ಹುಬ್ಬಳ್ಳಿ: ಮುಡಾ ಹಗರಣ ವಿರೋಧಿಸಿ ಬಿಜೆಪಿ-ಜೆಡಿಎಸ್ ಪಾದಯಾತ್ರೆ ನಡೆಸಿರುವ ಬೆನ್ನಲ್ಲೇ ರಾಜ್ಯಾದ್ಯಂತ ಸಿಎಂ ಸಿದ್ದರಾಮಯ್ಯ ಪರ ಅಹಿಂದ ಹಾಗೂ ಕುರುಬ ಸಮಾಜ ಬೀದಿಗಿಳಿದಿವೆ.
ಹಿಂದುಳಿದ ನಾಯಕನ ವಿರುದ್ಧ ಷಡ್ಯಂತ್ರ ಕೈ ಬಿಡದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ ನೀಡಿವೆ. ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಿರುವ ಸಮಾಜದ ಮುಖಂಡರು, ವಿಪಕ್ಷಗಳು ವಿನಾ ಕಾರಣ ಆರೋಪ ಹೊರಿಸಿ ಸಿದ್ದರಾಮಯ್ಯ ವರ್ಚಸ್ಸು ಕುಗ್ಗಿಸುವ ಕುತಂತ್ರ ನಡೆಸಿವೆ. ಸಿಎಂ ಸ್ಥಾನದಿಂದ ಕೆಳಗಿಳಿಸಿ ಸರಕಾರ ಅತಂತ್ರಗೊಳಿ
ಸಲು ತಂತ್ರ ಮಾಡುತ್ತಿವೆ.
ಕುರುಬ ಸಮಾಜದಿಂದ ಕಲಬುರಗಿ, ಗದಗ, ಬೀದರ್, ಅಹಿಂದ ಸಂಘಟನೆಗಳ ಒಕ್ಕೂಟದಿಂದ ರಾಯಚೂರು, ವಿಜಯನಗರ, ಬಳ್ಳಾರಿ, ಹಾವೇರಿ, ಗದಗ, ಕಲಬುರಗಿ, ಶೋಷಿತ ಸಮುದಾಯಗಳ ಒಕ್ಕೂಟದಿಂದ ದಾವಣಗೆರೆ, ಚಿತ್ರದುರ್ಗ ಹಾಗೂ ಸಿದ್ದರಾಮಯ್ಯ ಅಭಿಮಾನಿ ಬಳಗದಿಂದ ಬಾಗಲಕೋಟೆಯಲ್ಲಿ ಪ್ರತಿಭಟಿಸಲಾಗಿದೆ. ಮಾನವ ಸರಪಳಿ ನಡೆಸಿ ಆಕ್ರೋಶ ವ¤ಕ್ತಪಡಿಸಿದ್ದಲ್ಲದೇ ರಾಜ್ಯಪಾಲರು, ರಾಷ್ಟ್ರಪತಿಗಳಿಗೆ ಮನವಿ ರವಾನಿಸಿದ್ದಾರೆ.