Advertisement
ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿ, ರಾಜ್ಯಕ್ಕೆ ಆಗಮಿಸುತ್ತಿರುವ 30 ಲಕ್ಷ ಪ್ರವಾಸಿಗರನ್ನು ಮುಂದಿನ ಮೂರು ವರ್ಷದಲ್ಲಿ ಒಂದು ಕೋಟಿಗೆ ಮುಟ್ಟಿಸುವ ಕೆಲಸವನ್ನು ನಾವೆಲ್ಲರೂ ಸೇರಿ ಮಾಡಬೇಕು ಎಂದು ಹೇಳಿದರು.
Related Articles
Advertisement
ರಾಜ್ಯದಲ್ಲಿ 2 ಪ್ರವಾಸೋದ್ಯಮ ಸರ್ಕಿಟ್ ಅಂದರೆ ಬೇಲೂರು ಹಳೆಬೀಡು, ಸೋಮನಾಥಪುರ ಸುತ್ತಮುತ್ತಲ ಪ್ರವಾಸಿ ತಾಣಗಳನ್ನೊಳಗೊಂಡ ಮೈಸೂರು ಸರ್ಕಿಟ್ , ಬಿಜಾಪುರದಿಂದ ಬಾದಾಮಿ, ಪಟ್ಟದಕಲ್ಲು, ಹಂಪಿ ಇತ್ಯಾದಿಗಳನ್ನೊಳಗೊಂಡ ಹಂಪಿ ಸರ್ಕಿಟ್‌ಗಳನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಅಭಿವೃದ್ಧಿಪಡಿಸಲು ಸರ್ಕಾರ ಯೋಜನೆ ರೂಪಿಸಿದೆ. ಮುಂದಿನ 2 ತಿಂಗಳ ಒಳಗಾಗಿ ಎರಡು ಸರ್ಕಿಟ್‌ಗಳನ್ನು ಕಾರ್ಯಾರಂಭ ಮಾಡಲಾಗುವುದು. ಟೆಂಪಲ್ ಟೂರಿಸಂ, ನೈಸರ್ಗಿಕ ಟೂರಿಸಂಗಳಿಗೆ ಪ್ರಾಶಸ್ತ್ಯ ನೀಡಲಾಗುವುದು ಎಂದು ಹೇಳಿದರು.
ಕರಾವಳಿ ಪ್ರದೇಶದ ಅಭಿವೃದ್ಧಿಗೆ ಪೂರಕವಾಗಿ ಸಿಆರ್‌ಝೆಡ್ ಆದೇಶ ಕೇಂದ್ರ ಸರ್ಕಾರ ವಿನಾಯಿತಿ ನೀಡಿದ್ದು, ಕರಾವಳಿ ಭಾಗದ ಪ್ರವಾಸೋದ್ಯಮಕ್ಕೆ ದೊಡ್ಡ ಪ್ರಮಾಣದಲ್ಲಿ ಸಹಾಯವಾಗಲಿದೆ. ಕರಾವಳಿ ಪ್ರದೇಶದ ಪ್ರವಾಸೋದ್ಯಮಕ್ಕೆ ಪೂರಕವಾಗಿ ಕರಾವಳಿ ಅಭಿವೃದ್ಧಿ ಯೋಜನೆ ರೂಪಿಸಲಾಗುತ್ತಿದೆ ಎಂದರು.
500 ಕೋಟಿ ರೂ. ಯೋಜನೆ: ಪ್ರವಾಸೋದ್ಯಮ ಸಚಿವ ಆನಂದ್‌ಸಿಂಗ್ ಮಾತನಾಡಿ, ಕೇಂದ್ರ ಸರ್ಕಾರದ ಸ್ವದೇಶ ದರ್ಶನ 2.0 ಅಡಿ ರಾಜ್ಯದ ಐದು ಪ್ರವಾಸಿ ತಾಣಗಳನ್ನು ಅಂದಾಜು 500 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಗೊಳಿಸಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.
ಕೇಂದ್ರ ಸರ್ಕಾರದ ಪರ್ವತ ಮಾಲಾ ಯೋಜನೆಯಡಿ ರಾಜ್ಯದ 15 ಪ್ರವಾಸಿ ತಾಣಗಳಲ್ಲಿ ರೋಪ್ ವೇ ಅಳವಡಿಸಲು ಪ್ರಸ್ತಾವನೆ ಸಲ್ಲಿಸಲಾಗಿದ್ದು, ಸಾರ್ವಜನಿಕ-ಖಾಸಗಿ ಸಹಭಾಗಿತ್ವದಡಿ ನಂದಿಬೆಟ್ಟ ಮತ್ತು ಅಂಜನಾದ್ರಿಯಲ್ಲಿ ರೋಪ್‌ವೇ ಅಭಿವೃದ್ಧಿಗೊಳಿಸಲಾಗುತ್ತಿದೆ ಎಂದು ತಿಳಿಸಿದರು.
ಸಚಿವರಾದ ಗೋವಿಂದ ಕಾರಜೋಳ, ಆರ್.ಅಶೋಕ, ಕೆಎಸ್‌ಟಿಡಿಸಿ ಅಧ್ಯಕ್ಷ ಕಾ.ಪು.ಸಿದ್ಧಲಿಂಗಸ್ವಾಮಿ, ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿ ಎನ್.ವಿ.ಪ್ರಸಾದ್, ನಿರ್ದೇಶಕ ವೆಂಕಟೇಶ್, ಜೆಎಲ್‌ಆರ್ ಎಂಡಿ ಮನೋಜ್ ಕುಮಾರ್, ಕೆಎಸ್‌ಟಿಡಿಸಿ ಎಂಡಿ ಜಗದೀಶ್ ಉಪಸ್ಥಿತರಿದ್ದರು.
ಸ್ಥಳೀಯರಿಗೆ ಹೆಚ್ಚಿನ ಉದ್ಯೋಗಾವಕಾಶಕರಾವಳಿ ನಿಯಂತ್ರಣ ವಲಯದ ಪ್ರಸ್ತಾವನೆಗೆ ಅನುಮೋದನೆ ಪಡೆದ ದೇಶದ ಎರಡನೇ ಹಾಗೂ ದಕ್ಷಿಣ ಭಾರತದ ಮೊದಲ ರಾಜ್ಯ ಕರ್ನಾಟಕವಾಗಿದ್ದು, ರಾಜ್ಯದಲ್ಲಿ ಸಮುದ್ರ ತೀರ ಪ್ರದೇಶದ ಪ್ರವಾಸಿ, ವಾಣಿಜ್ಯೋದ್ಯಮದ ಚಟುವಟಿಕೆಗಳು ಗರಿಗೆದರಲಿವೆ. ಪ್ರವಾಸೋದ್ಯಮ ಅಭಿವೃದ್ಧಿ ಪಡಿಸಲು 17 ಜಿಲ್ಲೆ ಹಾಗೂ ಇತರೆ ಪ್ರಮುಖ ಪ್ರವಾಸಿತಾಣಗಳನ್ನು “ಆದ್ಯತಾ ಪ್ರವಾಸೋದ್ಯಮ ತಾಣಗಳು’ ಎಂದು ಗುರುತಿಸಿದ್ದು, ಇದರಿಂದಾಗಿ ಹೆಚ್ಚಿನ ಬಂಡವಾಳ ಹೂಡಿಕೆಯಾಗಲಿದ್ದು, ಸ್ಥಳೀಯರಿಗೆ ಹೆಚ್ಚಿನ ಉದ್ಯೋಗಾವಕಾಶಗಳು ದೊರೆಯಲಿವೆ ಎಂದು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಹೇಳಿದರು.