Advertisement

Karnataka ರಾಜ್ಯದ 17 ನದಿಗಳು ಕಲುಷಿತ: ತಜ್ಞರ ಸಮಿತಿ

12:31 AM Sep 11, 2024 | Team Udayavani |

ಮೈಸೂರು: ರಾಜಧಾನಿ ಬೆಂಗಳೂರು ಸೇರಿ ಮೈಸೂರು ನಗರಕ್ಕೆ ಕುಡಿಯುವ ನೀರು ಪೂರೈಸುವ ಕಾವೇರಿ, ಕಪಿಲಾ ಹಾಗೂ ಲಕ್ಷ್ಮಣ ತೀರ್ಥ ನದಿ ಕಲುಷಿತಗೊಂಡಿರುವ ಬಗ್ಗೆ ತಾಂತ್ರಿಕ ತಜ್ಞರ ಸಮಿತಿ ಸರಕಾರಕ್ಕೆ ವರದಿ ಸಲ್ಲಿಸಿದೆ.

Advertisement

ಕರ್ನಾಟಕ ಸೇರಿ ದೇಶದ ಎಲ್ಲ ನದಿಗಳ ನೀರಿನ ಗುಣಮಟ್ಟದ ಬಗ್ಗೆ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ವೈಜ್ಞಾನಿಕ ಸಂಶೋಧನೆ ಮೂಲಕ ಸಮೀಕ್ಷೆ ನಡೆಸಿತ್ತು. ಮಂಡಳಿಯ ಪ್ರಕಾರ ರಾಜ್ಯದ 17 ನದಿಗಳು ಸೇರಿ ದೇಶದ 311 ನದಿಗಳು ಕಲುಷಿತಗೊಂಡಿವೆ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ 2022ರಲ್ಲಿ ವರದಿ ಪ್ರಕಟಿಸಿತ್ತು.

ಕೇಂದ್ರ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಕಾರ ಪ್ರತಿ ಲೀಟರ್‌ ಶುದ್ಧ ನೀರಿನಲ್ಲಿ 1 ಎಂಜಿ ಬಯೋ ಕೆಮಿಕಲ್‌ ಆಕ್ಸಿಜನ್‌ ಡಿಮ್ಯಾಂಡ್‌ (ಬಿಒಡಿ) ಇರಬೇಕು. ಆದರೆ, ಕಾವೇರಿ ನೀರಿನಲ್ಲಿ 6 ಬಿಒಡಿ ಪ್ರಮಾಣವಿದ್ದರೆ, ಕಪಿಲಾ ನೀರಿನಲ್ಲಿ 3.8 ಬಿಒಡಿ, ಲಕ್ಷ್ಮಣ ತೀರ್ಥದಲ್ಲಿ 5.6ರಷ್ಟು ಬಿಒಡಿ ಪ್ರಮಾಣವಿದೆ.

ಬೆಂಗಳೂರಿನ ನಂದಿ ಬೆಟ್ಟದಲ್ಲಿ ಹುಟ್ಟುವ ಪಿನಾಕಿನಿ ನದಿ ನೀರಿನಲ್ಲಿ 111, ಅಘನಾಶಿನಿಯಲ್ಲಿ 3.3, ಅರ್ಕಾವತಿಯಲ್ಲಿ 39, ಭದ್ರಾದಲ್ಲಿ 7, ಭೀಮಾದಲ್ಲಿ 4, ಗಂಗಾವಳಿಯಲ್ಲಿ 3.4, ಕಾಗಿಣದಲ್ಲಿ 3.1, ಕೃಷ್ಣಾದಲ್ಲಿ 4.7, ನೇತ್ರಾವತಿಯಲ್ಲಿ 6, ಶರಾವತಿಯಲ್ಲಿ 3.3, ಶಿಂಶಾದಲ್ಲಿ 9.5, ತುಂಗಾನದಿಯಲ್ಲಿ 6.2ರಷ್ಟಿದೆ ಎಂದು ವರದಿಯಲ್ಲಿ ತಿಳಿಸಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next