Advertisement

CM ವಿರುದ್ಧ ಹೇಳಿಕೆ: ಹರಿಪ್ರಸಾದ್‌ಗೆ ನೋಟಿಸ್‌

12:47 AM Sep 13, 2023 | Team Udayavani |

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪರೋಕ್ಷವಾಗಿ ತೀಕ್ಷ್ಣ ವಾಗ್ಧಾಳಿ ನಡೆಸಿದ್ದ ಎಂಎಲ್‌ಸಿ ಬಿ.ಕೆ. ಹರಿಪ್ರಸಾದ್‌ ಅವರಿಗೆ ಕಾರಣ ಕೇಳಿ ಕಾಂಗ್ರೆಸ್‌ ಹೈಕಮಾಂಡ್‌ ನೋಟಿಸ್‌ ಜಾರಿಗೊಳಿಸಿದೆ. ಹತ್ತು ದಿನಗಳ ಒಳಗಾಗಿ ಉತ್ತರಿಸುವಂತೆ ಎಐಸಿಸಿ ಸೂಚನೆ ನೀಡಿದೆ.

Advertisement

ಈ ಸಂಬಂಧ ಎಐಸಿಸಿ ಶಿಸ್ತುಪಾಲನ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ತಾರೀಖ್‌ ಅನ್ವರ್‌ ಅವರು ನೋಟಿಸ್‌ ಕಳುಹಿಸಿದ್ದಾರೆ.

ಬೆಂಗಳೂರು ಅರಮನೆ ಮೈದಾನದಲ್ಲಿ ಶನಿವಾರ ನಡೆದ ಅತೀ ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಸಿಎಂ ಅವ ರನ್ನು ಸಾರ್ವಜನಿಕವಾಗಿ ಟೀಕಿಸಿರುವುದರ ಜತೆಗೆ ಬಿಜೆಪಿ ಹಾಗೂ ವೈಎಸ್‌ಆರ್‌ ಕಾಂಗ್ರೆಸ್‌ ನಾಯಕರ ಜತೆ ವೇದಿಕೆಯನ್ನು ಹಂಚಿಕೊಳ್ಳುವ ಮೂಲಕ ಹರಿಪ್ರಸಾದ್‌ ಪಕ್ಷದ ಶಿಸ್ತನ್ನು ಉಲ್ಲಂಘಿಸಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರಿಗೆ ದೂರು ಸಲ್ಲಿಕೆಯಾಗಿತ್ತು. ಬಳಿಕ ಅದನ್ನು ಶಿಸ್ತು ಸಮಿತಿಗೆ ವರ್ಗಾ ಯಿಸಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next