Advertisement
ಕರ್ನಾಟಕ ಹೈಕೋರ್ಟ್‌ನ ಕಾನೂನು ಸೇವಾ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರ ಸಭಾ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಪ್ರಾಧಿಕಾರದ ನೂತನ ಕಾರ್ಯನಿರ್ವಾಹಕ ಅಧ್ಯಕ್ಷರೂ ಆಗಿರುವ ಹೈಕೋರ್ಟ್‌ನ ಹಿರಿಯ ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಅವರು ಈ ಬಗ್ಗೆ ಮಾಹಿತಿ ನೀಡಿದರು. ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜೈಶಂಕರ್, ಉಪ ಕಾರ್ಯದರ್ಶಿ ರಾಘವೇಂದ್ರ ಶೆಟ್ಟಿಗಾರ್ ಇದ್ದರು.
ರಾಜ್ಯದ ಎಲ್ಲ ಜಿಲ್ಲಾ ನ್ಯಾಯಾಲಯಗಳಲ್ಲಿ ಬಾಕಿ ಇರುವ 19.93 ಲಕ್ಷ ಪ್ರಕರಣಗಳ ಪೈಕಿ 2.60 ಲಕ್ಷ ಪ್ರಕರಣಗಳನ್ನು ಲೋಕ ಅದಾಲತ್‌ನಲ್ಲಿ ಇತ್ಯರ್ಥಪಡಿಸಲು ಗುರುತಿಸಲಾಗಿದೆ. ಪ್ರಕರಣಗಳನ್ನು ಗುರುತಿಸುವ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಈ ಸಂಖ್ಯೆ ಇನ್ನೂ ಏರಿಕೆಯಾಗಬಹುದು. ಡಿ.9ರಂದು ಹೈಕೋರ್ಟ್‌ನ ಬೆಂಗಳೂರು, ಧಾರವಾಡ, ಕಲಬುರಗಿ ಪೀಠಗಳು ಸಹಿತ ರಾಜ್ಯದ ಎಲ್ಲ ಜಿಲ್ಲಾ ನ್ಯಾಯಾಲಯ ಮತ್ತು ತಾಲೂಕು ನ್ಯಾಯಾಲಯಗಳಲ್ಲಿ ಏಕಕಾಲಕ್ಕೆ ಸಾವಿರಕ್ಕೂ ಅಧಿಕ ವಿಚಾರಣ ಪೀಠಗಳಲ್ಲಿ ಲೋಕ್ ಅದಾಲತ್ ಕಲಾಪಗಳು ನಡೆಯಲಿವೆ.