Advertisement

ಕೆಂಪೇಗೌಡರ ಪ್ರತಿಮೆ: ಮೃತ್ತಿಕೆ ಸಂಗ್ರಹ ಅಭಿಯಾನ ವಾಹನಗಳಿಗೆ ಚಾಲನೆ

01:58 PM Oct 28, 2022 | Team Udayavani |

ಮೈಸೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅನಾವರಣಗೊಳ್ಳಲಿರುವ ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆಯ ಆವರಣದ ಉದ್ಯಾನಕ್ಕೆ ಪವಿತ್ರ ಮೃತ್ತಿಕಾ (ಮಣ್ಣು) ಬಳಸುವ ಉದ್ದೇಶದಿಂದ   ಮೈಸೂರಿಗೆ ಆಗಮಿಸಿದ ಕೆಂಪೇಗೌಡ ರಥಕ್ಕೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಚಾಮುಂಡೇಶ್ವರಿ ದೇವಸ್ಥಾನದ ಆವರಣದಲ್ಲಿ ಚಾಲನೆ ನೀಡಿದರು.

Advertisement

ಬನ್ನಿ ನಾಡ ಕಟ್ಟೋಣ ಎಂಬ ಸಂದೇಶ ಹೊತ್ತು ಬಂದ ರಥವನ್ನು ಚಾಮುಂಡಿ ಬೆಟ್ಟದಲ್ಲಿ ಪೂರ್ಣ ಕುಂಬದೊಂದಿಗೆ ಸ್ವಾಗತಿಸಲಾಯಿತು.

ಈ ವೇಳೆ ಮಾತನಾಡಿದ ಸಚಿವರು ಕೆಂಪೇಗೌಡ ಅವರ 108 ಅಡಿ ಎತ್ತರದ ಪ್ರತಿಮೆಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ‌ ಅವರು ನವೆಂಬರ್ 11ರಂದು ಅನಾವರಣಗೊಳಿಸಲಿದ್ದಾರೆ. ಉದ್ಯಾನಕ್ಕೆ ಜಿಲ್ಲೆಯ ನಾನಾ ಭಾಗಗಳಿಂದ ಪವಿತ್ರ ಮಣ್ಣು ಸಂಗ್ರಹಿಸಲಾಗುತ್ತದೆ. ಇದೊಂದು ಐತಿಹಾಸಿಕ ಕಾರ್ಯಕ್ರಮ ಎಂದರು.

ಆರೋಗ್ಯ ಸಚಿವ ಡಾ. ಕೆ.ಸುಧಾಕರ್, ಶಾಸಕ ನಾಗೇಂದ್ರ, ರಾಮದಾಸ್, ಸಂಸದ ಪ್ರತಾಪ್ ಸಿಂಹ ಸೇರಿದಂತೆ ನಾನಾ ನಿಗಮ ಮಂಡಳಿಗಳ ಅಧ್ಯಕ್ಷರು, ಮುಖಂಡರು ಜೊತೆಯಲ್ಲಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next