click here to join our channel and stay updated with the latest news.

Next