Advertisement

ರಾಜ್ಯದಲ್ಲಿ50 ಸಾವಿರ ಕೋಟಿ ರೂ. ಹೂಡಿಕೆ; ಇಂಧನ ಕ್ಷೇತ್ರದಲ್ಲಿ ಭರ್ಜರಿ ಒಪ್ಪಂದ

02:05 AM May 25, 2022 | Team Udayavani |

ದಾವೋಸ್‌: ಕರ್ನಾಟಕದಲ್ಲಿ ನವೀ ಕರಿಸಬಹುದಾದ ಇಂಧನ ಕ್ಷೇತ್ರಕ್ಕೆ ಸಂಬಂಧಿಸಿ ರೆನ್ಯೂ ಪವರ್‌ ಪ್ರೈ.ಲಿ ಕಂಪೆನಿ ರಾಜ್ಯದಲ್ಲಿ 50 ಸಾವಿರ ಕೋಟಿ ರೂ. ಬಂಡವಾಳ ಹೂಡಿಕೆ ಮಾಡಲಿದೆ.

Advertisement

ಈ ಬಗ್ಗೆ ಸ್ವಿಜರ್ಲೆಂಡ್‌ನ‌ ದಾವೋಸ್‌ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವ ರು ಕಂಪೆನಿಯ ಪ್ರತಿನಿಧಿಗಳ ಜತೆಗೆ ಮಾತುಕತೆ ನಡೆಸಿ, ಒಪ್ಪಂದಕ್ಕೆ ಸಹಿ ಹಾಕಿದರು.

ಪ್ರಧಾನ ಅಂಶವೆಂದರೆ ಬೊಮ್ಮಾಯಿ ಮುಖ್ಯಮಂತ್ರಿಯಾದ ಅನಂತರ ರಾಜ್ಯದಲ್ಲಿ ಹೂಡಿಕೆ ಯಾಗುತ್ತಿರುವ ದೊಡ್ಡ ಮೊತ್ತದ ಬಂಡವಾಳ ಇದಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಬೊಮ್ಮಾಯಿ, ಕರ್ನಾಟಕದ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಈ ಒಪ್ಪಂದ ಪ್ರಮುಖ ಮೈಲಿಗಲ್ಲಾಗಿದೆ ಎಂದರು.

ರೆನ್ಯೂ ಪವರ್‌ ಪ್ರೈ. ಲಿ. ಕಂಪೆನಿ ಮುಂದಿನ 7 ವರ್ಷಗಳಲ್ಲಿ ನವೀಕರಿಸಬಹುದಾದ ಇಂಧನ, ಬ್ಯಾಟರಿ ಸ್ಟೋರೇಜ್‌, ಗ್ರೀನ್‌ ಹೈಡ್ರೋ ಜನ್‌ ಘಟಕಗಳನ್ನು ಸ್ಥಾಪಿಸಲುದ್ದೇ ಶಿಸಿದೆ. 2 ಹಂತಗ ಳಲ್ಲಿ ಯೋಜನೆಗಳನ್ನು ಕೈಗೊಳ್ಳ ಲಾಗುತ್ತದೆ.

ಮೊದಲ ಹಂತದಲ್ಲಿ ಈಗಾಗಲೇ ಇರುವ ಯೋಜನೆಗಳಿಗೆ 11,900 ಕೋಟಿ ರೂ.ಗಳ ಹೂಡಿಕೆ ಮಾಡಲಿದೆ ಮತ್ತು ಮುಂದಿನ 2 ವರ್ಷಗಳಲ್ಲಿ ಯೋಜನೆಗಳು ಕಾರ್ಯಾರಂಭ ಮಾಡಲಾಗುತ್ತದೆ. ಎರಡನೇ ಹಂತದಲ್ಲಿ ನವೀಕರಿಸಬಹುದಾದ ಇಂಧನ ಹಾಗೂ ಗ್ರೀನ್‌ ಹೈಡ್ರೋಜನ್‌ ಘಟಕಗಳನ್ನು 5 ವರ್ಷಗಳಲ್ಲಿ ಸ್ಥಾಪಿಸಲು 37,500 ಕೋಟಿ ರೂ.ಹೂಡಿಕೆ ಮಾಡಲಾಗುತ್ತದೆ. ಈ ಎರಡು ಹಂತದ ಯೋಜನೆಗಳಿಂದ ಸುಮಾರು 30 ಸಾವಿರ ಉದ್ಯೋಗ ಸೃಷ್ಟಿಯ ನಿರೀಕ್ಷೆ ಇದೆ ಎಂದರು.

Advertisement

ರೆನ್ಯೂ ಪವರ್‌ ಪ್ರೈ.ಲಿ. ಸಂಸ್ಥೆ
ಭಾರತದಲ್ಲಿ ನವೀಕರಿಸ ಬಹುದಾದ ಇಂಧ ನದ ಉತ್ಪಾದನೆಯಲ್ಲಿ ತೊಡಗಿರುವ ಅತ್ಯಂತ ದೊಡ್ಡ ಸಂಸ್ಥೆ. ಭಾರತದ 9 ರಾಜ್ಯಗಳಲ್ಲಿ 120ಕ್ಕೂ ಹೆಚ್ಚು ಪವನ, ಸೌರ ಹಾಗೂ ಹೈಡ್ರೋ ಇಂಧನ ಪ್ರಾಜೆಕ್ಟ್ಗಳನ್ನು ಸ್ಥಾಪಿಸಿದೆ.

ಮೆಗಾ ಡಾಟಾ ಸೆಂಟರ್‌
ಇದಕ್ಕೂ ಮುನ್ನ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದ ಭಾರ್ತಿ ಎಂಟರ್‌ ಪ್ರೈಸಸ್‌ನ ಅಧ್ಯಕ್ಷ ಹಾಗೂ ಸಿಇಒ ಸುನಿಲ್‌ ಭಾರ್ತಿ ಮಿತ್ತಲ್‌ ಅವರು ರಾಜ್ಯದಲ್ಲಿ ಇನ್ನೊಂದು ಮೆಗಾ ಡಾಟಾ ಸೆಂಟರ್‌ ಸ್ಥಾಪಿಸುವ ಇಂಗಿತ ವ್ಯಕ್ತಪಡಿಸಿದರು. ಅಗತ್ಯ ಬೆಂಬಲ ನೀಡುವುದಾಗಿ ಮುಖ್ಯಮಂತ್ರಿಗ ತಿಳಿಸಿದರು.

ಮುಖ್ಯಮಂತ್ರಿ ಬೊಮ್ಮಾಯಿ ಅವರು ಮಂಗಳವಾರ ಅದಾನಿ ಗ್ರೂಪ್‌ ಅಧ್ಯಕ್ಷ ಗೌತಮ್‌ ಅದಾನಿ ಅವರೊಂದಿಗೆ ಹಾಗೂ ಜಾನ್ಸನ್‌ ಕಂಟ್ರೋಲ್ಸನ ಸಿಇಒ ಜಾರ್ಜ್‌ ಒಲಿವರ್‌, ಹನಿವೇಲ್‌ ಹಾಗೂ ಐಬಿಎಂ ಸಂಸ್ಥೆಗಳ ಮುಖ್ಯಸ್ಥರೊಂಂದಿಗೆ ಕರ್ನಾಟಕದಲ್ಲಿನ ಹೂಡಿಕೆಗಳ ಅವಕಾಶ ಗಳ ಬಗ್ಗೆ ಮಾತುಕತೆ ನಡೆಸಿದರು. ಕೈಗಾರಿಕಾ ಸಚಿವ ಮುರುಗೇಶ್‌ ನಿರಾಣಿ, ಐಟಿ ಬಿಟಿ, ಉನ್ನತ ಶಿಕ್ಷಣ ಹಾಗೂ ಕೌಶಲಾಭಿವೃದ್ಧಿ ಸಚಿವ ಡಾ| ಸಿ.ಎನ್‌. ಅಶ್ವತ್ಥನಾರಾಯಣ, ಕೈಗಾರಿಕಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ| ಇ.ವಿ. ರಮಣ ರೆಡ್ಡಿ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್‌. ಮಂಜುನಾಥ್‌ ಪ್ರಸಾದ್‌, ಕೈಗಾರಿಕಾ ಇಲಾಖೆ ಆಯುಕ್ತರಾದ ಗುಂಜನ್‌ ಕೃಷ್ಣ ಉಪಸ್ಥಿತರಿದ್ದರು.

 

Advertisement

Udayavani is now on Telegram. Click here to join our channel and stay updated with the latest news.

Next