Advertisement
ಸ್ಟೇಟ್‌ಬ್ಯಾಂಕ್ ಬಸ್ ನಿಲ್ದಾಣ ಸಂಪರ್ಕಿತ ಸರ್ವಿಸ್ ರಸ್ತೆ ಸದ್ಯ ಇದ್ದು, ಅದನ್ನು ಕೆಡಹಿ ಆ ಪ್ರದೇಶಕ್ಕೂ ಬಸ್ ನಿಲ್ದಾಣ ವಿಸ್ತರಣೆಯಾಗಲಿದೆ. ಪೂರ್ಣ ಮಟ್ಟದ ಅಭಿವೃದ್ಧಿಗೆಂದು 15ನೇ ಹಣಕಾಸು ನಿಧಿಯಲ್ಲಿ 1 ಕೋಟಿ ರೂ., ಸ್ಮಾರ್ಟ್‌ಸಿಟಿ ಯೋಜನೆಯಲ್ಲಿ 2.2 ಕೋಟಿ ರೂ. ಮತ್ತು ಮುಡಾದಿಂದ 1 ಕೋಟಿ ರೂ. ಭರಿಸಲು ಈಗಾಗಲೇ ನಿರ್ಧಾರ ಮಾಡಲಾಗಿದೆ. ಸದ್ಯದಲ್ಲಿಯೇ ಟೆಂಡರ್ ಪ್ರಕ್ರಿಯೆ ನಡೆಯಲಿದ್ದು, ಅಭಿವೃದ್ಧಿ ಕಾರ್ಯ ಕೈಗೆತ್ತಿಕೊಳ್ಳಲಾಗುತ್ತದೆ.
Related Articles
ಸದ್ಯ ಬಸ್‌ನಿಲ್ದಾಣದ ಒಳಭಾಗದಲ್ಲಿ ರುವ ಛಾವಣಿ ಸಮರ್ಪಕ ನಿರ್ವಹಣೆ ಇಲ್ಲದೆ ತುಕ್ಕು ಹಿಡಿದಿದೆ. ಜತೆಗೆ ಬಸ್‌ಗಾಗಿ ಕಾಯುವ ಪ್ರಯಾಣಿಕರಿಗೆ ಕುಳಿತು ಕೊಳ್ಳಲು ಸೂಕ್ತ ವ್ಯವಸ್ಥೆಯಿಲ್ಲ. ಈ ಮಧ್ಯೆ ಇರುವ ಕೆಲವು ಆಸನದಲ್ಲಿ ಕೆಲವರು ಮಲಗಿರುವುದರಿಂದ ಪ್ರಯಾಣಿಕರಿಗೆ ಕುಳಿತುಕೊಳ್ಳಲು ಅವಕಾಶವಿಲ್ಲ. ಇದರಿಂದ ವೃದ್ಧರು, ಮಕ್ಕಳು, ಮಹಿಳೆ ಯರ ಸಮಸ್ಯೆ ಹೇಳತೀರದಾಗಿದೆ. ದೂರದೂರಿನಿಂದ ಬರುವ ಬಹುತೇಕ ಪ್ರಯಾಣಿಕರು ಇದೇ ನಿಲ್ದಾಣವನ್ನು ಅವಲಂಬಿಸಿರುವ ಕಾರಣದಿಂದ ನಿತ್ಯ ಸಮಸ್ಯೆ ಪರಿಹಾರವಾಗದೆ ಪ್ರಯಾಣಿಕರಿಗೆ ತಲೆನೋವಾಗಿತ್ತು.
Advertisement
ಇದೀಗ ಅಭಿವೃದ್ಧಿಪಡಿಸಲು ನಿರ್ಧರಿ ಸಲಾಗಿದ್ದು, ಬಸ್ ನಿಲ್ದಾಣ ಪೂರ್ತಿ ಕಾಂಕ್ರೀಟ್ ಅಳವಡಿಸಲಾಗುತ್ತದೆ. ಬಸ್‌ಗಳು ತಂಗಲು ವ್ಯವಸ್ಥಿತ ಬಸ್ ಬೇ ಕಲ್ಪಿಸಲಾಗುತ್ತದೆ. ಈಗಾಗಲೇ ಶಿಥಿಲ ಗೊಂಡಿರುವ ಮೇಲ್ಛಾ ವಣಿಗಳನ್ನು ಬದಲಾಯಿಸಲಾಗುತ್ತದೆ. ಪ್ರಯಾಣಿಕರಿಗೆ ಕುಳಿತುಕೊಳ್ಳಲು ಆಸನ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಸುಸಜ್ಜಿತ ಶೌಚಾಲಯ ವ್ಯವಸ್ಥೆ ಒಳಗೊಳ್ಳಲಿದೆ.
ಅಭಿವೃದ್ಧಿಗೆ ಆದ್ಯತೆಸ್ಟೇಟ್ಬ್ಯಾಂಕ್ ಸರ್ವಿಸ್ ಬಸ್ ನಿಲ್ದಾಣದ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ. ಸುಮಾರು 4.2 ಕೋಟಿ ರೂ. ವೆಚ್ಚದಲ್ಲಿ ಬಸ್ ನಿಲ್ದಾಣ ಅಭಿವೃದ್ಧಿಗೆ ಯೋಜನೆ ರೂಪಿಸಲಾಗಿದೆ. ನಿಲ್ದಾಣದಲ್ಲಿ ಮೇಲ್ಛಾವಣಿ ವ್ಯವಸ್ಥೆ, ಸುಸಜ್ಜಿತ ಶೌಚಾಲಯ, ಕುಳಿತುಕೊಳ್ಳಲು ಆಸನ ಸೇರಿದಂತೆ ಅಭಿವೃದ್ಧಿ ಕಾರ್ಯ ಸದ್ಯದಲ್ಲೇ ಆರಂಭಗೊಳ್ಳಲಿದೆ.
– ಪ್ರೇಮಾನಂದ ಶೆಟ್ಟಿ, ಮನಪಾ ಮೇಯರ್