Advertisement
ಏನಿದು ಯೋಜನೆ? ಮಾನಸಿಕ ರೋಗಿಗಳ ನೆರವಿಗಾಗಿ ಆರಂಭಿಸಲಾಗಿರುವ ಯೋಜನೆ ಇದು. ಕೊರೊನಾ ಕಾಲದಲ್ಲಿ ಮಾನಸಿಕವಾಗಿ ನೊಂದವರಿಗೆ ಧೈರ್ಯ ತುಂಬಲು ನಿಮ್ಹಾನ್ಸ್ ಸಹಯೋಗದಲ್ಲಿ ಆಪ್ತ ಸಮಾಲೋಚನೆ ಆರಂಭಿಸಲಾಗಿದೆ. ಜೊತೆಗೆ ಇದರಲ್ಲೇ ಆನ್‌ಲೈನ್ ಸೇವೆಯನ್ನೂ ಆರಂಭಿಸಲಾಯಿತು. ಇದು ಯಶಸ್ವಿಯಾಗಿದ್ದು, ಒಂದೂವರೆ ವರ್ಷದಲ್ಲಿ 25 ಲಕ್ಷ ಜನರಿಗೆ ಆಪ್ತ ಸಮಾಲೋಚನೆ ಮಾಡಲಾಗಿದೆ.
ಕೊರೊನಾ ಬಂದ ಆರಂಭದಲ್ಲಿ ಜನರಲ್ಲಿ ಇದರ ಬಗ್ಗೆ ವಿಪರೀತ ಭಯವಿತ್ತು. ಕೊರೊನಾ ಪಾಸಿಟಿವ್ ಎಂದ ಕೂಡಲೇ ಎಷ್ಟೋ ಮಂದಿ ಭಯದಿಂದಲೇ ಸಾವನ್ನಪ್ಪಿದ್ದರೆ, ಇನ್ನೂ ಕೆಲವರು ಮಾನಸಿಕವಾಗಿ ಧೈರ್ಯ ಕಳೆದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು. ಅಂದರೆ, ಕೊರೊನಾ ಪಾಸಿಟಿವ್ ಎಂದು ವರದಿ ಬಂದ ಕೂಡಲೇ ರೋಗಿಯೊಬ್ಬರು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಭಯದಿಂದ ಆತ್ಮಹತ್ಯೆಗೆ ಶರಣಾಗಿದ್ದರು. ಇದನ್ನು ನೋಡಿ, ಕೊರೊನಾ ಆರಂಭದಲ್ಲೇ ಈ ಯೋಜನೆ ಆರಂಭಕ್ಕೆ ಚಿಂತನೆ ನಡೆಸಲಾಗಿತ್ತು. ಕೇಂದ್ರದಿಂದಲೂ ಜಾರಿ
ಈ ಯೋಜನೆಯನ್ನು ಕೇಂದ್ರ ಸರ್ಕಾರ ಮೆಚ್ಚಿದೆ ಎಂದು ಹೇಳಿದವರು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್. ನಿಮ್ಹಾನ್ಸ್‌ನಲ್ಲಿ ವಿಶ್ವ ಮೆದುಳು ಆರೋಗ್ಯ ದಿನ ಹಾಗೂ ಜಯನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ “ಬ್ರೈನ್ ಹೆಲ್ತ್ ಕ್ಲಿನಿಕ್’ ಉದ್ಘಾಟನಾ ಸಮಾರಂಭದಲ್ಲಿ ಈ ಬಗ್ಗೆ ಮಾತನಾಡಿ, ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ನಿಮ್ಹಾನ್ಸ್‌ನ ವೈದ್ಯರನ್ನು ಶ್ಲಾ ಸಿದರು.
Related Articles
ಗ್ರಾಮೀಣ ಪ್ರದೇಶದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಎಂಬಿಬಿಎಸ್ ಮಾಡಿದ ವೈದ್ಯರಿದ್ದಾರೆ. ಮಾನಸಿಕ ರೋಗಿಗಳು ಇವರ ಬಳಿ ಬಂದಾಗ ಚಿಕಿತ್ಸೆ ನೀಡಲು ವಿಶೇಷ ತರಬೇತಿ ಬೇಕು. ಬೆಂಗಳೂರು, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ನಿಮ್ಹಾನ್ಸ್‌ನ ತಜ್ಞರು ಈಗಾಗಲೇ 100 ವೈದ್ಯರಿಗೆ ತರಬೇತಿ ನೀಡಿದೆ. ಈ ಯೋಜನೆಯನ್ನು ಪ್ರಾಯೋಗಿಕವಾಗಿ ಜಾರಿ ಮಾಡಲಾಗಿದೆ. ಮಾನಸಿಕ ರೋಗಿಗಳು ನೇರವಾಗಿ ನಿಮ್ಹಾನ್ಸ್‌ಗೆ ಬರದೇ ಸ್ಥಳೀಯ ಮಟ್ಟದಲ್ಲೇ ಸೇವೆ ಪಡೆಯಬಹುದಾಗಿದೆ.
Advertisement