Advertisement
ದೇವೇಗೌಡರಿಗೆ ಖುದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಆಹ್ವಾನ ಕೊಟ್ಟಿದ್ದಾರೆ ಎಂದು ಬಿಜೆಪಿ ಸಮರ್ಥಿಸಿಕೊಂಡಿದ್ದು,ಮುಖ್ಯಮಂತ್ರಿ ಹೆಸರಿನಲ್ಲಿ ಬರೆದ ಪತ್ರ ಜಾಲತಾಣಗಳಲ್ಲಿ ಓಡಾಡುತ್ತಿದೆ.
Related Articles
Advertisement
ಅಪಮಾನ ಮಾಡಿಲ್ಲ:
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ಅಪಮಾನ ಮಾಡುವಂತಹ ಕೆಲಸವನ್ನು ಸರ್ಕಾರವಾಗಲಿ, ನಮ್ಮ ಪಕ್ಷವಾಗಲಿ ಮಾಡಿಲ್ಲ. ಮುಖ್ಯಮಂತ್ರಿ ಬೊಮ್ಮಾಯಿ, ಪತ್ರ ಬರೆದು, ದೂರವಾಣಿ ಕರೆ ಮೂಲಕ ಕಾರ್ಯಕ್ರಮಕ್ಕೆ ಬರಬೇಕೆಂದು ಮನವಿ ಮಾಡಿದ್ದರು. ದೇವೇಗೌಡರಿಗೆ ಎಲ್ಲೂ ಕೂಡ ಅವಮಾನ ಆಗುವ ರೀತಿ ನಡೆದುಕೊಂಡಿಲ್ಲ. ಪ್ರತಿಮೆ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿತ್ತು. ಅದೇ ರೀತಿ ಉದ್ಘಾಟನಾ ಕಾರ್ಯಕ್ರಮಕ್ಕೂ ಆಹ್ವಾನಿಸಲಾಗಿದೆ. ಇಡೀ ಕಾರ್ಯಕ್ರಮದ ಬಗ್ಗೆ ನಿರ್ಮಲಾನಂದನಾಥ ಶ್ರೀಗಳು ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಕೆಲವರು ರಾಜಕೀಯಕ್ಕೋಸ್ಕರ ತಪ್ಪು ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದು ಅಶ್ವಥ್ ನಾರಾಯಣ ಸಮರ್ಥಿಸಿಕೊಂಡಿದ್ದಾರೆ.
ಅಶೋಕ್ ವಿವಾದ:
ಕಾರ್ಯಕ್ರಮ ಮುಗಿದ ಬಳಿಕ ಕೆಂಪೇಗೌಡರ ಪ್ರತಿಮೆ ಬಳಿ ಕಂದಾಯ ಸಚಿವ ಆರ್.ಅಶೋಕ್ ಫೋಟೋ ತೆಗೆಯುವ ವೇಳೆ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಸ್ವಾಮೀಜಿಗಳ ಹಗೆಲ ಮೇಲೆ ಕೈ ಹಾಕಿರುವುದು ವಿವಾದಕ್ಕೆ ಕಾರಣವಾಗಿದೆ.
ಇದಕ್ಕೆ ಕಿಡಿಕಾರಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಶ್ರೀಗಳ ಬಗ್ಗೆ ಸಂಸ್ಕಾರವಿಲ್ಲದವರಿಂದ ಇನ್ನೇನು ನಿರೀಕ್ಷೆ ಮಾಡುವುದು. ಎಲ್ಲವನ್ನು ಹಣದಿಂದಲೇ ಅಳೆಯುವವರಿಗೆ ಧರ್ಮ ಗುರುಗಳ ಬಗ್ಗೆ ಗೊತ್ತಿಲ್ಲದಿರುವುದು ದುರದೃಷ್ಟಕರ ಎಂದು ಪರೋಕ್ಷವಾಗಿ ಅಶೋಕ್ ವಿರುದ್ಧ ಅಸಮಾಧಾನ ಹೊರಹಾಕಿದರು.