Advertisement

Bellary; ರಾಜ್ಯದ ಶಿಕ್ಷಣದ ಸ್ಥಿತಿ ಅಧೋಗತಿಗೆ ತಲುಪಿದೆ; ಎನ್.ರವಿಕುಮಾರ್

05:13 PM May 21, 2024 | Team Udayavani |

ಬಳ್ಳಾರಿ: ಮಧು ಬಂಗಾರಪ್ಪ ಅವರನ್ನು ಶಿಕ್ಷಣ ಸಚಿವರನ್ನಾಗಿ ಪಡೆಯುವುದಕ್ಕೆ ನಮ್ಮ ಮಕ್ಕಳು, ನಮ್ಮ ರಾಜ್ಯ ಏನು ಕರ್ಮ ಮಾಡಿತ್ತೋ ಎಂದು ಬಳ್ಳಾರಿಯಲ್ಲಿ ವಿಧಾನ ಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ವಾಗ್ದಾಳಿ ನಡೆಸಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಸಿಎಂ ಆದ ಮೇಲೆ ಶಿಕ್ಚಣದ ಸ್ಥಿತಿ ಅಧೋಗತಿಗೆ ತಲುಪಿದೆ. ಕಳೆದ ಬಾರಿ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಶೇ. 83 ಫಲಿತಾಂಶ ಬಂದಿತ್ತು. ಆದರೆ ಈ ಬಾರಿ ಕೇವಲ ಶೇ. 53 ಫಲಿತಾಂಶ ಬಂದಿದೆ, 33% ಕಡಿಮೆಯಾಗಿದೆ. ಇಷ್ಟೊಂದು ಫಲಿತಾಂಶ ಕುಸಿಯಲು ಕಾರಣ ಶಿಕ್ಷಣದ ಬಗ್ಗೆ ಕಾಳಜಿ ಇಲ್ಲದ ಸರ್ಕಾರ. ಇದಕ್ಕೆ ಯಾರು ಹೊಣೆ?  ಸಿದ್ದರಾಮಯ್ಯ ಉತ್ತರ ಕೊಡಬೇಕು ಎಂದರು.

ಶಿಕ್ಷಣದ ಗುಣಮಟ್ಟ ಅತ್ಯಂತ ಕಳೆಪೆಯಾಗಿದೆ. ಇದಕ್ಕೆ ಸಿದ್ದರಾಮಯ್ಯ ಸರ್ಕಾರ ಹಾಗು ಮಂತ್ರಿಗಳು ಹೊಣೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಯಾವ ಮೆರಿಟ್ ನೋಡಿ ಶಿಕ್ಷಣ ಖಾತೆ ಕೊಟ್ಟಿದ್ದಾರೆ, ದೇವರೆ ಕಾಪಾಡಬೇಕು. ಕಲ್ಯಾಣ ಕರ್ನಾಟಕದಲ್ಲಿ 17,796 ಶಿಕ್ಷಕರ ಕೊರತೆಯಿದೆ. ಆದರೆ ಕಾಂಗ್ರೆಸ್ ನವರು ಕಲ್ಯಾಣ ಕರ್ನಾಟಕ್ಕೆ ನ್ಯಾಯ ಒದಗಿಸುತ್ತೇವೆ ಎಂದಿದ್ದಾರೆ. ಶಿಕ್ಷಕರ ವರ್ಗಾವಣೆ ಬಗ್ಗೆ ಸರ್ಕಾರ ನಿರ್ಲಕ್ಷ್ಯ ಮಾಡುತ್ತಿದೆ. ಈ ಸರ್ಕಾರಕ್ಕೆ ಜನರೇ ಉತ್ತರ ಕೊಡುತ್ತಾರೆ ಎಂದು ರವಿಕುಮಾರ್ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next