ಬೆಂಗಳೂರು: ರಾಜ್ಯವ್ಯಾಪಿ ಶೀಘ್ರದಲ್ಲಿಯೇ ನಮ್ಮ ಕ್ಲಿನಿಕ್ ಆರಂಭಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿದರು.
ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ ಶನಿವಾರ ಹಮ್ಮಿಕೊಂಡಿದ್ದ ರಕ್ತದಾನ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮುಂದಿನ ಒಂದೆರಡು ತಿಂಗಳಲ್ಲಿ ರಾಜ್ಯವ್ಯಾಪಿ ನಮ್ಮ ಕ್ಲಿನಿಕ್ ಗಳನ್ನು ಆರಂಭಿಸುವ ಪ್ರಕ್ರಿಯೆ ಆರಂಭವಾಗಲಿದೆ. ಒಟ್ಟಾರೆ 438 ನಮ್ಮ ಕ್ಲಿನಿಕ್ ಪ್ರಾರಂಭಿಸಲಾಗುವುದು. ಇದರಲ್ಲಿ ರಾಜಧಾನಿ ಬೆಂಗಳೂರಿನಲ್ಲೇ 243 ನಮ್ಮ ಕ್ಲಿನಿಕ್ ಗಳು ಆರಂಭವಾಗಲಿದೆ ಎಂದರು.
ಇದನ್ನೂ ಓದಿ:ಸಾಲ ವಸೂಲಿ; ಗರ್ಭಿಣಿ ಮೇಲೆ ಟ್ರ್ಯಾಕ್ಟರ್ ಹತ್ತಿಸಿ ಹತ್ಯೆಗೈದ ಫೈನಾನ್ಸ್ ಕಂಪನಿ ಅಧಿಕಾರಿಗಳು
ಬಡಜನರ ಇರುವ ಕಡೆಗಳಲ್ಲಿ ಆರೋಗ್ಯ ಸವಲತ್ತು ದೊರೆಯಬೇಕು ಎಂಬುವುದು ಸರ್ಕಾರದ ಉದ್ದೇಶವಾಗಿದೆ. ಆ ಹಿನ್ನೆಲೆಯಲ್ಲಿ ಎಲ್ಲೆಲ್ಲಿ ಕೊಳಚೆ ಪ್ರದೇಶಗಳು ಇವೆಯೊ ಅಲ್ಲಿ ನಮ್ಮ ಕ್ಲಿನಿಕ್ ತೆರೆಯಲು ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.
ಮುಂದಿನ 15 ದಿನಗಳಲ್ಲಿ 1 ಕೋಟಿ ಆಯಿಷ್ಮಾನ್ ಕಾರ್ಡ್ ನೀಡುವ ಗುರಿಯನ್ನು ಹೊಂದಲಾಗಿದೆ.ಜತೆ 100 ದಿನಗಳಲ್ಲಿ 5 ಕೋಟಿ ಆಯಿಷ್ಮಾನ್ ಕಾರ್ಡ ನೀಡುವ ಗುರಿಯನ್ನು ಆರೋಗ್ಯ ಇಲಾಖೆ ಹೊಂದಿದೆ ಎಂದರು