Advertisement
ರಾಜ್ಯ ಸ್ವಯಂಸೇವಾ ಸಂಸ್ಥೆಗಳ ಒಕ್ಕೂಟ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಬೆಂಗಳೂರು ಹಾಗೂ ಸುಮಂಗಲಿ ಸೇವಾಶ್ರಮ ಬೆಂಗಳೂರು ಸಂಯುಕ್ತಾಶ್ರಯದಲ್ಲಿ ಬುಧವಾರ ಗಾಂಧಿ ಭವನದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಸ್ವಯಂಸೇವಾ ಸಂಸ್ಥೆಗಳ ಸಮಾವೇಶವನ್ನು ಉದ್ಘಾಟಿಸಿದ ಸಿಎಂ ಮಾತನಾಡಿದರು.
ರಾಜ್ಯದ ಗ್ರಾಮೀಣ ಹಾಗೂ ನಗರ ಪ್ರದೇಶದ ಸ್ತ್ರೀಶಕ್ತಿಯ ಸಬಲೀಕರಣ ಆಗಬೇಕು. ನಮ್ಮ ಸ್ಥಳೀಯಮಟ್ಟದ ಸಂಘಸಂಸ್ಥೆಗಳ ಉತ್ಪನ್ನಗಳು ವಿದೇಶದಲ್ಲಿ ಮಾರಾಟವಾಗಬೇಕು ಎನ್ನುವ ಆಸೆ ಸರಕಾರದ್ದು. ಆಗ ನಮ್ಮ ಆರ್ಥಿಕತೆಗೆ ಬಹಳ ಶಕ್ತಿ ಬರುತ್ತಿದೆ ಎಂದರು.
Related Articles
Advertisement
ಆದಾಯ-ರಾಜ್ಯ 3ನೇ ಸ್ಥಾನದೇಶದ ತಲಾವಾರು ಆದಾಯದಲ್ಲಿ ರಾಜ್ಯ 3ನೇ ಸ್ಥಾನದಲ್ಲಿದೆ. ಇದಕ್ಕೆ ಕೇವಲ ರಾಜ್ಯದ ಶೇ. 30 ಜನತೆ ಮಾತ್ರ ಕೊಡುಗೆ ನೀಡುತ್ತಿದ್ದು, ಶೇ. 70 ಜನತೆ ಜೀವನೋಪಾಯಕ್ಕಾಗಿ ದುಡಿಯುತ್ತಿದ್ದಾರೆ. ಈ ಶೇ. 70 ಜನರಿಗೆ ಆರ್ಥಿಕ ನೆರವು, ಮಾರುಕಟ್ಟೆ ವ್ಯವಸ್ಥೆಗಳನ್ನು ನೀಡುವ ಮೂಲಕ ಶ್ರಮಿಕ ವರ್ಗದ ಜನರು ರಾಜ್ಯದ ಆರ್ಥಿಕತೆಗೆ ಕೊಡುಗೆ ನೀಡುವಂತಾಗುತ್ತದೆ ಎಂದರು. ರಫ್ತು-9ನೇ ಸ್ಥಾನ: ಶೋಭಾ
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿ, ದೇಶದ ಪ್ರಗತಿಯಲ್ಲಿ ಸ್ವಯಂಸೇವಾ ಸಂಸ್ಥೆಗಳ ಪಾತ್ರ ದೊಡ್ಡದಿದೆ. ಕೋವಿಡ್ ಅನಂತರ ಹಲವರು ಕೃಷಿಯತ್ತ ಮುಖ ಮಾಡಿದ್ದಾರೆ. ಇದರ ಪರಿಣಾಮವಾಗಿ ಕೃಷಿ ಉತ್ಪಾದನೆಯನ್ನು ದೇಶವು ಗುರಿ ಮೀರಿ ಸಾಧನೆ ಮಾಡಿದೆ. ಶೇ. 70ರಷ್ಟು ಖಾದ್ಯ ತೆಲವನ್ನು ಮಾತ್ರ ಆಮದು ಮಾಡಿಕೊಳ್ಳಲಾಗುತ್ತಿದೆ. ಕೃಷಿ ಉತ್ಪನ್ನಗಳ ರಫ್ತು ಪ್ರಮಾಣದಲ್ಲಿ ದೇಶ 9ನೇ ಸ್ಥಾನದಲ್ಲಿದೆ ಎಂದರು.