Advertisement
ಬಾಲಕಿಯರ ಸರಕಾರಿ ಬಾಲ ಮಂದಿರದಿಂದ ಮಧ್ಯಾಹ್ನ2 ಗಂಟೆ ಸುಮಾರಿಗೆ ಪೊಲೀಸ್ ಭದ್ರತೆಯಲ್ಲಿ ಬಾಲಕಿಯರಿಬ್ಬರನ್ನೂ ಜಿಲ್ಲಾ ನ್ಯಾಯಾಲಯದ ಆವರಣಕ್ಕೆ ಕರೆತರಲಾ ಯಿತು. ಸಿಆರ್‌ಪಿಸಿ 164ರ ಅಡಿ ನ್ಯಾಯಾಧೀಶರ ಎದುರು ಬಾಲಕಿಯರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಯಿತು.
ಬಾಲಕಿಯರನ್ನು ನ್ಯಾಯಾಲಯಕ್ಕೆ ಕರೆತಂದ ವಿಚಾರ ತಿಳಿಯುತ್ತಲೇ ಕೋರ್ಟ್ ಎದುರು ನೂರಾರು ಮಂದಿ ಜಮಾಯಿಸಿದರು. ತನಿಖೆ ನಡೆಯುತ್ತಿರುವ ರೀತಿ, ಪೊಲೀಸರ ಕಾರ್ಯವೈಖರಿ ಹಾಗೂ ಮುರುಘಾ ಶರಣರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಯಿತು. ನ್ಯಾಯಾಲಯದ ಮುಂದೆ ಜಮಾಯಿಸಿದ್ದ ಜನರನ್ನು ಚದುರಿಸಲು ಪೊಲೀಸರು ಲಾಠಿ ಬೀಸಿದರು. ಈ ವೇಳೆ ಪೊಲೀಸರೊಂದಿಗೆ ವಾಗ್ವಾದವೂ ನಡೆಯಿತು. ದೂರು ದಾಖಲಾಗಿ ಮೂರು ದಿನಗಳಾದರೂ ಸಂತ್ರಸ್ತ ಮಕ್ಕಳನ್ನೇ ಅಲ್ಲಿಂದಿಲ್ಲಿಗೆ ಕರೆದುಕೊಂಡು ಓಡಾಡುವುದು, ದಿನವಿಡೀ ಹೇಳಿಕೆ ಪಡೆದುಕೊಳ್ಳಲಾಗುತ್ತಿದೆ. ಆದರೆ ಪ್ರಕರಣದ ಆರೋಪಿಯನ್ನು ವಿಚಾರಣೆಗೆ ಒಳಪಡಿಸದಿರುವುದು ಯಾವ ನ್ಯಾಯ ಎಂದು ಪ್ರಶ್ನಿಸಿದರು. ಇದೇ ವೇಳೆ ಬೇಟಿ ಬಚಾವ್, ಬೇಟಿ ಪಡಾವೋ’ ಎಂಬ ಬ್ಯಾನರ್ ಹಿಡಿದು ಒಂದಿಷ್ಟು ಜನ ಮೌನವಾಗಿ ಪ್ರತಿಭಟನೆ ನಡೆಸಿದರು. ಶರಣರ ವಿರುದ್ಧ ಷಡ್ಯಂತ್ರ: ಮಠಾಧೀಶರು
ಮುರುಘಾ ಮಠದ ಶಾಖಾ ಮಠಗಳು ಸೇರಿದಂತೆ ವಿವಿಧ ಮಠಗಳ ಸುಮಾರು 30ರಷ್ಟು ಮಠಾಧೀಶರು ಮಧ್ಯಾಹ್ನ ಮಠದ ಆವರಣದಲ್ಲಿ ಸುದ್ದಿಗೋಷ್ಠಿ ನಡೆಸಿದರು. ಕನಕಪುರದ ಮರಳಗವಿ ಮಠದ ಶ್ರೀಮುಮ್ಮಡಿ ಶಿವರುದ್ರ ಸ್ವಾಮೀಜಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಮುರುಘಾ ಮಠದ ಶರಣರ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ. ಶ್ರೀಗಳು ಆರೋಪ ಮುಕ್ತರಾಗಿ ಬರುತ್ತಾರೆ ಎಂಬ ವಿಶ್ವಾಸವಿದೆ.
Related Articles
Advertisement
ಮತ್ತೊಂದು ಪ್ರಕರಣ ದಾಖಲುಮುರುಘಾ ಶರಣರ ವಿರುದ್ಧ ಪೋಕೊÕà ಕಾಯ್ದೆಯಡಿ ದೂರು ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿತ್ತು. ತನಿಖೆ ವೇಳೆ ಸಂತ್ರಸ್ತೆಯರಲ್ಲಿ ಓರ್ವ ಬಾಲಕಿ ಪರಿಶಿಷ್ಟ ಜಾತಿಗೆ ಸೇರಿರುವುದು ತಿಳಿದುಬಂದಿರುವ ಹಿನ್ನೆಲೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೇಲಿನ ದೌರ್ಜನ್ಯ ಪ್ರತಿಬಂಧಕ ಅಧಿನಿಯಮದಡಿ ಮತ್ತೂಂದು ದೂರು ದಾಖಲಿಸಲಾಗಿದೆ. ನ್ಯಾಯಾಲಯದ ಅನುಮತಿ ಪಡೆದು ತನಿಖೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ಪರಶುರಾಮ್ ತಿಳಿಸಿದ್ದಾರೆ.