Advertisement

ಬೆಳಗಾವಿಯಲ್ಲಿ ಉದ್ವಿಗ್ನಗೊಂಡ ಪರಿಸ್ಥಿತಿ: ಸಂಗೊಳ್ಳಿ ರಾಯಣ್ಣ ಪ್ರತಿಮೆ‌ ಧ್ವಂಸ

08:42 AM Dec 18, 2021 | Team Udayavani |

ಬೆಳಗಾವಿ: ಬೆಳಗಾವಿಯಲ್ಲಿ ಮಧ್ಯರಾತ್ರಿ ದುಷ್ಕರ್ಮಿಗಳು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸ ಮಾಡಿದ್ದು, ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

Advertisement

ಇಲ್ಲಿನ ಅನಗೋಳದ ಕನಕದಾಸ ಗಲ್ಲಿಯ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಧ್ವಂಸಗೊಳಿಸಿದ್ದು, ಪರಿಸ್ಥಿತಿ ಬಿಗಡಾಯಿಸಿದೆ. ಕನ್ನಡ ಸಂಘಟನೆಗಳ ಕಾರ್ಯಕರ್ತರು ಟಿಳಕವಾಡಿ ಪೊಲೀಸ್ ಠಾಣೆ ಎದುರು ಪ್ರತಿಮೆ ಇಟ್ಟುಕೊಂಡು ಪ್ರತಿಭಟನೆ ನಡೆಸುತ್ತಿದ್ದಾರೆ. ತಪ್ಪಿತಸ್ಥರನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.

ಬೆಂಗಳೂರಿನಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ಕಪ್ಪು ಮಸಿ ಬಳಿದಿರುವುದನ್ನು ಖಂಡಿಸಿ ಶುಕ್ರವಾರ ರಾತ್ರಿ ಕೆಲ ಹಿಂದೂ ಸಂಘಟನೆಗಳ ಕಾರ್ಯಕರ್ತರು ಸಂಭಾಜಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದ್ದರು. ‌ಪೊಲೀಸರ ಜೀಪ್ ಹಾಗೂ ಸರ್ಕಾರಿ ವಾಹನಗಳು ಸೇರಿ 20ಕ್ಕೂ ಹೆಚ್ಚು ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಗುಂಪು ಚದುರಿಸಿದ್ದರು.

ಇದನ್ನೂ ಓದಿ:ಬೆಳಗಾವಿ ಕಲ್ಲು ತೂರಾಟ : ಪುಂಡರನ್ನು ಸರ್ಕಾರ ಸುಮ್ಮನೆ ಬಿಡಲ್ಲ : ಆರಗ ಜ್ಞಾನೇಂದ್ರ

ಮಧ್ಯರಾತ್ರಿ ದುಷ್ಕರ್ಮಿಗಳು ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸಗೊಳಿಸಿದ್ದಾರೆ. ನಗರದಲ್ಲಿ ಸೆಕ್ಶನ್ 144 ಕಲಂ ಜಾರಿಗೊಳಿಸಲಾಗಿದೆ. ಹೆಚ್ಚಿನ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next