Advertisement
‘ಕರ್ನಾಟಕವನ್ನು ಎಲ್ಲಾ ವಲಯಗಳಲ್ಲೂ ಬರ್ಬಾದ್ ಮಾಡುವುದೇ ಕಾಂಗ್ರೆಸ್ ಸರ್ಕಾರದ ಅಸಲಿ ಕರ್ನಾಟಕ ಮಾಡೆಲ್, ಈಗಾಗಲೇ ಸುಭಿಕ್ಷವಾಗಿದ್ದ ಕರ್ನಾಟಕವನ್ನು ಒಂದು ವರ್ಷದಲ್ಲಿ ಹಾಳು ಮಾಡಿದ್ದು, ಇದರ ಸಂಪೂರ್ಣ ಶ್ರೇಯ ಕಾಂಗ್ರೆಸ್ ಪಕ್ಷಕ್ಕೆ ಸಲ್ಲುತ್ತದೆ ಎಂದು ವಾಗ್ದಾಳಿ ನಡೆಸಿದೆ.
ಬಾಕಿ ಪಾವತಿಸಿ ಎಂದು ಪತ್ರ
Related Articles
Advertisement
ಡೆಂಘೀ ನಿಯಂತ್ರಣದಲ್ಲಿ ಸರ್ಕಾರ ವಿಫಲರಾಜ್ಯದಲ್ಲಿ ಡೆಂಘೀ ಪ್ರಕರಣಗಳ ಸಂಖ್ಯೆಯಲ್ಲಿ ಭಾರಿ ಏರಿಕೆಯಾಗಿದ್ದರೂ ಸರ್ಕಾರ ಹಾಗೂ ಆರೋಗ್ಯ ಇಲಾಖೆ ಅದರ ನಿಯಂತ್ರಿಸುವಲ್ಲಿ ವಿಫಲವಾಗಿದೆ ಎಂದು ಬಿಜೆಪಿ ಟೀಕಿಸಿದೆ. “ಡೆಂಘೀಯನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣ ಎಚ್ಚರವಹಿಸಬೇಕಿದ್ದ ಆರೋಗ್ಯ ಇಲಾಖೆ ಸಿದ್ದರಾಮಯ್ಯರನ್ನೂ ಮೀರಿಸುವಂತೆ ನಿದ್ದೆಗೆ ಶರಣಾಗಿದ್ದೇ ಡೆಂಘೀ ರಾಜ್ಯದೆಲ್ಲೆಡೆ ಹಬ್ಬಲು ಪ್ರಮುಖ ಕಾರಣ. ಜವಾಬ್ದಾರಿಯುಳ್ಳ ಮಗನಿದ್ದರೆ ಮನೆ ಚೆನ್ನಾಗಿರುತ್ತದೆ ಎಂಬ ಮಾತಿದೆ, ಆದರೆ ವಿಪರ್ಯಾಸವೆಂದರೆ ಕರ್ನಾಟಕದ ಘನತೆವೆತ್ತ ಸರ್ಕಾರದಲ್ಲಿ ಬಹುತೇಕ ಸಚಿವರೆಲ್ಲರೂ ಬೇಜವಾಬ್ದಾರಿಗಳು, ಅದರಲ್ಲಿಯೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೊಣೆ ಹೊತ್ತ ಸಚಿವ ದಿನೇಶ್ ಗುಂಡೂರಾವ್ ಅದ್ಯಾವ ದೇಶದಲ್ಲಿದ್ದಾರೆ ಏನು ಮಾಡುತ್ತಿದ್ದಾರೆ ಎಂಬುದು ತಿಳಿಯದು” ಎಂದು ಎಕ್ಸ್ ಖಾತೆಯಲ್ಲಿ ವ್ಯಂಗ್ಯವಾಡಿದೆ. ಕಾಂಗ್ರೆಸ್ ಸರ್ಕಾರ ಕರ್ನಾಟಕಕ್ಕೆ ವಕ್ಕರಿಸಿದ ದಿನದಿಂದ ಇಲ್ಲಿಯವರೆಗೂ ಕಲುಷಿತ ನೀರು ಸೇವಿಸಿ ಅಸುನೀಗಿದ ಹಾಗೂ ಅಸ್ವಸ್ಥಗೊಂಡವರ ಸಂಖ್ಯೆ ದಿನೇ ದಿನೇ ಏರುತ್ತಿದೆ. ಕನ್ನಡಿಗರಿಗೆ ಶುದ್ಧ ಕುಡಿಯುವ ನೀರನ್ನೂ ನೀಡಲಾಗದ ಅಯೋಗ್ಯ ಸರ್ಕಾರ ಎಂಬ ಕುಖ್ಯಾತಿ ಕಾಂಗ್ರೆಸ್‌ನದ್ದು ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.