Advertisement

ಬೀದರನಲ್ಲಿ ರಾಜ್ಯ ಯುವಜನ ಮೇಳ ನಡೆಯಲಿ

12:13 PM Dec 14, 2021 | Team Udayavani |

ಬೀದರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಜಿಲ್ಲೆಯ ಯುವಕ/ಯುವತಿ ಸಂಘಗಳ ಆಶ್ರಯದಲ್ಲಿ ಸೋಮವಾರ ನಗರದ ರಂಗ ಮಂದಿರದಲ್ಲಿ ಪ್ರಸಕ್ತ ಸಾಲಿನ ಜಿಲ್ಲಾ ಮಟ್ಟದ ಯುವಜನೋತ್ಸವಕ್ಕೆ ಕಲಾ ತಂಡಗಳ ಆಯ್ಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

Advertisement

ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟದ ಅಧ್ಯಕ್ಷ ವಿಜಯಕುಮಾರ ಸೋನಾರೆ ಮುಖ್ಯ ಅತಿಥಿಯಾಗಿ ಮಾತನಾಡಿ, ಕೋವಿಡ್‌ ಹಿನ್ನೆಲೆ ಕಳೆದ ಎರಡು ವರ್ಷಗಳಿಂದ ಜಿಲ್ಲಾ ಮಟ್ಟದ ಯುವಜನೋತ್ಸವ ಆಯ್ಕೆ ಕಾರ್ಯಕ್ರಮ ನಡೆದಿರಲಿಲ್ಲ. ಈ ವರ್ಷ ಹಮ್ಮಿಕೊಂಡಿರುವುದು ಶ್ಲಾಘನೀಯ. ಜಿಲ್ಲೆಯ ಯುವ ಪ್ರತಿಭಾವಂತ ಹಾಗೂ ಉದಯೋನ್ಮುಖ ಕಲಾವಿದರು ರಾಜ್ಯ ಮಟ್ಟದಲ್ಲಿ ವಿವಿಧ ಕಲಾ ಪ್ರಕಾರಗಳಲ್ಲಿ ಆಯ್ಕೆಯಾಗಿ ಜಿಲ್ಲೆಯ ಕೀರ್ತಿ ಪತಾಕೆ ಹಾರಿಸಬೇಕು. ಪ್ರಸಕ್ತ ಸಾಲಿನ ರಾಜ್ಯ ಯುವಜನ ಮೇಳ ಬೀದರನಲ್ಲಿ ಆಯೋಜಿಸಬೇಕು ಎಂದು ವಿನಂತಿಸಿದರು.

ಇಲಾಖೆ ಸಹಾಯಕ ನಿರ್ದೇಶಕ ಆರ್‌.ಜಿ. ನಾಡಿಗೇರ್‌ ಪ್ರಾಸ್ತಾವಿಕ ಮಾತನಾಡಿ, ಪ್ರಸಕ್ತ ಸಾಲಿನ ಜಿಲ್ಲಾ ಮಟ್ಟದ ಯುವಜನೋತ್ಸವದಲ್ಲಿ ಆಯ್ಕೆಯಾದ ಕಲಾವಿದರನ್ನು ರಾಜ್ಯ ಮಟ್ಟದ ಯುವಜನೋತ್ಸವ ಕಾರ್ಯಕ್ರಮಕ್ಕೆ ಪಾಲ್ಗೊಳ್ಳಲಿದ್ದಾರೆ ಎಂದರು.

ಹಿರಿಯ ಜಾನಪದ ಕಲಾವಿದ ಶಂಭುಲಿಂಗ ವಾಲೊªಡ್ಡಿ ಕಾರ್ಯಕ್ರಮ ಉದ್ಘಾಟಿಸಿದರು. ಯುವ ಸಮನ್ವಯಾಧಿಕಾರಿ ಮಯೂರಕುಮಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ರಾಮ ಶಿಂಧೆ, ರಾಷ್ಟ್ರೀಯ ಯುವ ಪ್ರಶಸ್ತಿ ಪುರಸ್ಕೃತರಾದ ಶಿವಯ್ನಾ ಸ್ವಾಮಿ, ಡಾ| ಪ್ರಭುಲಿಂಗ ಬಿರಾದಾರ, ರಾಜ್ಯ ಯುವ ಪ್ರಶಸ್ತಿ ಪುರಸ್ಕೃತ ಸುನೀಲ ಭಾವಿಕಟ್ಟಿ, ಮೊಗಲಪ್ಪ ಮಾಳಗೆ ಇತರರಿದ್ದರು. ಶಂಭುಲಿಂಗ ವಾಲೊªಡ್ಡಿ, ಶಂಕರ ಚೊಂಡಿ, ಸುನೀಲ ಕಡ್ಡೆ, ದೇವದಾಸ ಚಿಮಕೋಡೆ, ವಿ.ಎಸ್‌. ಉಪ್ಪಿನ್‌, ಎಸ್‌.ವಿ. ಕಲ್ಮಠ, ಎಸ್‌.ಬಿ. ಕುಚಬಾಳ, ಉಷಾ ಪ್ರಭಾಕರ, ವೀಣಾ ಕೋಳಾರ, ರಮೇಶ ದೊಡ್ಡಿ, ರಮೇಶ ಕೋಳಾರ ನಿರ್ಣಾಯಕರಾಗಿದ್ದರು. ದೇವದಾಸ ಜೋಶಿ ನಿರೂಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next