ಬೆಂಗಳೂರು: ಮುಡಾ ಪ್ರಕರಣ ವಿಷಯವಾಗಿ ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಿರುವುದನ್ನು ವಿರೋಧಿ ಕಾಂಗ್ರೆಸ್ ರಾಜ್ಯಾದ್ಯಂತ ಹೋರಾಟಕ್ಕೆ ಸಜ್ಜಾಗಿದೆ. ಸೋಮವಾರ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆಗೆ ಸಿದ್ಧತೆ ನಡೆ ಸಿದೆ. ರಾಜ್ಯಪಾಲರು ಕೇಂದ್ರದ ಕೈಗೊಂಬೆಯಂತೆ ವರ್ತಿಸು ತ್ತಿದ್ದಾರೆಂದು ಆರೋ ಪಿಸಿ ರಾಷ್ಟ್ರಪತಿಗಳಿಗೂ ಇ-ಮೇಲ್ ಮೂಲಕ ಮನವಿ ಪತ್ರವನ್ನು ಕಳುಹಿಸಿ ಕೊಡಲು ಮುಂದಾಗಿದೆ.
ಎಲ್ಲ ಜಿಲ್ಲಾ ಕಾಂಗ್ರೆಸ್ ಸಮಿತಿಗಳು ಜಿಲ್ಲಾ ಕೇಂದ್ರಗಳಲ್ಲಿ ಆ. 19ರಂದು ಬೆಳಗ್ಗೆ 11 ಗಂಟೆಗೆ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಜಿಲ್ಲಾ ಕಾಂಗ್ರೆಸ್ ಮುಖಂಡರಿಗೆ ಸೂಚನೆ ನೀಡಿದ್ದಾರೆ. ಸಚಿವರು, ಶಾಸಕರು ಕೂಡ ಕಡ್ಡಾಯವಾಗಿ ಜಿಲ್ಲಾ ಪ್ರತಿಭಟನೆಗಳಲ್ಲಿ ಭಾಗವಹಿಸುವಂತೆ ತಿಳಿಸಿದ್ದಾರೆ.
ರಾಜ್ಯಪಾಲರ ಅಸಾಂವಿಧಾನಿಕ ನಡೆ ಖಂಡಿಸಿ ರಾಷ್ಟ್ರಪತಿಗಳಿಗೆ ನೇರವಾಗಿ ಇ-ಮೇಲ್ ಮೂಲಕ (presidentofindia@rb.nic.in) ಹಾಗೂ ಸಂಬಂಧಪಟ್ಟ ಜಿಲ್ಲಾಧಿಕಾರಿಗಳ ಮೂಲಕ ಜ್ಞಾಪನ ಪತ್ರವನ್ನು ನೀಡಬೇಕು ಎಂದು ಸೂಚಿಸಲಾಗಿದೆ.
ಕನಿಷ್ಠ ಅರ್ಧ ಕಿಲೋಮೀಟರ್ ಪಾದಯಾತ್ರೆ ಮೂಲಕ ಹೋಗಿ ಪ್ರತಿಭಟನೆ ನಡೆಸಬೇಕು ಎಂದು ಸೂಚನೆ ನೀಡಿದ್ದಾರೆ.
ರಾಜಭವನ, ಸಿಎಂ ನಿವಾಸದೆದುರು ಪ್ರತಿಭಟನೆ
ಮುಡಾ ಪ್ರಕರಣದ ಸಂಬಂಧ ರಾಜಭವನದ ನಡೆ ವಿರುದ್ಧ ಸಿದ್ದರಾಮಯ್ಯ ಬೆಂಬಲಿಗರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ರಾಜಭವನ ಹಾಗೂ ಸಿಎಂ ನಿವಾಸದೆದುರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯಪಾಲರ ಮೂಲಕ ಮೋದಿ, ಶಾ ಕುತಂತ್ರ ನಡೆಸಿದ್ದಾರೆಂದು ಆರೋಪ ಮಾಡಿ ದ್ದಾರೆ.