ಬೆಂಗಳೂರು: ಕಳೆದ ನಾಲ್ಕು ತ್ರೈಮಾಸಿಕಕ್ಕೆ ಹೋಲಿಕೆ ಮಾಡಿದರೆ ದೇಶಕ್ಕೆ ವಿದೇಶಿ ನೇರ ಬಂಡವಾಳ ಅತಿ ಹೆಚ್ಚು ಬಂದಿದ್ದು, ಇದರಲ್ಲಿ ನಂಬರ್ ಒನ್ ಪಾಲು ಕರ್ನಾಟಕಕ್ಕೆ ಹರಿದು ಬಂದಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ನಾಳೆಯಿಂದ ಒಂದು ವಾರ ದಾವೂಸ್ ನಲ್ಲಿ ನಡೆಯುವ ವಿಶ್ವ ಆರ್ಥಿಕ ಒಕ್ಕೂಟದ ಸಮ್ಮೇಳನದಲ್ಲಿ ಭಾಗವಹಿಸಲು ತೆರಳುವ ಮುನ್ನ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಸಮ್ಮೇಳನದಲ್ಲಿ ವಿಶ್ವದ ಹೆಸರಾಂತ ಪ್ರಮುಖರನ್ನು ಮತ್ತು ಕೈಗಾರಿಕೋದ್ಯಮಿಗಳನ್ನು ಭೇಟಿ ಮಾಡಲಾಗುವುದು. ಕಳೆದ ನಾಲ್ಕು ತ್ರೈಮಾಸಿಕದಕ್ಕೆ ಹೋಲಿಕೆ ಮಾಡಿದರೆ ದೇಶಕ್ಕೆ ಹೆಚ್ವು ವಿದೇಶಿ ಬಂಡವಾಳ ಬಂದಿದೆ.ಇದರಕ್ಕೆ ರಾಜ್ಯ ಮೊದಲ ಸ್ಥಾನದಲ್ಲಿದೆ.ಹಾಗಾಗಿ ನಮಗೆ ಹೆಚ್ಚು ಉತ್ಸಾಹ ಇದೆ ಎಂದರು.
ಇದನ್ನೂ ಓದಿ:ದಾವಣಗೆರೆ ಪಾಲಿಕೆ ಉಪಚುನಾವಣೆ: ಕೈ ತೆಕ್ಕೆಯಲ್ಲಿದ್ದ ಎರಡೂ ಕ್ಷೇತ್ರಗಳನ್ನು ಗೆದ್ದ ಬಿಜೆಪಿ
Related Articles
ಇನ್ನೂ ಹಲವಾರು ಜನ ರಾಜ್ಯದಲ್ಲಿ ಬಂಡವಾಳ ಹೂಡಲು ಮುಂದೆ ಬಂದಿದ್ದಾರೆ. ವಿಶೇಷವಾಗಿ ನವೆಂಬರ್ ನಲ್ಲಿ ರಾಜ್ಯದಲ್ಲಿ ನಡೆಯಲಿರುವ ಗ್ಲೋಬಲ್ ಇನ್ವೆಸ್ಟ್ ಮೀಟ್ ಗೆ ಬಹುದೊಡ್ಡ ಪ್ರತಿಕ್ರಿಯೆ ಸಿಗುವ ವಿಶ್ವಾಸವಿದೆ. ಈ ಎಲ್ಲ ಪ್ರಕಿಯೆಗಳ ಮಧ್ಯೆ ದೇಶ ಮತ್ತು ವಿದೇಶಗಳ ಹಲವಾರು ಕೈಗಾರಿಕೆಗಳು ರಾಜ್ಯದಲ್ಲಿ ಸ್ಥಾಪನೆಗೊಳ್ಳಲಿವೆ ಎಂದರು.
ಈ ಸಂದರ್ಭದಲ್ಲಿ ಅಬಕಾರಿ ಸಚಿವ ಕೆ.ಗೋಪಾಲಯ್ಯ, ಗಣಿ ಖಾತೆ ಸಚಿವ ಸಿ.ಸಿ.ಪಾಟೀಲ್, ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್, ಮುನಿರತ್ನ ಉಪಸ್ಥಿತರಿದ್ದರು.