Advertisement

ಸರ್ಕಾರ ಮೇಲೆ ಗೂಬೆ ಕೂಡಿಸುತ್ತಿದೆ ಕಾಂಗ್ರೆಸ್‌

04:21 PM Aug 16, 2020 | Suhan S |

ಗದಗ: ಭೂ ಸುಧಾರಣೆ ಕಾಯ್ದೆ ತಿದ್ದುಪಡಿಯಿಂದ ಯಾರು ಬೇಕಾದರೂ ಭೂಮಿಯನ್ನು ಕೊಂಡುಕೊಳ್ಳಬಹುದಾಗಿದ್ದು, ಅದು ರೈತರ ಪಾಲಿಗೆ ಮರಣ ಶಾಸನವಲ್ಲ. ಸರಕಾರದ ನೀಡಿರುವ ವಿಶೇಷ ಅಧಿಕಾರ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಸಿ.ಸಿ. ಪಾಟೀಲ ಅಭಿಪ್ರಾಯಪಟ್ಟರು.

Advertisement

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನವರಿಗೆ ಬೇರೆ ಕೆಲಸವಿಲ್ಲದೇ, ಸರಕಾರದ ಮೇಲೆ ಗೂಬೆ ಕೂರಿಸುವ ಹೇಳಿಕೆ ನೀಡುತ್ತಿದ್ದಾರೆ. ಆದರೆ ಬೆಂಗಳೂರಿನ ಕೆಜಿ ಹಳ್ಳಿ ಮತ್ತು ಡಿಜಿ ಹಳ್ಳಿ ಘಟನೆ ಬಗ್ಗೆ ಚಕಾರವೆತ್ತುತ್ತಿಲ್ಲ. ಒಂದೇ ಒಂದು ವಾಟ್ಸ್‌ಆ್ಯಪ್‌ ಸಂದೇಶದ ಮೇರೆಗೆ ಸಾವಿರಾರೂ ಜನ ಸೇರುತ್ತಾರೆ. ಪೆಟ್ರೋಲ್‌ ಬಾಂಬ್‌, ಲಾಂಗು -ಮಚ್ಚುನೊಂದಿಗೆ ಜನ ಬರುತ್ತಾರೆ ಎಂಬುದು ಪೂರ್ವನಿಯೋಜಿತ ಸಂಚು ಎಂಬುದು ಸ್ಪಷ್ಟವಾಗುತ್ತದೆ.

ಹಿಂದೆ ಪಾದರಾಯನಪುರದಲ್ಲಿ ನಡೆದ ದಾಂಧಲೆ ನಡೆಸಿ, ಜಾಮೀನು ಪಡೆದು ಹೊರ ಬಂದವರಿಗೆ ಮಾಜಿ ಸಚಿವ ಜಮೀರ್‌ ಅಹ್ಮದ್‌ ಅವರು ಸನ್ಮಾನ ಮಾಡಿದ್ದಾರೆ. ಅದರ ಮುಂದುವರಿದ ಭಾಗವಾಗಿ ಇದೀಗ ಗಲಭೆಯಲ್ಲಿ ಪಾಲ್ಗೊಂಡವರಿಗೆ ಪರಿಹಾರ ನೀಡುವ ಮಾತನಾಡುತ್ತಿದ್ದಾರೆ. ಈ ರೀತಿಯ ಬೆಂಬಲದಿಂದ ಸಮಾಜದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ? ಅವರೇನು ದೇಶಕ್ಕಾಗಿ ಹೋರಾಡಿದ ಸ್ವಾತಂತ್ರ ಯೋಧರೇ, ದೇಶಕ್ಕಾಗಿ ಪ್ರಾಣ ಬಿಟ್ಟಿದ್ದಾರೆಯೇ ಎಂದು ಖಾರವಾಗಿ ಪ್ರಶ್ನಿಸಿದರು.

ತಮ್ಮದೇ ಪಕ್ಷದ ದಲಿತ ಶಾಸಕನ ಮನೆ ಧ್ವಂಸಗೊಂಡಿದ್ದರೂ, ಅವರಿಗೆ ಸಂತ್ವಾನ ಹೇಳಲು ಎಷ್ಟು ಮಂದಿ ಕಾಂಗ್ರೆಸ್‌ ನಾಯಕರು ಭೇಟಿ ನೀಡಿದ್ದಾರೆ ಎಂದು ಪ್ರಶ್ನಿಸಿದ ಅವರು, ಕೇವಲ ಮತ ಬ್ಯಾಂಕ್‌ ರಾಜಕಾರಣಕ್ಕಾಗಿ ಕಾಂಗ್ರೆಸ್‌ ಪಕ್ಷ ನಾಟಕವನ್ನಾಡುತ್ತಿದೆ ಎಂದು ಲೇವಡಿ ಮಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next