Advertisement

ಗುಂಡಿಕ್ಕಿ… ಹೇಳಿಕೆ: ಕೆ.ಎಸ್.ಈಶ್ವರಪ್ಪ ವಿರುದ್ಧ ಪ್ರಕರಣ ದಾಖಲು

08:27 PM Feb 09, 2024 | Team Udayavani |

ದಾವಣಗೆರೆ: ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ ದಾವಣಗೆರೆಯ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ಗುರುವಾರ ದಾವಣಗೆರೆಯ ಶಾಮನೂರು ಪಾರ್ವತಮ್ಮ ಶಿವಶಂಕರಪ್ಪ ಕಲ್ಯಾಣ ಮಂಟಪದಲ್ಲಿ ನಡೆದ ಜಿಲ್ಲಾ ಬಿಜೆಪಿ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಕೆ.ಎಸ್. ಈಶ್ವರಪ್ಪ ಅವರು ಡಿ.ಕೆ. ಸುರೇಶ್, ವಿನಯ್ ಕುಲಕರ್ಣಿ ಇಂತಹ ರಾಷ್ಟ್ರದ್ರೋಹಿಗಳು ದೇಶವನ್ನ ಛಿದ್ರ ಮಾಡ್ತೀವಿ ಅಂತಾ ಹೋರಾಡ್ತರಲ್ಲಾ ಅವರಿಗೆ ಗುಂಡಿಕ್ಕಿ ಕೊಲ್ಲುವಂತ ಕಾನೂನು ತನ್ನಿ ಎಂದು ಉದ್ರಿಕ್ತ ಭಾಷಣ ಮಾಡಿದ್ದರು. ಅವರ ಮೇಲೆ ಕಾನೂನು ಕ್ರಮ ಜರುಗಿಸಬೇಕು ಎಂದು ನಗರದ ನಿಜಲಿಂಗಪ್ಪ ಬಡಾವಣೆಯ 2ನೇ ಮುಖ್ಯ ರಸ್ತೆ, 2 ನೇ ಕ್ರಾಸ್ ನಿವಾಸಿ ಹನುಮಂತಪ್ಪ(36) ಎಂಬುವರು ನೀಡಿದ ದೂರಿನ ಆಧಾರದಲ್ಲಿ ಪೋಲೀಸರು ಕೆ.ಎಸ್. ಈಶ್ವರಪ್ಪ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ವಿರುದ್ಧ ಪ್ರಕರಣ ದಾಖಲಾಗಿರುವುದನ್ನು ಸ್ವತಃ ಗೃಹ ಸಚಿವ ಡಾ| ಜಿ. ಪರಮೇಶ್ವರ್ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂದರ್ಭದಲ್ಲಿ ಖಚಿತ ಪಡಿಸಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಸಹ ಪ್ರಕರಣ ದಾಖಲಾಗಿರುವುದನ್ನ ಖಚಿತಪಡಿಸಿದ್ದಾರೆ.

ಬೇರೆ ಬೇರೆ ಜನ ಸಮುದಾಯ, ಗುಂಪುಗಳ ನಡುವೆ ದ್ವೇಷ ಅಥವಾ ವೈಮನಸ್ಸಿನ ಭಾವನೆಗಳನ್ನು ಉಂಟಾಗಿ ಜನರ ಮಧ್ಯೆ ಗಲಭೆಗಳಂಥ ಕೃತ್ಯಗಳು ಜರುಗಬಹುದೆಂದು ಗೊತ್ತಿದ್ದರೂ ಸಹ ಈಶ್ವರಪ್ಪ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ. ಇದರಿಂದ ಬೇರೆ ಬೇರೆ ಜನ ಸಮುದಾಯ, ಗುಂಪುಗಳ ನಡುವೆ ದ್ವೇಷ ಅಥವಾ ವೈಮನಸ್ಸು ಅಥವಾ ಅಪಾಯದ ಭೀತಿ ಹುಟ್ಟಿಸುವಂತಿದೆ. ಡಿ.ಕೆ.ಸುರೇಶ, ವಿನಯ್ ಕುಲಕರ್ಣಿ ಕೊಲ್ಲುವಂತ ಕಾನೂನು ತರಬೇಕು ಎಂದು ಪ್ರಾಣ ಬೆದರಿಕೆ ಹಾಕಿರುವ ಹೇಳಿಕೆ ನೀಡಿದ್ದಾರೆ.ಇದರಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆ ಆಗುವ ಸಂಭವ ಇದೆ. ನನಗೆ ತುರ್ತು ಕೆಲಸ ಇದ್ದ ಕಾರಣ ಈ ದಿನ ದೂರು ನೀಡುತ್ತಿದ್ದು ಈಶ್ವರಪ್ಪ ವಿರುದ್ಧ ಕ್ರಮ ಜರುಗಿಸಬೇಕು ಎಂದು ದೂರುದಾರು ಒತ್ತಾಯಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next