Advertisement

ಕೃಷಿಕಾಯ್ದೆಗಳ ಬಗ್ಗೆ ರೈತರಿಗೆ ಸಮರ್ಪಕ ಮಾಹಿತಿ ನೀಡಲು ರಾಜ್ಯಪ್ರವಾಸ; ಬಿ.ಸಿ. ಪಾಟೀಲ್

11:40 AM Dec 09, 2020 | Mithun PG |

ಬೆಂಗಳೂರು: ಅಧಿವೇಶನ ಮುಗಿದ ಬಳಿಕ ರೈತರಿಗೆ ಕಾಯಿದೆ ಬಗ್ಗೆ ಮಾಹಿತಿ ನೀಡಲು ರಾಜ್ಯ ಪ್ರವಾಸ ಕೈಗೊಳ್ಳುತ್ತಿದ್ದು, ಪಶುಸಂಗೋಪನೆ, ಸಹಕಾರಿ, ಕಂದಾಯ ಸಚಿವರು ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದ್ದೇವೆ. ಪ್ರವಾಸ ಮಾಡಿ ರೈತರ ಕಾಯಿದೆ ತಿದ್ದುಪಡಿಯಿಂದಾಗುವ ಅನುಕೂಲಕತೆ ಬಗ್ಗೆ ರೈತರಲ್ಲಿ ಮನವರಿಕೆ ಮಾಡಿಕೊಡಲಾಗುವುದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.

Advertisement

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಸಿ.ಪಾಟೀಲ್, ರೈತರು ಬಾರುಕೋಲು ಹಿಡಿದು ಚಳುವಳಿ ಮಾಡುವಂತಹದ್ದೇನಾಗಿಲ್ಲ. ದೇಶ ಹಾಗೂ ರಾಜ್ಯದ ರೈತರ ಅನುಕೂಲಕ್ಕಾಗಿಯೇ ಕಾಯಿದೆ ತರಲಾಗಿದೆ.

ಕಾಂಗ್ರೆಸ್ 2019ರ ಪ್ರಣಾಳಿಕೆಯಲ್ಲಿ ಎಪಿಎಂಸಿ ರದ್ದುಮಾಡಿ ಮುಕ್ತಮಾರುಕಟ್ಟೆ ಮಾಡುವ ಬಗ್ಗೆ ನೀಡಿದ ಭರವಸೆ ನೀಡಿದ್ದರು. ನಮ್ಮ ಸರ್ಕಾರ ಅವರು ಹೇಳಿದ್ದನ್ನೇ ಮಾಡಿದೆ. ಇದಕ್ಕೆ ಕಾಂಗ್ರೆಸ್‌ನವರು ಮೆಚ್ಚುಗೆ ವ್ಯಕ್ತಪಡಿಸಬೇಕೇ ಹೊರತು ರಾಜಕೀಯಕ್ಕಾಗಿ ವಿರೋಧಿಸುವುದಲ್ಲ. ಹೇಳಿದ್ದೂ ಕಾಂಗ್ರೆಸ್ಸೇ ವಿರೋಧಿಸುತ್ತಿರುವುದು ಕಾಂಗ್ರೆಸ್ಸೇ ಎಂದರೆ ಏನರ್ಥ? ಸಿದ್ದರಾಮಯ್ಯ ಸಹ ಹಿಂದೆ ಕಾಯಿದೆ ತಿದ್ದುಪಡಿಗಾಗಿ ಪತ್ರ ಬರೆದಿದ್ದರು. ಹೂವುಹಣ್ಣು ತರಕಾರಿಗಳನ್ನು ಎಪಿಎಂಸಿಯಿಂದ ಹೊರಗಿಡಬೇಕು. ಇದರಿಂದ ರೈತರ ಶೋಷಣೆಯಾಗುತ್ತಿದೆ ಎಂದಿದ್ದರು. ರೈತರು ಬುದ್ಧಿವಂತರಿದ್ದಾರೆ. ಅವರಿಗೆ ಸರಿತಪ್ಪುಗಳ ಬಗ್ಗೆ ಅರಿವಿದೆ. ತಾವು ನಡೆಸಿದ ಪ್ರವಾಸದಲ್ಲಿ ಎಲ್ಲಿಯೂ ರೈತರೂ ಈ ಕಾಯಿದೆಗಳನ್ನು ವಿರೋಧಿಸಿಲ್ಲ .ವಿನಾಕಾರಣ ರಾಜಕೀಯಕ್ಕಾಗಿ ಕಾಂಗ್ರೆಸ್ ಸುಮ್ಮನೆ ಆರೋಪಿಸುವುದು ಸರಿಯಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದರೆ ಭರವಸೆ ಈಡೇರಿಸುತ್ತಿರಲಿಲ್ಲವೇ? ದ್ವಿಮುಖ ನಿಲುವನ್ನು ಕಾಂಗ್ರೆಸ್ ಬಿಡಬೇಕು ಎಂದರು.

ಇದನ್ನೂ ಓದಿ: ಲಂಚ ಪ್ರಕರಣ: ಮಹಿಳಾ ಪೊಲೀಸ್ ಅಧಿಕಾರಿಗೆ 4 ವರ್ಷ ಜೈಲು ಶಿಕ್ಷೆ; 5 ಸಾವಿರ ದಂಡ

ಈಗಾಗಲೇ ಒಂದು ಸಾರಿ ಪ್ರವಾಸ ಮಾಡಿದ್ದೇವೆ. ಆದರೆ ಎಲ್ಲಿಯೂ ಕೂಡ ಯಾವ ರೈತರಿಂದಲೂ ಕಾಯಿದೆ ಬಗ್ಗೆ ಅಪಸ್ವರ ಬಂದಿಲ್ಲ. ವಿಧಾನಸಭೆ ಅಧಿವೇಶನ ನಡೆಯುವಾಗ ಇಂತಹ ಪ್ರತಿಭಟನೆ ಸಹಜ. ಇದರಿಂದ ಸಾರ್ವಜನಿಕರಿಗೆ ಸುಮ್ಮನೆ ತೊಂದರೆ ಕೊಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ಕಾಯಿದೆ ಬದಲಾವಣೆ ಇಲ್ಲ.ಈಗಾಗಲೇ ಕೇಂದ್ರ ಹಾಗೂ ರಾಜ್ಯ ಸರ್ಕಾರ ಈ ಬಗ್ಗೆ ಸ್ಪಷ್ಟ ಪಡಿಸಿದೆ ಎಂದು ತಿಳಿಸಿದರು.

Advertisement

ರೈತರ ಬಗ್ಗೆ ಮಾತನಾಡುವ ಎಐಸಿಸಿ ನಾಯಕ ರಾಹುಲ್ ಗಾಂಧಿ ಎಂದಿಗೂ ಹೊಲಕ್ಕೆ ಹೋಗಿ ಕೆಸರು ತುಳಿದಿಲ್ಲ. ಅವರಿಗೆ ಹೊಲ ಉಳುಮೆ, ಬಿತ್ತುವುದು ಏನೂ ಗೊತ್ತಿಲ್ಲ. ಅವರ ಮುಂದೆ ಬೆಳೆಗಳನ್ನು ಇಟ್ಟರೆ ಯಾವ ಬೆಳೆ ಎನ್ನುವುದೇ ಗೊತ್ತಿಲ್ಲ. ಇವತ್ತಿಗೂ ರಾಹುಲ್‌ ಗಾಂಧಿಗೆ ಹಸುವಿನ ಹಾಲು ಎಲ್ಲಿಂದ ಬರುತ್ತದೇ ಎಂಬುದೇ ಗೊತ್ತಿಲ್ಲ. ಅಕ್ಕಿ ಎಲ್ಲಿಂದ ಬರುತ್ತದೆ ಎಂದು ಕೇಳಿದರೆ ಭತ್ತದಿಂದ ಬರುತ್ತದೆ ಎಂದು ಹೇಳಲು ಗೊತ್ತಿಲ್ಲ. ಪಾಪ ಅವರು ಎಲ್ಲೋ ಹೈಫೈ ನಲ್ಲಿ ವಿದೇಶದಲ್ಲಿ ಓದಿಕೊಂಡು ಬಂದಿರುವುದರಿಂದ ಅವರಿಗೆ ರೈತನ ಕಷ್ಟ ಏನು ಗೊತ್ತಿಲ್ಲ ಎಂದು ಬಿ.ಸಿ. ಪಾಟೀಲ್ ಹೇಳಿದರು.

ಇದನ್ನೂ ಓದಿ: ನೇಣು ಬಿಗಿದ ಸ್ಥಿತಿಯಲ್ಲಿ ಖ್ಯಾತ ಕಿರುತೆರೆ ನಟಿ, ನಿರೂಪಕಿ ಮೃತದೇಹ ಪತ್ತೆ: ಆತ್ಮಹತ್ಯೆ ಶಂಕೆ

Advertisement

Udayavani is now on Telegram. Click here to join our channel and stay updated with the latest news.

Next