Advertisement

ನಕ್ಸಲರು ನುಸುಳುವ ಆತಂಕ: ರಾಜ್ಯದಲ್ಲಿ ಕಟ್ಟೆಚ್ಚರ

12:20 AM Mar 10, 2019 | |

ಮಡಿಕೇರಿ/ಬೆಂಗಳೂರು: ಕೇರಳದ ವಯನಾಡು, ಚಾಮರಾಜನಗರ ಗಡಿ ಸೇರಿದಂತೆ ಕೊಡಗು-ಕೇರಳ ಗಡಿಗಳಿಗೆ ಹೊಂದಿಕೊಂಡಂತಿರುವ ದಟ್ಟ ಅರಣ್ಯಗಳಲ್ಲಿ ಶಂಕಿತ ನಕ್ಸಲರ ಚಲನವಲನ ಕಂಡುಬಂದಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ಗಡಿ ಭಾಗಗಳಲ್ಲಿ ಶೋಧ ಕಾರ್ಯಾಚರಣೆ ಚುರುಕುಗೊಳಿಸಲಾಗಿದೆ. ಅಂತೆಯೇ ನಕ್ಸಲರು ರಾಜ್ಯಕ್ಕೆ ಆಗಮಿಸುವ ವದಂತಿ ಹಿನ್ನೆಲೆಯಲ್ಲಿ ಪೊಲೀಸ್‌ ಇಲಾಖೆ ಅಲರ್ಟ್‌ ಆಗಿದೆ.

Advertisement

ಕೇರಳದ ವಯನಾಡಿನ ಅರಣ್ಯದಲ್ಲಿ ಶಂಕಿತ ನಕ್ಸಲರು ಮತ್ತು ಕೇರಳದ ಥಂಡರ್‌ ಬೋಲ್ಟ್ ಕಮಾಂಡೋಗಳ ನಡುವೆ ಪರಸ್ಪರ ಗುಂಡಿನ ಚಕಮಕಿ ನಡೆದಿದೆ ಎನ್ನಲಾಗುತ್ತಿದೆ. ಗುಂಡಿನ ಚಕಮಕಿಯ ಬಳಿಕ ನಕ್ಸಲರು ತಪ್ಪಿಸಿಕೊಂಡಿದ್ದು, ಕೊಡಗು ಜಿಲ್ಲೆಯ ಕಡೆ ನುಸುಳುವ ಸಾಧ್ಯತೆಯಿದೆ ಎಂದು ರಾಜ್ಯ ಗುಪ್ತಚರ ಇಲಾಖೆ ಮಾಹಿತಿ ನೀಡಿದೆ.

ನಕ್ಸಲ್‌ ನಿಗ್ರಹ ದಳದ 2 ತಂಡಗಳ 60 ಶಸ್ತ್ರಸಜ್ಜಿತ ಸಿಬ್ಬಂದಿ ಮತ್ತು ಪೊಲೀಸ್‌ ಸಶಸ್ತ್ರ ದಳದ ಸಿಬ್ಬಂದಿ ಶೋಧ ನಡೆಸುತ್ತಿದ್ದು, ಕೊಡಗು ಜಿಲ್ಲೆಯ ಗಡಿ ಭಾಗಗಳಲ್ಲಿ ಹದ್ದಿನ ಕಣ್ಣಿಡಲಾಗಿದೆ. ಈ ಕುರಿತು “ಉದಯವಾಣಿ’ ಜತೆ ಮಾತನಾಡಿದ ರಾಜ್ಯ ಕಾನೂನು ಸುವ್ಯವಸ್ಥೆ ಎಡಿಜಿಪಿ ಕಮಲ್‌ಪಂಥ್‌, “ರಾಜ್ಯದಲ್ಲಿ ನಕ್ಸಲ್‌ ಚಟುವಟಿಕೆಗಳು ಚಿಗುರಲು ಅವಕಾಶ ನೀಡದಂತೆ ಹಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ನಕ್ಸಲ್‌ ಕೇಂದ್ರಿತ ಭಾಗಗಳಲ್ಲಿ ಆಗಾಗ್ಗೆ ಕೂಂಬಿಂಗ್‌ ಕಾರ್ಯಾಚರಣೆ ಕೂಡ ಮಾಡಲಾಗುತ್ತಿರುತ್ತದೆ ಎಂದು ಹೇಳಿದರು.

ರಾಜ್ಯ ಗುಪ್ತದಳ ಮಾಹಿತಿ ನೀಡಿರುವ ಹಿನ್ನೆಲೆಯಲ್ಲಿ 15 ದಿನಗಳಿಂದ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಕೊಡಗು ಎಸ್‌ಪಿ ಡಾ. ಸುಮನ್‌ ಪನ್ನೇಕರ್‌ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next