Advertisement

ವಿರೋಧ ಪಕ್ಷಗಳ ಹೇಳಿಕೆಗಳನ್ನು ಗಂಭೀರವಾಗಿ ಪರಿಗಣಿಸಬೇಕಿಲ್ಲ: ಹೆಚ್. ನಾಗೇಶ್

02:37 PM Oct 19, 2019 | keerthan |

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ವಿರೋಧ ಪಕ್ಷಗಳ ಕೇಲಸವೇ ವಿರೋಧ ಮಾಡುವುದಲ್ಲವಾ? ಹಾಗಾಗಿ ವಿರೋಧ ಪಕ್ಷಗಳ ಹೇಳಿಕೆಗಳನ್ನು ಯಾರು ಗಂಭೀರವಾಗಿ ಪರಿಗಣಿಸಬೇಕಿಲ್ಲ ಎಂದು ರಾಜ್ಯ ಅಬಕಾರಿ ಸಚಿವ ಹೆಚ್ ನಾಗೇಶ್ ತಿಳಿಸಿದರು.

Advertisement

ಚಿಕ್ಕಬಳ್ಳಾಪುರ ತಾಲೂಕಿನ ಮಂಡಿಕಲ್ ಗ್ರಾಮದಲ್ಲಿ ಶನಿವಾರ ನೂತನ ಐಟಿಐ ಕಟ್ಡಡ ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅತ್ಯಂತ ಶ್ರದ್ದಾ ಭಕ್ತಿಂದ ಕೆಲಸ ಮಾಡುತ್ತಿದೆ ಎಂದರು.

ಒಂದೂವರೆ ತಿಂಗಳ ಕಾಲ ಸಚಿವ ಸಂಪುಟ ಇಲ್ಲದಿದ್ದರೂ ಸಿಎಂ ಯಡಿಯೂರಪ್ಪ, ಒಂದು ರೀತಿ ಒಂಟಿ ಸಲಗದ ರೀತಿಯಲ್ಲಿ ನೆರೆ ಪರಿಹಾರ ಕಾರ್ಯದಲ್ಲಿ ತೊಡಗಿದ್ದಾರೆ. ಯಡಿಯೂಪ್ಪ ಸಿಎಂ ಆದ ಮೇಲೆ ದೇವರ ಅನುಗ್ರಹದಿಂದ  ರಾಜ್ಯದಲ್ಲಿ ಉತ್ತಮ ಮಳೆ ಬೆಳೆ ಅಗುತ್ತಿದೆ. ಪ್ರಕೃತಿ ವಿಕೋಪದಿಂದ ನೆರೆ ಬಂದಿದೆ. ಆದರೆ ಸರ್ಕಾರ ಎಲ್ಲವನ್ನು ಸಮರ್ಪಕವಾಗಿ ಮಾಡುತ್ತಿದೆ. ವಿರೋಧ ಪಕ್ಷಗಳು ಏನಾದರೂ ಒಂದು ಹೇಳಿಕೆ, ವ್ಯಾಖ್ಯಾನ ನೀಡುವುದಕ್ಕಾಗಿ ಸರ್ಕಾರದ ವಿರುದ್ದ ಮಾತನಾಡುತ್ತಾರೆ. ಅದು ಅವರ ಕೆಲಸ, ಅದನ್ನು ಯಾರು ಗಂಭೀರವಾಗಿ ಪರಿಗಣಿಸಬೇಕಿಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next