Advertisement

ಪೌರತ್ವ ಕಾಯ್ದೆ ಜಾರಿ ತಡೆಯೋ ಅಧಿಕಾರ ರಾಜ್ಯಕ್ಕೆ ಇಲ್ಲ;ಸಂವಿಧಾನದ 7ನೇ ಕಲಂನಲ್ಲೇನಿದೆ?

09:58 AM Dec 14, 2019 | Nagendra Trasi |

ನವದೆಹಲಿ:ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೊಳಿಸುವುದನ್ನು ತಡೆಯಲು ಯಾವುದೇ ರಾಜ್ಯ ಸರ್ಕಾರಕ್ಕೆ ಅಧಿಕಾರ ಇಲ್ಲ ಎಂದು ಕೇಂದ್ರ ಗೃಹ ಸಚಿವಾಲಯದ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.

Advertisement

ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ವಿರುದ್ಧ ವಿರೋಧ ಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸುತ್ತಿರುವ ನಡುವೆಯೇ ಕೇಂದ್ರ ಸರ್ಕಾರದ ಅಧಿಕೃತ ಆದೇಶದ ನಂತರ ಕಾಯ್ದೆಯಾಗಿ ರೂಪುಗೊಂಡ ಸಿಎಬಿ ಜಾರಿಯನ್ನು ತಡೆಯಲಿ ರಾಜ್ಯ ಸರ್ಕಾರಕ್ಕೆ ಯಾವುದೇ ಅಧಿಕಾರ ಇಲ್ಲ ಎಂದು ತಿಳಿಸಿದೆ.

ಕೇಂದ್ರ ಸರ್ಕಾರದ ಕಾಯ್ದೆಯನ್ನು ಸಂವಿಧಾನದ 7ನೇ ಶೆಡ್ಯೂಲ್ ಪ್ರಕಾರ ಶಾಸನ ಮಾಡಿದ ನಂತರ ರಾಜ್ಯ ಸರ್ಕಾರಗಳಿಗೆ ಅದನ್ನು ತಿರಸ್ಕರಿಸುವ ಯಾವ ಅಧಿಕಾರವೂ ಇಲ್ಲ ಎಂದು ಸಚಿವಾಲಯದ ಅಧಿಕಾರಿಗಳು ವಿವರಿಸಿದ್ದಾರೆ. ಯಾವುದೇ ವ್ಯಕ್ತಿಗೆ ಪೌರತ್ವ ನೀಡುವುದು ಕೇಂದ್ರದ ವಿಶೇಷಾಧಿಕಾರವಾಗಿದೆ ಎಂದು ಹೇಳಿದೆ.

ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೊಳಿಸಲು ಪಶ್ಚಿಮಬಂಗಾಳ, ಕೇರಳ, ಮಧ್ಯಪ್ರದೇಶ, ಮಹಾರಾಷ್ಟ್ರ, ಚತ್ತೀಸ್ ಗಢ್ ಮತ್ತು ಪಂಜಾಬ್ ವಿರೋಧ ವ್ಯಕ್ತಪಡಿಸುತ್ತಿದ್ದು, ತಮ್ಮ ರಾಜ್ಯಗಳಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಅವಕಾಶ ಕೊಡುವುದಿಲ್ಲ ಎಂದು ಹೇಳಿವೆ. ನೆರೆಯ ಬಾಂಗ್ಲಾದೇಶದ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ಮುಸ್ಲಿಮೇತರ ವಲಸಿಗರಿಗೆ ಪೌರತ್ವ ನೀಡಲಿದ್ದು, ಇದೊಂದು ತಾರತಮ್ಯದ ಮತ್ತು ಅಸಾಂವಿಧಾನಿಕ ಎಂದು ಆರೋಪಿಸಿವೆ.

ಪೌರತ್ವ ಕಾಯ್ದೆ ಭಾರತವನ್ನು ಇಬ್ಭಾಗಿಸುತ್ತದೆ. ಎಲ್ಲಿಯವರೆಗೆ ನಾವು ಅಧಿಕಾರದಲ್ಲಿ ಇರುತ್ತೇವೆಯೋ ಅಲ್ಲಿವರೆಗೆ ರಾಜ್ಯದಿಂದ ಒಬ್ಬನೇ ಒಬ್ಬ ವ್ಯಕ್ತಿಯನ್ನು ದೇಶವನ್ನು ತೊರೆಯಲು ಬಿಡುವುದಿಲ್ಲ ಎಂದು ಮಮತಾ ಬ್ಯಾನರ್ಜಿ ಗುಡುಗಿದ್ದಾರೆ.

Advertisement

ತಮ್ಮ ರಾಜ್ಯದಲ್ಲಿ ಅಸಾಂವಿಧಾನಿಕ ಕಾನೂನಿಗೆ ಜಾಗವಿಲ್ಲ. ಅದು ಒಂದು ಸಮುದಾಯದ ವಿರುದ್ಧವಾಗಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ದೂರಿದ್ದಾರೆ. ಭಾರತದ ಸಂವಿಧಾನ ಪ್ರತಿಯೊಬ್ಬ ಭಾರತೀಯನಿಗೂ ಧರ್ಮ, ಜಾತಿ ಹಾಗೂ ಭಾಷೆಯನ್ನು ಮೀರಿ ಪೌರತ್ವದ ಹಕ್ಕನ್ನು ನೀಡಿದೆ.

Advertisement

Udayavani is now on Telegram. Click here to join our channel and stay updated with the latest news.

Next