ಬೆಂಗಳೂರು: ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿಯಲ್ಲಿ ಅಭಿವೃದ್ಧಿ ಹೊಂದಿದ 34 ರೈಲು ನಿಲ್ದಾಣಗಳನ್ನು ಪ್ರಧಾನಿ ಮೋದಿ ಸೋಮವಾರ ಲೋಕಾರ್ಪಣೆಗೊಳಿಸಲಿದ್ದಾರೆ. ಒಟ್ಟು 801 ಕೋಟಿ ರೂ. ವೆಚ್ಚದಲ್ಲಿ ಈ ನಿಲ್ದಾಣಗಳನ್ನು ಅಭಿವೃದ್ಧಿಗೊಳಿಸಲಾಗಿದೆ.
ಮೊದಲ ಹಂತದಲ್ಲಿ ರೈಲು ನಿಲ್ದಾಣದ ಪ್ರವೇಶ ದ್ವಾರ ಸುಂದರಗೊಳಿಸುವುದು, ಪ್ರಯಾಣಿಕರ ತಂಗು ನಿಲ್ದಾಣ, ಶೌಚಾಲಯ ಸೌಲಭ್ಯ, ಲಿಫ್ಟ್, ಎಸ್ಕಲೇಟರ್ ಸ್ಥಾಪನೆ, ಸ್ವಚ್ಛತೆ, ಉಚಿತ ವೈ-ಫೈ ಹಾಗೂ ಒಂದು ನಿಲ್ದಾಣ ಒಂದು ಉತ್ಪನ್ನದಂಥ ಉಪಕ್ರಮಗಳಡಿ ಸ್ಥಳೀಯ ಉತ್ಪನ್ನಗಳಿಗೆ ಕಿಯೋಸ್ಕ್ ಸ್ಥಾಪಿಸಲಾಗುತ್ತದೆ.
ಹುಬ್ಬಳ್ಳಿ ಮತ್ತು ಮೈಸೂರು ವಿಭಾಗದ 7 ರೈಲು ನಿಲ್ದಾಣಗಳ ಅಭಿವೃದ್ಧಿಗೆ ಕೂಡ ಪ್ರಧಾನಿ ಇದೇ ಸಂದರ್ಭ ಶಂಕು ಸ್ಥಾಪನೆ ನಡೆಸಲಿದ್ದಾರೆ. ನೈಋತ್ಯ ರೈಲ್ವೇಯ ಬೆಂಗಳೂರು ವಿಭಾಗದ ವ್ಯಾಪ್ತಿಯಲ್ಲಿ 15 ರೈಲ್ವೇ ನಿಲ್ದಾಣಗಳ ಪುನರಾಭಿವೃದ್ಧಿಗೆ 372.13ಕೋಟಿ ರೂ. ವೆಚ್ಚ ಮಾಡಲಾಗುತ್ತದೆ.